spot_img
Wednesday, January 22, 2025
spot_img

ವಿತ್ತ ಸಚಿವರನ್ನು ಭೇಟಿಯಾದ ಡಿಕೆಶಿ | ಭದ್ರಾ ಮೇಲ್ದಂಡೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು ಯೋಜನೆ ಸೇರಿ ಪ್ರಮುಖ ಯೋಜನೆಗಳ ಬಗ್ಗೆ ಚರ್ಚೆ

ಜನಪ್ರತಿನಿಧಿ ವಾರ್ತೆ (ನವ ದೆಹಲಿ ):  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಇಂದು(ಬುಧವಾರ) ಕೆಪಿಸಿಸಿ ಅಧ್ಯಕ್ಷರು ಹಾಗು ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಬೆಂಗಳೂರಿನಲ್ಲಿ ಭೇಟಿ ಮಾಡಿ, ಪ್ರಸ್ತುತ ಹಣಕಾಸಿನ ಕೊರತೆ ಎದುರಿಸುತ್ತಿರುವ ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳ ಅಭಿವೃದ್ಧಿ ಕೇಂದ್ರಿತ ದೃಷ್ಟಿಯನ್ನು ಸಾಕಾರಗೊಳಿಸುವ ಉದ್ದೇಶದಿಂದ ವಿವಿಧ ಯೋಜನೆಗಳಿಗೆ ಬೆಂಬಲ ಮತ್ತು ಸಹಕಾರವನ್ನು ಕೋರಿದ್ದಾರೆ.

ಮಾತ್ರವಲ್ಲದೇ, ಟನಲ್ ರಸ್ತೆ ನಿರ್ಮಾಣ, ಮೆಟ್ರೋ ಸಂಪರ್ಕ ವಿಸ್ತರಣೆ, ಭದ್ರಾ ಮೇಲ್ದಂಡೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು ಯೋಜನೆ ಸೇರಿದಂತೆ ಪ್ರಮುಖ ಯೋಜನೆಗಳಿಗೆ ಅನುಮತಿ ಹಾಗೂ ಹಣಕಾಸು ನೆರವಿನ ಬಗ್ಗೆ ಅವರು ಚರ್ಚಿಸಿದರು.

ಇನ್ನು, ಈ ಯೋಜನೆಗಳು ಕರ್ನಾಟಕದಲ್ಲಿ ಸಾರ್ವಜನಿಕ ಕಲ್ಯಾಣದ ಹಿತಾಸಕ್ತಿಯಿಂದ ಕೂಡಿದ್ದು, ಇವುಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಲು ಕೇಂದ್ರದಿಂದ ಸಹಾಯವನ್ನು ಪಡೆಯಲು ನಾವು ಆಶಿಸುತ್ತೇವೆ ಎಂದು ಅವರು ವಿತ್ತ ಸಚಿವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!