spot_img
Thursday, April 23, 2026
spot_img

ಸಂಸದರ ಅಮಾನತು ವಿರೋಧಿಸಿ ʼಇಂಡಿಯಾʼ ಟೀಮ್‌ ನಾಯಕರ ಪ್ರತಿಭಟನೆ : ಇದು ಪ್ರಜಾಪ್ರಭುತ್ವದ ಕೊಲೆ : ಅಮಾನತುಗೊಂಡ ಸಂಸದರ ಆರೋಪ

ಜನಪ್ರತಿನಿಧಿ ವಾರ್ತೆ (ನವ ದೆಹಲಿ) :  ಸಂಸತ್‌ ನ ಭದ್ರತಾ ಲೋಪವನ್ನು ಪ್ರಶ್ನಸಿದ ಸಂಸದರನ್ನು ಸಾಮೂಹಿಕ ಅಮಾನತುಗೊಳಿಸಿರುವುದನ್ನು ವಿರೋಧಿಸಿ ʼಇಂಡಿಯಾʼ ಮೈತ್ರಿಕೋಟದ  ಸಂಸದರು  ಇಂದು(ಗುರುವಾರ) ಸಂಸತ್ ಭವನದಿಂದ ದೆಹಲಿಯ ವಿಜಯ್ ಚೌಕ್‌ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಲೋಕಸಭೆಯ 97 ಮತ್ತು ರಾಜ್ಯಸಭೆಯ 46 ಸೇರಿದಂತೆ ಅಮಾನತುಗೊಂಡ ಸಂಸದರು ಡಿಸೆಂಬರ್ 13 ರಂದು ಸಂಭವಿಸಿದ ಬಾರ ದೊಡ್ಡ ಮಟ್ಟದ ಭದ್ರತಾ ಉಲ್ಲಂಘನೆಯ ಬಗ್ಗೆ ಚರ್ಚೆ ನಡೆಸಬೇಕು ಎಂದಿದ್ದನ್ನೇ ಕಲಾಪಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ, ಕಲಾಪದ  ಉಳಿದ ಅವಧಿಗೆ ಅವರನ್ನು ಅಮಾನತು ಮಾಡಲಾಗಿದೆ.

ಸಂಸತ್ತಿನಲ್ಲಿ ಭದ್ರತಾ ಲೋಪದ ಬಗ್ಗೆ ಮಾತನಾಡದ ಕಾಂಗ್ರೆಸ್ ಮುಖ್ಯಸ್ಥ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರತಿಪಕ್ಷದ ಸಂಸದರು ಈ ವಿಷಯವನ್ನು ಸದನದಲ್ಲಿ ಚರ್ಚೆಗೆ ತರಲು ಪ್ರಯತ್ನಿಸಿದಾಗಲೂ ಆಡಳಿತ ಪಕ್ಷದ ಸಂಸದರು ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ಲೋಕಸಭೆ ಮತ್ತು ರಾಜ್ಯಸಭೆಯಿಂದ 143 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ವಿರೋಧ ಪಕ್ಷಗಳ ನಾಯಕರು ಸಂಸತ್ತಿನಿಂದ ವಿಜಯ್ ಚೌಕ್‌ ತನಕ ಪ್ರತಿಭಟನಾ ಮೆರವಣಿಗೆ ನಡೆಸಿದರು. ‘Parliament caged, democracy expelled ಎಂಬ ಫಲಕಗಳನ್ನು ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಿದರು. ಭಾರತದ ಇತಿಹಾಸದಲ್ಲೇ ಇಂತಹದ್ದೊಂದು ಘಟನೆ ಈವರೆಗೆ ನಡೆದಿರಲಿಲ್ಲ  ಎನ್ನುವುದು ಇಲ್ಲಿ ಉಲ್ಲೇಖಾರ್ಹ.

ಇನ್ನು, ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಭದ್ರತಾ ಲೋಪದ ಬಗ್ಗೆ ಮಾತನಾಡಲು ಅವಕಾಶ ನೀಡುವಂತೆ ನಾವು ಲೋಕಸಭೆ ಸ್ಪೀಕರ್, ರಾಜ್ಯಸಭಾ ಅಧ್ಯಕ್ಷರಿಗೆ ಪದೇ ಪದೇ ಮನವಿ ಮಾಡುತ್ತಿದ್ದೇವೆ ಆದರೆ ಆಡಳಿತ ಪಕ್ಷದ ಸಂಸದರು ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಖರ್ಗೆ ಹೇಳಿದರು.

ಸಾಮೂಹಿಕ ಅಮಾನತುಗಳಿಗೆ ಪ್ರತಿಕ್ರಿಯೆಯಾಗಿ, ʼಇಂಡಿಯಾʼ ಮೈತ್ರಿಕೂಟದ ನಾಯಕರು ಶುಕ್ರವಾರ ಜಂತರ್ ಮಂತರ್‌ನಲ್ಲಿ ಪ್ರತಿಭಟಿಸುವ ಯೋಜನೆಯನ್ನು ಮಾಡಿದ್ದಾರೆ.

ಅಮಾನತುಗೊಂಡ ಸಂಸದರು ಸರ್ಕಾರದ ಈ ಕ್ರಮವನ್ನು “ಪ್ರಜಾಪ್ರಭುತ್ವದ ಕೊಲೆ” ಎಂದು ಬಣ್ಣಿಸಿದರು ಮತ್ತು ಚರ್ಚೆಗಳಿಲ್ಲದೆ, ವಿರೋಧ ಪಕ್ಷಗಳ ಅಭಿಪ್ರಾಯ ಸ್ವೀಕರಿಸದೇ ಮಸೂದೆಗಳನ್ನು ಅಂಗೀಕರಿಸಲಾಗಿದೆ.  ಆಡಳಿತ ಸರ್ಕಾರ ಸಂಸತ್ತಿನಿಂದ ವಿರೋಧ ಪಕ್ಷಗಳ  ನಾಯಕರನ್ನು ಹೊರಹಾಕುವಂತಹ ಕೆಲಸವನ್ನು ಮಾಡುತ್ತಿದೆ ಎಂದು ʼಇಂಡಿಯಾʼ ಮೈತ್ರಿ ಕೂಟದ ನಾಯಕರು ಆರೋಪಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!