Sunday, September 8, 2024

ಹಣವನ್ನು ಉಳಿತಾಯ ಮಾಡುವುದಕ್ಕೆ ವಿದ್ಯಾರ್ಥಿಗಳನ್ನೇ ಸಂಪನ್ಮೂಲಗಳನ್ನಾಗಿ ಬಳಸುವುದು ತರವಲ್ಲ : ಯತ್ನಾಳ್‌ ಆಕ್ರೋಶ

ಜನಪ್ರತಿನಿಧಿ ವಾರ್ತೆ (ಬೆಂಗಳೂರು ) : ಕೋಲಾರದಲ್ಲಿ ವಿದ್ಯಾರ್ಥಿಗಳಿಂದ ಮಲ ಗುಂಡಿ ಸ್ವಚ್ಛ ಮಾಡಿಸಿದ ಘಟನೆ ಇನ್ನೂ ಹಸಿಯಾಗಿಯೇ ಇರುವ ಸಂದರ್ಭದಲ್ಲೇ ಬೆಂಗಳೂರಿನ ಆಂಧ್ರ ಹಳ್ಳಿಯಲ್ಲಿ ಅಂತಹುದೇ ಘಟನೆ ವರದಿಯಾಗಿದೆ.

ಯಶವಂತಪುರ ಕ್ಷೇತ್ರದ ಅಂಧ್ರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಂದಲೇ ಶಾಲೆಯ ಶಿಕ್ಷಕರು ಶೌಚಾಲಯ ಸ್ವಚ್ಛಗೊಳಿಸಿದ್ದಾರೆ ಎಂಬ ವರದಿಯಾಗಿದೆ. ಇದು, ರಾಜಕೀಯ ಹಾಗೂ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ʼಎಕ್ಸ್ʼ ನಲ್ಲಿ ವರದಿ ಹಂಚಿಕೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮುಗ್ಧ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿರುವುದು ನಿಜಕ್ಕೂ ಖಂಡನೀಯ. ಹಣವನ್ನು ಉಳಿತಾಯ ಮಾಡುವುದಕ್ಕೆ ವಿದ್ಯಾರ್ಥಿಗಳನ್ನೇ ಸಂಪನ್ಮೂಲಗಳನ್ನಾಗಿ ಬಳಸುವುದು ತರವಲ್ಲ ಎಂದು ಟೀಕಿಸಿದ್ದಾರೆ. 

ಸ್ವಚ್ಛ ಮಾಡುವ ಕೆಲಸದಿಂದ ಹಿಡಿದು ಬಿಸಿಯೂಟದವರೆಗೂ ಸ್ಪಷ್ಟವಾದ ಪ್ರಮಾಣಿತ ಕಾರ್ಯಾಚರಣಾ ವಿಧಾನ ಇರಬೇಕು.  ಹಾಗೂ ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕಾದದ್ದು ಶಾಲೆ ಹಾಗೂ ಶಿಕ್ಷಣ ಇಲಾಖೆಯ ಜವಾಬ್ದಾರಿ ಎಂದಿದ್ದಾರೆ. 

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!