spot_img
Thursday, April 23, 2026
spot_img

”ಕನ್ನಡ ನಡೆನುಡಿ ಅರ್ಥಪೂರ್ಣ ಕಾರ್ಯಕ್ರಮ”-ಸದಾಶಿವ ಕೆಂಚನೂರು

kundapur: “ಕನ್ನಡ ನಡೆನುಡಿ ಒಂದು ಅರ್ಥಪೂರ್ಣ ಕಾರ್ಯಕ್ರಮ, ಇದು ಮಕ್ಕಳನ್ನು ಸೃಜನಶೀಲ ಚಟುವಟಿಕೆಯಲ್ಲಿ ತೊಡಗಿಸುವಲ್ಲಿ ಸಹಕಾರ ಮಾಡುತ್ತದೆ ಎಂದು ವಂಡ್ಸೆಯ ಸ.ಮಾ.ಹಿ.ಪ್ರಾ.ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಸದಾಶಿವ ಕೆಂಚನೂರು ಹೇಳಿದರು.

ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಇಲ್ಲಿ ಇತ್ತೀಚೆಗೆ ನಡೆದ ಕನ್ನಡ ನಡೆನುಡಿ ಸರಣಿ ಸಾಹಿತ್ಯ ರಚನಾ ಕಮ್ಮಟದ ನಾಲ್ಕನೇಯ ಕಾರ್ಯಕ್ರಮ ಕಥಾ ರಚನ ಕಮ್ಮಟದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ಕಮ್ಮಟದಲ್ಲಿ ಅವರು ಮಕ್ಕಳಿಗೆ ವಿವಿಧ ರೀತಿಯಲ್ಲಿ ಕಥೆಗಳನ್ನು ಹೇಗೆ ರಚಿಸಬಹುದು, ಒಂದು ಕಥೆಯನ್ನು ಬೇರೆ ಬೇರೆ ರೀತಿಯಲ್ಲಿ ಭಿನ್ನವಾಗಿ ಹೇಗೆ ನಿರೂಪಿಸಬಹುದು ಎಂಬುದನ್ನು ಉದಾಹರಣೆ ಸಹಿತ ಮಕ್ಕಳಿಗೆ ಮನದಟ್ಟು ಮಾಡಿ ಮಕ್ಕಳಿಗೆ ಕಥೆ ಬರೆಯಲು ಪ್ರೇರಣೆ ನೀಡಿದರು.

ಈ ಸಂದರ್ಭದಲ್ಲಿ ಮಕ್ಕಳಿಗೆ ಕನ್ನಡ ನಾಡು ನುಡಿಯ ಕುರಿತಾದ ಚಲನ ಚಿತ್ರಗೀತೆಯ ಗಾಯನ ಸ್ಪರ್ಧೆ ಏರ್ಪಡಿಸಲಾಗಿತ್ತು. ಇದೇ ಸಂದರ್ಭದಲ್ಲಿ ೪ನೇ ತರಗತಿ ವಿದ್ಯಾರ್ಥಿಗಳು ಸಿದ್ಧಪಡಿಸಿದ ಗೋಡೆ ಪತ್ರಿಕೆ ‘ಗುಬ್ಬಚ್ಚಿ ಗೂಡು’ ಇದನ್ನು ಸಂಪನ್ಮೂಲ ವ್ಯಕ್ತಿ ಸದಾಶಿವ ಕೆಂಚನೂರು ಅನಾವರಣ ಮಾಡಿದರು.

ಶಾಲಾ ಮುಖ್ಯ ಶಿಕ್ಷಕಿ ಗಿರಿಜಾ ಡಿ. ಮತ್ತು ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀಮತಿ ಶ್ರುತಿ ಶೆಟ್ಟಿ, ಸಹ ಶಿಕ್ಷಕಿ ಸಂಧ್ಯಾ ಕೆ., ಅತಿಥಿ ಶಿಕ್ಷಕಿ ಪ್ರಮೀಳಾ, ಗೌರವ ಶಿಕ್ಷಕಿ ನಯನ ಮತ್ತು ಮಕ್ಕಳ ಪೋಷಕರಾದ ಕೆ ಎಮ್ ಎಫ್ ಉದ್ಯೋಗಿ ಮಂಜುನಾಥ ಉಪಸ್ಥಿತರಿದ್ದರು. ಸಹ ಶಿಕ್ಷಕ ಆನಂದ ಕುಲಾಲ ಕಾರ್ಯಕ್ರಮ ಸಂಯೋಜಿಸಿ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!