Sunday, September 8, 2024

ಬಿ. ಬಿ. ಹೆಗ್ಡೆ ಕಾಲೇಜು: ಮಂಗಳೂರು ವಿ.ವಿ. ಮಟ್ಟದ ಅಂತರ್-ಕಾಲೇಜು ಸಾಹಿತ್ಯ ಸ್ಪರ್ಧೆ ಉದ್ಘಾಟನೆ

      ಕುಂದಾಪುರ: ವಿದ್ಯಾರ್ಥಿಗಳು ನೋಡುಗರಾಗುವುದರ ಜೊತೆಗೆ ತಾವು ಕ್ರಿಯಾಶೀಲವಾಗಿ ಮಾಡುವಂತವರಾಗಬೇಕು. ಆ ಮೂಲಕ ಎಲ್ಲಾ ಕ್ಷೇತ್ರಗಳಲ್ಲಿ ಜ್ಞಾನ ಸಿಗಲು ಸಾಧ್ಯ. ಎಲ್ಲಾ ವಿಭಾಗಗಳಲ್ಲಿ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆ, ವ್ಯಕ್ತಿತ್ವ ವಿಕಸನ ಸಾಧ್ಯ. ಇದು ತರಗತಿ ಕೋಣೆಯ ಪಠ್ಯ ಶಿಕ್ಷಣಕ್ಕಿಂತ ಇಂತಹ ಸಾಹಿತ್ಯ ಸ್ಪರ್ಧೆಯಂತಹ ಪಠ್ಯಪೂರಕ ಚಟುವಟಿಕೆಗಳಿಂದ ಸಾಧ್ಯ ಎಂದು ಇಂಡಿಯನ್ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಘಟಕದ ಗೌರವ ಕಾರ್ಯದರ್ಶಿಗಳಾದ ಡಾ. ಗಣನಾಥ ಶೆಟ್ಟಿ ಎಕ್ಕಾರ್ ಹೇಳಿದರು. 
    
ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೆಶನಾಲಯದ ಜಂಟಿ ಆಶ್ರಯದಲ್ಲಿ ಆಯೋಜಿಸಿದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್-ಕಾಲೇಜು ಸಾಹಿತ್ಯ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. 
    
ಮುಖ್ಯ ಅತಿಥಿಗಳಾದ ಅಂಕಣಕಾರ ಯೋಗೇಂದ್ರ ಮರವಂತೆ ಮಾತನಾಡಿ, ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಲು ಭಾಷೆಯ ಬಳಕೆ ಅಗತ್ಯ ಎಂದರು. ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕ ಡಾ| ಗಣೇಶ್ ಸಂಜೀವ್ ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು. 
 
  ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಕಿರು ಅವಧಿಯಲ್ಲಿ ಕಾಲೇಜು ಬೆಳೆದು ಬಂದ ಬಗೆಯನ್ನು ತಿಳಿಸಿದರು. ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ಮಾಲತಿ, ಕಾರ್ಯಕ್ರಮದ ಸಂಯೋಜಕಿ ಶ್ರೀಮತಿ ರೇಷ್ಮಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು.
ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ  ರಕ್ಷಿತ್ ರಾವ್ ಗುಜ್ಜಾಡಿ ವಂದಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಐಕ್ಯೂ‌ಎಸಿ ಸಂಯೋಜಕಿ ಶ್ರೀಮತಿ ದೀಪಿಕಾ ಜಿ. ನಿರೂಪಿಸಿದರು.  

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!