spot_img
Thursday, April 23, 2026
spot_img

ಕೋವಿಡ್-19 ಜೆಎನ್.1 ರೂಪಾಂತರಿ ಸೋಂಕು ಪತ್ತೆ ಹಿನ್ನೆಲೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಜನಪ್ರತಿನಿಧಿ ವಾರ್ತೆ(ಬೆಂಗಳೂರು) : ಪಕ್ಕದ ರಾಜ್ಯ ಕೇರಳದಲ್ಲಿ ಕೋವಿಡ್-19 ಜೆಎನ್.1 ರೂಪಾಂತರಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತೆ ಹಾಗೂ ಪೂರ್ವಭಾವಿ ಕ್ರಮಗಳ ಕುರಿತು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡಿರುವ ರಾಜ್ಯದ ಗಡಿ ಭಾಗದ ಜಿಲ್ಲೆಗಳಲ್ಲಿ ಅಗತ್ಯ ಪ್ರಮಾಣದ ಪರೀಕ್ಷೆ ನಡೆಸುವುದು, ವರದಿ ಸಲ್ಲಿಸುವುದು ಅಗತ್ಯವಾಗಿದೆ. ಆದರೆ, ಸರ್ವೇಕ್ಷಣೆ ಹೆಚ್ಚಳ ಅಥವಾ ನಿರ್ಬಂಧ ಹೇರುವ ಅವಶ್ಯಕತೆಯಿರುವುದಿಲ್ಲ.ಸರ್ಕಾರಿ, ಖಾಸಗಿ ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಎಲ್ಲಾ SARI ಪ್ರಕರಣಗಳು ಹಾಗೂ 20 ಐಎಲ್ ಐ ಪ್ರಕರಣಗಳ ಪೈಕಿ 1 ಐಎಲ್ ಐ ಪ್ರಕರಣವನ್ನು ಕೋವಿಡ್-19 ಪರೀಕ್ಷೆಗೆ  ಒಳಪಡಿಸಬೇಕು ಎಂದು ಸುತ್ತೋಲೆ ಹೊರಡಿಸಿದೆ. 

ಅಂತಾರಾಷ್ಟ್ರೀಯ ಪ್ರಯಾಣದ ಹಿನ್ನೆಲೆಯಿದ್ದು, ಕೋವಿಡ್-19 ಸೋಂಕಿನ ಲಕ್ಷಣ ಹೊಂದಿರುವವರು, ಗುಂಪು ಗುಂಪಾಗಿ ಸೇರುವ ಪ್ರಕರಣಗಳು ಹಾಗೂ ಮರಣಗಳು ವರದಿಯಾಗುವ ಸಂದರ್ಭದಲ್ಲಿ ಅಗತ್ಯ ಸಂಖ್ಯೆಯ ಮಾದರಿಗಳನ್ನು ಜಿನೋಮ್ ಸಿಕ್ವೇನ್ಸಿಂಗ್ ಪರೀಕ್ಷೆಗೆ ರವಾನಿಸಬೇಕು ಎಂದು ಸೂಚಿಸಿದೆ.

ತೀವ್ರ ಸ್ವರೂಪದ ರೋಗ ಲಕ್ಷಣ ಹೊಂದಿದವರು, ಆಸ್ಪತ್ರೆಗೆ ದಾಖಲಾದ ಪ್ರಕರಣಗಳು, SARI ಪ್ರಕರಣಗಳು ಹಾಗೂ ಸುಧೀರ್ಘ ಅವಧಿಗೆ ಆಸ್ಪತ್ರೆಗೆ ದಾಖಲಾದ ಪ್ರಕರಣಗಳು, ಕೋವಿಡ್ ಲಸಿಕೆಯ ಎರಡು ಡೋಸ್ ವ್ಯಾಕ್ತಿನ್ ಪಡೆದ ನಂತರವೂ ಸೋಂಕು ಮೃತಪಟ್ಟವರು, ಕೋವಿಡ್ -19 ಮರಣ ಪ್ರಕರಣಗಳು, ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ವರದಿಯಾಗುವ 25ಕ್ಕಿಂತ ಕಡಿಮೆ CT Value ಇರುವ ಮಾದರಿಗಳನ್ನು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಗೆ ಜಿನೋಮ್ ಸಿಕ್ವೇನ್ಸಿಂಗ್ ಪರೀಕ್ಷೆಗೆ ಕಳುಹಿಸುವ ನಿಟ್ಟಿನಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಅಗತ್ಯ ಸಮನ್ವಯ ವಹಿಸಬೇಕು ಎಂದು ನಿರ್ದೇಶಿಸಿದೆ.

ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಡಿಸೆಂಬರ್ 3-4ನೇ ವಾರದೊಳಗೆ ಅಣಕು ಪ್ರದರ್ಶನ ಪೂರ್ಣಗೊಳಿಸಲು ಸೂಚಿಸಲಾಗಿದೆ. 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!