Sunday, September 8, 2024

ರಾಜಧಾನಿಯ ಹತ್ತು ಸರ್ಕಾರಿ ಆಸ್ಪತ್ರೆಗಳ ಮೇಲೆ ಲೋಕಾಯುಕ್ತ ದಾಳಿ : ಬಾರಿ ಅಕ್ರಮ ಆರೋಪ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಅವ್ಯವಹಾರ ಮತ್ತು ಬಾರಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ ಎಂಬ ದೂರಿನ ಅನ್ವಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು(ಶುಕ್ರವಾರ) ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿನ ಹತ್ತು ಸರ್ಕಾರಿ ಆಸ್ಪತ್ರೆಗಳ ಮೇಲೆ ದಾಳಿ ಮಾಡಿದ್ದಾರೆ.

ನೆಲಮಂಗಲ, ಯಲಹಂಕ, ಕೆಆರ್ ಪುರಂ, ಜಯನಗರ, ಕೆಸಿ ಜನರಲ್ ಆಸ್ಪತ್ರೆ, ಸಂಜಯ್ ಗಾಂಧಿ ಆಸ್ಪತ್ರೆ, ಇಂದಿರಾಗಾಂಧಿ ಆಸ್ಪತ್ರೆ, ರಾಜೀವ್ ಗಾಂಧಿ ಆಸ್ಪತ್ರೆ, ಗೌಸಿಯಾ ಆಸ್ಪತ್ರೆ, ವಾಣಿ ವಿಲಾಸ ಆಸ್ಪತ್ರೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಲೋಕಾಯುಕ್ತ ಮೂಲಗಳು ಮಾಹಿತಿ ನೀಡಿವೆ.

ಪೊಲೀಸ್ ಮಹಾನಿರ್ದೇಶಕ(ಲೋಕಾಯುಕ್ತ) ಪ್ರಶಾಂತ್ ಕುಮಾರ್ ಠಾಕೂರ್ ಕೆಸಿ ಜನರಲ್ ಆಸ್ಪತ್ರೆ ಮತ್ತು ಯಲಹಂಕ ಸಾರ್ವಜನಿಕ ಆಸ್ಪತ್ರೆಯನ್ನು ಪರಿಶೀಲಿಸಿದರು. ಪೊಲೀಸ್ ಮಹಾನಿರೀಕ್ಷಕ ಡಾ. ಎ ಸುಬ್ರಹ್ಮಣ್ಯೇಶ್ವರ ರಾವ್ ಸಂಜಯ್ ಗಾಂಧಿ ಆಸ್ಪತ್ರೆ ಮತ್ತು ವಾಣಿ ವಿಲಾಸ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!