Sunday, September 8, 2024

ಉಲ್ಬಣಿಸಿದ ಕೊರೋನಾ ಆತಂಕ : ಗಡಿ ಭಾಗಗಳಲ್ಲಿ ಕಟ್ಟೆಚ್ಚರ | ಚೆಕ್‌ ಪೋಸ್ಟ್‌ಗಳಲ್ಲಿ ಕೊರೋನಾ ತಪಾಸಣೆ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಪಕ್ಕದ ರಾಜ್ಯ ಕೇರಳದಲ್ಲಿ ಕೊರೋನಾ ಸೋಂಕು ಜೆಎನ್.1 ರೂಪಾಂತರಿ ಪ್ರಕರಣ ವರದಿಯಾದ ನಂತರ ಕರ್ನಾಟಕದಲ್ಲಿ ಅದರಲ್ಲೂ ರಾಜ್ಯದ ಗಡಿಭಾಗದಲ್ಲಿ ಹೈ ಅಲರ್ಟ್ ಆಗಿರುವ ಅಧಿಕಾರಿಗಳು ಚೆಕ್ ಪೋಸ್ಟ್ ಗಳಲ್ಲಿ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಿ ಬಿಡುತ್ತಿದ್ದಾರೆ.

ಕೇರಳದಿಂದ ರಾಜ್ಯಕ್ಕೆ ಬರುತ್ತಿರುವ ಎಲ್ಲಾ ಖಾಸಗಿ ವಾಹನಗಳನ್ನು ತೀವ್ರ ನಿಗಾ ವಹಿಸಿ ತಪಾಸಣೆ ಮಾಡಲಾಗುತ್ತಿದೆ. ಆರೋಗ್ಯ ಇಲಾಖೆಯ ಸೂಚನೆಯಂತೆ ತಪಾಸಣೆ ಮಾಡಲಾಗುತ್ತಿದೆ.

ಕೊರೋನಾ ಸೋಂಕಿನ ಲಕ್ಷಣ ಕಂಡುಬಂದಲ್ಲಿ ಕೊರೋನಾ ಟೆಸ್ಟ್‌ ಮಾಡಿಕೊಳ್ಳಬೇಕು ಎಂದು ಈಗಾಗಲೇ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ವಯಸ್ಕರು ಹಾಗೂ ಶೀತ, ಕೆಮ್ಮು ಕೊರೋನಾ ಲಕ್ಷಣ ಉಳ್ಳವರು ಕಡ್ಡಯಾವಾಗಿ ಮಾಸ್ಕ್‌ ಧರಿಸುವುದಕ್ಕೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!