spot_img
Thursday, April 23, 2026
spot_img

ಕೊರೋನಾ : JN.1 ತಳಿಯ ಆತಂಕದ ಬೆನ್ನಲ್ಲೇ ರಾಜ್ಯದಲ್ಲಿ ಕೊರೋನಾಗೆ ಮೊದಲ ಬಲಿ !

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ದೇಶದಲ್ಲಿ ಮತ್ತೆ ಕೊರೊನಾ ಆತಂಕ ಸೃಷ್ಟಿಸಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಾಗೂ ಹೊಸ ರೂಪಾಂತರಿ JN.1 ತಳಿ ಕೇರಳದಲ್ಲಿ ಪತ್ತೆಯಾಗಿದ್ದು, ಮತ್ತಷ್ಟು ಆತಂಕ ಮೂಡಿಸಿದೆ.

ಈ ಹಿನ್ನೆಲೆ ಇಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವಿಯಾ, ಎಲ್ಲ ರಾಜ್ಯಗಳ ಆರೋಗ್ಯ ಸಚಿವರ ಸಭೆ ನಡೆಸಿದರು. ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್  ಭಾಗಿಯಾಗಿದ್ದರು. ಸಭೆಯ ಬಳಿಕ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕಳೆದ ಮೂರು ತಿಂಗಳಿನಿಂದ ಜೆಎನ್​ 1 ಹೆಚ್ಚು ಕಾಣಿಸಿಕೊಂಡಿದೆ. ಆಗಸ್ಟ್ ನಲ್ಲಿ ಮೊದಲು ಕಾಣಿಸಿಕೊಂಡಿದ್ದು, ಇದು ಬಹು ವೇಗವಾಗಿ ಹರಡುವ ವೈರಾಣುವಾಗಿದೆ. ಆದರೆ ಮರಣ ಪ್ರಮಾಣ ದರ ಕಡಿಮೆ. ಭಯ ಸೃಷ್ಟಿ ಮಾಡೋ ಅವಶ್ಯಕತೆ ಇಲ್ಲ ಎಂದು ಹೇಳಿದರು.

ದೇಶದಲ್ಲಿ 20 ಪ್ರಕರಣಗಳು :

ನಮ್ಮ ದೇಶದಲ್ಲಿ ಒಟ್ಟು JN.1 20 ಪ್ರಕರಣಗಳಿವೆ. ಗೋವಾದಲ್ಲಿ 18 , ಕೇರಳ 1 , ಮಹಾರಾಷ್ಟ್ರದಲ್ಲಿ ಒಂದು ಪ್ರಕರಣ ಕಂಡು ಬಂದಿದೆ. ನಮ್ಮಲ್ಲಿ 772 ಟೆಸ್ಟಿಂಗ್ ಮಾಡಲಾಗಿದೆ.  ILI ಮತ್ತು SARI ಪ್ರಕರಣಗಳಿಗೆ  RT-PCT ಟೆಸ್ಟ್ ಕಡ್ಡಾಯವಾಗಿ ಮಾಡಬೇಕು.

ಕೇಂದ್ರ ಸರ್ಕಾರದ ಪ್ರಕಾರ 38 ರಾಷ್ಟ್ರಗಳಲ್ಲಿ ಹೊಸ ತಳಿ ಕಂಡು ಬಂದಿದ್ದು, ನಿಗಾವಹಿಸಲು ಸೂಚನೆ ನೀಡಲಾಗಿದೆ. ವೆಂಟಿಲೇಟರ್ ಮೇಂಟೇನೆನ್ಸ್ ಗೆ ಸಹಕಾರ ನೀಡಿ ಎಂದು ಸಭೆಯಲ್ಲಿ ಹೇಳಲಾಗಿದೆ. ಪೋರ್ಟಲ್ ಫಂಕ್ಷನ್ ಆಗದ ಕಾರಣ ಎಂಸಿಎಂಆರ್ ಮಾಹಿತಿ ಬರುತ್ತಿಲ್ಲ. ಅದನ್ನು ಶೀಘ್ರವೇ ಸರಿಪಡಿಸುವಂತೆ ಹೇಳಲಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

64 ವರ್ಷದ ವ್ಯಕ್ತಿಯ ಸಾವು :

ಐದು ದಿನಗಳ ಹಿಂದೆ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ 64 ವರ್ಷದ ಕೋಮಾರ್ಬಿಟಿ ಹಾಗೂ ಕೋವಿಡ್ ಪಾಸಿಟಿವ್ ಆಗಿದೆ. ಸಾವನ್ನಪ್ಪಿದ ವ್ಯಕ್ತಿ ಚಾಮರಾಜಪೇಟೆ ಮೂಲದವರಾಗಿದ್ದಾರೆ. ಮೃತ ವ್ಯಕ್ತಿಯ ಸ್ಯಾಂಪಲ್ ಜಿನೋವಿಕ್ ಸೀಕ್ವೆನ್ಸಿಂಗ್ ಕಳುಹಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಮಾರ್ಗಸೂಚಿಯ ಬಗ್ಗೆ ಕೇಂದ್ರ ಯಾವುದೇ ಮಾಹಿತಿ ನೀಡಿಲ್ಲ. ಆದ್ದರಿಂದ ಹೊಸ ವರ್ಷಾಚರಣೆಗೆ ಸದ್ಯಕ್ಕೆ ಯಾವುದೇ ನಿರ್ಬಂಧನೆ ಇಲ್ಲ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!