Sunday, September 8, 2024

ಜಿಲ್ಲೆ, ತಾಲೂಕು ಪಂಚಾಯತ್‌ ಚುನಾವಣೆ : ಕೊನೆಗೂ ಎರಡು ವಾರಗಳಲ್ಲಿ ಮೀಸಲಾತಿ ಅಂತಿಮಗೊಳಿಸಲಾಗುವುದು ಎಂದ ಸರ್ಕಾರ !

ಜಿಲ್ಲೆ, ತಾಲೂಕು ಪಂಚಾಯತ್‌ ಚುನಾವಣೆ : ಕ್ಷೇತ್ರಗಳ ಮರುವಿಂಗಡಣೆಗೆ ಸರ್ಕಾರ ಅಧಿಸೂಚನೆ ಪ್ರಕಟ  
ಜನಪ್ರತಿನಿಧಿ ವಾರ್ತೆ (ಬೆಂಗಳೂರು ) : ರಾಜ್ಯದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆ ಚುರುಕುಗೊಳಿಸಲಾಗಿದ್ದು, ಮೀಸಲಾತಿ ಕರಡು ಅಧಿಸೂಚನೆಗೆ ಆಕ್ಷೇಪಣೆಗಳನ್ನು ಆಲಿಸಿದ ನಂತರ ಮುಂದಿನ ಎರಡು ವಾರಗಳಲ್ಲಿ ಮೀಸಲಾತಿ ಅಂತಿಮಗೊಳಿಸಲಾಗುವುದು ಎಂದು ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ.

ಈ ಚುನಾವಣೆಗಳನ್ನು ನಡೆಸಲು ಎದುರಾಗಿದ್ದ ಅಡ್ಡಿ ಆತಂಕಗಳು ಒಂದೊಂದಾಗಿ ನಿವಾರಣೆಯಾಗುತ್ತಿದ್ದರೂ ಸರ್ಕಾರ ಚುನಾವಣೆ ನಡೆಸಲು ಮನಸ್ಸು ಮಾಡಿರಲಿಲ್ಲ. ಪಂಚಾಯತ್ ರಾಜ್ ಕ್ಷೇತ್ರ ಪುನರ್ ವಿಂಗಡನೆ ಆಯೋಗದ ಅಧ್ಯಕ್ಷ ಎ.ಆರ್.ಕಾಂಬ್ಳೆ ಅವರು ಕ್ಷೇತ್ರ ವಿಂಗಡಣೆಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದರು. 1,118 ಜಿಲ್ಲಾ ಪಂಚಾಯತ್ ಮತ್ತು 31 ಜಿಲ್ಲೆ ಮತ್ತು 236 ತಾಲ್ಲೂಕುಗಳಲ್ಲಿ 3,671 ತಾಲ್ಲೂಕು ಪಂಚಾಯತ್ ಕ್ಷೇತ್ರಗಳನ್ನು ಅಂತಿಮಗೊಳಿಸಲಾಗಿತ್ತು. ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ ಕ್ಷೇತ್ರಗಳ ಗಡಿ ಗುರುತಿಸುವ ಪ್ರಕ್ರಿಯೆ ಮುಗಿದಿದ್ದು, ಜುಲೈ ಕೊನೆಗೆ ಕರಡು ಹೊರಡಿಸಲಾಗುವುದು ಎಂದು ಸೀಮಾ ನಿರ್ಣಯ ಆಯೋಗ ಹೇಳುತ್ತಾ ಬಂದಿತ್ತು. ಆದರೆ ಈವರೆಗೆ ಕರಡು ಸಲ್ಲಿಸಲಾಗಿಲ್ಲ. ಇದರ ನಡುವೆ ಒಬಿಸಿ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಸವಾಲು ಸಹ ಸರಕಾರದ ಮುಂದಿತ್ತು. ಕೊನೆಗೂ ಈಗ ಸರ್ಕಾರ ಮೀಸಲಾತಿ ಅಂತಿಮಗೊಳಿಸಲಾಗುವುದೆಂದು ಹೇಳಿದೆ.

2021ರಲ್ಲಿ ರಾಜ್ಯ ಚುನಾವಣಾ ಆಯೋಗವು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ವಿಭಾಗೀಯ ಪೀಠವು ಇದನ್ನು ಪರಿಗಣಿಸುವುದಾಗಿ ಹೇಳಿದೆ. 

ಅವಧಿ ಮುಗಿದ ಜಿ.ಪಂ. ತಾ.ಪಂ.ಗಳಿಗೆ ನಿಗದಿತ ಸಮಯದಲ್ಲಿ ಚುನಾವಣೆ ನಡೆಸಲು ಅನುವು ಮಾಡಿಕೊಡಲು ಸರ್ಕಾರಕ್ಕೆೆ ನಿರ್ದೇಶನ ನೀಡಬೇಕು ಹಾಗೂ ರಾಜ್ಯದಲ್ಲಿ ತಾ.ಪಂ. ಹಾಗೂ ಜಿ.ಪಂ. ಕ್ಷೇತ್ರ ಮರುವಿಂಗಡಣೆಗೆ ಸೀಮಾ ನಿರ್ಣಯ ಆಯೋಗ ರಚಿಸಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಾಯಮೂರ್ತಿ ಪ್ರಸನ್ನ ಬಿ.ವರಾಲೆ ಹಾಗೂ ನ್ಯಾ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಒಂದು ವಾರದಲ್ಲಿ ಹೊರಡಿಸಲಿರುವ ಕರಡು ಮೀಸಲಾತಿ ಅಧಿಸೂಚನೆಗೆ ಆಕ್ಷೇಪಣೆಗಳನ್ನು ಸ್ವೀಕರಿಸುವ ಪ್ರಕ್ರಿಯೆ ಮುಗಿದ ಎರಡು ವಾರಗಳ ನಂತರ ಕ್ಷೇತ್ರಗಳ ಮೀಸಲಾತಿ ಅಧಿಸೂಚನೆಯನ್ನು ಅಂತಿಮಗೊಳಿಸಲಾಗುವುದು ಎಂದು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸಲ್ಲಿಸಿದರು.

ಚುನಾವಣಾ ಆಯೋಗವನ್ನು ಪ್ರತಿನಿಧಿಸುವ ಹಿರಿಯ ವಕೀಲ ಕೆ. ಎನ್. ಫಣೀಂದ್ರ ಅವರ ಸಲ್ಲಿಕೆಗಳನ್ನು ಆಲಿಸಿದ ನ್ಯಾಯಾಲಯ, ಅಡ್ವೊಕೇಟ್ ಜನರಲ್ ನೀಡಿದ ಯಾವುದೇ ಒಪ್ಪಂದದ ಉಲ್ಲಂಘನೆಯಾಗಿದ್ದರೆ ಸೂಕ್ತ ಕ್ರಮಗಳನ್ನು ಪ್ರಾರಂಭಿಸಲು ಅರ್ಜಿದಾರರು ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಹೇಳಿದರು.

ಮಾರ್ಚ್ 30, 2021 ರ ಅಂತಿಮ ಡಿಲಿಮಿಟೇಶನ್ ಅಧಿಸೂಚನೆ ಮತ್ತು ಕರಡು ಮೀಸಲಾತಿ ಅಧಿಸೂಚನೆಗಳ ಮುಂದುವರಿಕೆಗಾಗಿ ಎಲ್ಲಾ ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿಗಳಿಗೆ ಚುನಾವಣೆಗಳನ್ನು ಮಾಡಲು ಚುನಾವಣಾ ಆಯೋಗ ಈಗಾಗಲೇ ಪ್ರಾರಂಭಿಸಿರುವ ಪ್ರಕ್ರಿಯೆ ಮತ್ತು ಕ್ರಮಗಳನ್ನು ಘೋಷಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನಗಳನ್ನು ಕೋರಿ ಚುನಾವಣಾ ಆಯೋಗ 2021ರಲ್ಲಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದೆ. 

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕಾಯ್ದೆ, 2021ರ ಹೊರತಾಗಿಯೂ ನ್ಯಾಯ ಹಾಗೂ ಸಮಾನತೆಯ ಹಿತದೃಷ್ಟಿಯಿಂದ ಸಂವಿಧಾನದ 243-ಇ ಅಡಿಯಲ್ಲಿ ಆದೇಶವನ್ನು ಪ್ರಕ್ರಿಯೆಯು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕೂಡ ಹೇಳಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!