spot_img
Thursday, April 23, 2026
spot_img

ಬಿ. ಬಿ. ಹೆಗ್ಡೆ ಕಾಲೇಜು : ಅಂಗಾಂಗ ದಾನ ಅರಿವು, ನೋಂದಣಿ

     ಕುಂದಾಪುರ : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಮೂಲಕ ರಾಜ್ಯ ಅಂಗಾಂಗ ಮತ್ತು ಅಂಗಾಂಶ ಕಸಿ ಸಂಘಟನೆ (ಸೊಟ್ಟೊ) ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಅಂಗಾಂಗ ದಾನದ ಕುರಿತು ಅರಿವು ಮತ್ತು ನೋಂದಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಟ್ರಾನ್ಸ್‌ಪ್ಲಾಂಟ್ (ಕಸಿ) ಸಂಯೋಜಕರಾದ ಶ್ರೀಮತಿ ಪದ್ಮಾ ಅವರು ಅಂಗಾಂಗ ದಾನದ ಮಹತ್ವ ಹಾಗೂ ನೋಂದಣಿ ಪ್ರಕ್ರಿಯೆ ಕುರಿತು ಮಾಹಿತಿ ನೀಡಿದರು. ಇದೇ ಸಂದರ್ಭ ಕೆಲವು ಘಟನೆಗಳನ್ನು ಉದಾಹರಿಸಿ, ಯುವ ಜನತೆ ಅಂಗಾಂಗ ದಾನದ ಕುರಿತು ತಾವು ಅರಿವು ಮೂಡಿಸಿಕೊಳ್ಳುವುದರ ಜತೆಗೆ ಇತರರಿಗೆ ಮಾಹಿತಿಯನ್ನು ನೀಡುವ ಕೆಲಸ ಮಾಡಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಶ್ರೀ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಸ್ತಾವಿಸಿದರು. ಎನ್.ಎಸ್.ಎಸ್. ಘಟಕದ ಕಾರ್ಯಕ್ರಮಾಧಿಕಾರಿಯಾದ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಎನ್.ಎಸ್.ಎಸ್. ಸ್ವಯಂಸೇವಕ ಪ್ರತಿನಿಧಿ ಶೃದ್ಧಾ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!