spot_img
Thursday, April 23, 2026
spot_img

ಕೋವಿಡ್ ಪರಿಸ್ಥಿತಿ ಕುರಿತು ಸಭೆ : ಆಕ್ಸಿಜನ್, ವೆಂಟಿಲೇಟರ್, ಬೆಡ್‌ಗಳ ಲಭ್ಯತೆ ಖಾತ್ರಿಗೊಳಿಸಲು ಸಿಎಂ ಸೂಚನೆ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ರಾಜ್ಯದಲ್ಲಿ ಕೋವಿಡ್‌ 19 ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿರುವ ಹಾಗೂ ಬೆಂಗಳೂರಿನಲ್ಲಿ ಕೋವಿಡ್‌ನಿಂದಾಗಿ ಕಳೆದ ಮೂರು ದಿನಗಳಲ್ಲಿ ಮೂವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದ ಸ್ಥಿತಿಗತಿಯ ಕುರಿತು ಚರ್ಚಿಸಲು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಇಂದು(ಗುರುವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ರಾಜ್ಯದಲ್ಲಿರುವ ಒಟ್ಟು 92 ಸಕ್ರಿಯ ಪ್ರಕರಣಗಳಲ್ಲಿ 80 ಬೆಂಗಳೂರು ನಗರದಲ್ಲಿ ಇದೆ. ಉಳಿದಂತೆ ಮೈಸೂರಿನಲ್ಲಿ 5, ಬಳ್ಳಾರಿಯಲ್ಲಿ 3, ರಾಮನಗರ ಹಾಗೂ ಮಂಡ್ಯದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ. ಇವರಲ್ಲಿ 72 ಜನ ಮನೆಯಲ್ಲಿಯೇ ಪ್ರತ್ಯೇಕವಾಗಿದ್ದಾರೆ. 20 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಳು ಜನರು ಐಸಿಯುನಲ್ಲಿದ್ದು, ಇವರೆಲ್ಲರೂ ಇತರ ಸಮಸ್ಯೆಗಳಿಂದಲೂ ಬಳಲುತ್ತಿದ್ದಾರೆ. ಅದಾಗ್ಯೂ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮಗಳನ್ನು ಅಗತ್ಯವಾಗಿ ಕೈಗೊಳ್ಳಬೇಕಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.  

ತಾಂತ್ರಿಕ ಸಲಹಾ ಸಮಿತಿ ನೀಡಿರುವ ಸಲಹೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಆಕ್ಸಿಜನ್‌, ವೆಂಟಿಲೇಟರ್‌, ಬೆಡ್‌ಗಳು ಯಾವುದಕ್ಕೂ ತೊಂದರೆ ಆಗಬಾರದು. ಆಕ್ಸಿಜನ್‌ ಲಭ್ಯತೆ ಖಾತ್ರಿಗೊಳಿಸಬೇಕು. ಇದಕ್ಕೆ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸನ್ನದ್ಧವಾಗಿ ಯಾವುದೂ ಕೊರತೆಯಾಗದಂತೆ ನೋಡಿಕೊಳ್ಳಬೇಕು. ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪಾಲಿಸಬೇಕು. ಎಲ್ಲರೂ ಜವಾಬ್ದಾರಿ ಅರಿತು ಕೆಲಸ ಮಾಡಬೇಕು ಎಂದಿದ್ದಾರೆ. 

ಕೋವಿಡ್‌ ನ ಸಮರ್ಪಕ ನಿರ್ವಹಣೆ ಹಾಗೂ ಪಾರದರ್ಶಕತೆಗಾಗಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದ್ದು, ಎಲ್ಲ ಆಸ್ಪತ್ರೆಗಳಲ್ಲಿ ಪೂರ್ವ ಸಿದ್ಧತೆ ಪರಿಶೀಲನೆ ಮಾಡಲಾಗಿದೆ. ಎಲ್ಲ ಆಸ್ಪತ್ರೆಗಳೂ ಕೋವಿಡ್‌ ಪ್ರಕರಣಗಳನ್ನು ನಿರ್ವಹಿಸಲು ಸಿದ್ಧತೆ ನಡೆಸಿಕೊಳ್ಳಲು ಸೂಚಿಸಲಾಗಿದೆ.

ಕೋವಿಡ್‌ ನ ಸಮರ್ಪಕ ನಿರ್ವಹಣೆ ಹಾಗೂ ಪಾರದರ್ಶಕತೆಗಾಗಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದ್ದು, ಎಲ್ಲ ಆಸ್ಪತ್ರೆಗಳಲ್ಲಿ ಪೂರ್ವ ಸಿದ್ಧತೆ ಪರಿಶೀಲನೆ ಮಾಡಲಾಗಿದೆ. ಎಲ್ಲ ಆಸ್ಪತ್ರೆಗಳೂ ಕೋವಿಡ್‌ ಪ್ರಕರಣಗಳನ್ನು ನಿರ್ವಹಿಸಲು ಸಿದ್ಧತೆ ನಡೆಸಿಕೊಳ್ಳಲು ಸೂಚಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!