Sunday, September 8, 2024

ವಸ್ತುನಿಷ್ಠಸುದ್ದಿ, ಸತ್ಯದ ವರದಿ ಮಾತ್ರ ಸಮಾಜಮುಖಿಯಾಗಿರುತ್ತದೆ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ ವಾರ್ತೆ(ಮೈಸೂರು) : ಊಹಾ-ಪೋಹಗಳಿರುವ ಸುದ್ದಿ ತಯಾರಿಸುವುದೇ ವೃತ್ತಿಪರತೆಯಾ ? ಕಲ್ಪಿಸಿಕೊಂಡು, ಊಹಿಸಿಕೊಂಡು ಸುದ್ದಿ ಮಾಡುವವರು ಹೆಚ್ಚಾಗಿರುವುದು ಕೆಟ್ಟ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. 

ಇಲ್ಲಿ, ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಹಾಗೂ ತರಬೇತಿ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸಂವಿಧಾನ ವಿರೋಧಿಗಳನ್ನೂ ಪ್ರಶ್ನಿಸದೇ ಹೋದರೆ, ಅವರನ್ನೂ ನೀವು ಗೌರವದಿಂದ ನಡೆಸಿಕೊಂಡರೆ ನಿಮ್ಮನ್ನು ಸಮಾಜದ ನಾಲ್ಕನೇ ಅಂಗವೆಂದು ಹೇಗೆ ಕರೆಯುವುದಕ್ಕೆ ಸಾಧ್ಯವಿದೆ ? ಪತ್ರಿಕಾ ನಿಖರತೆ, ವಸ್ತುನಿಷ್ಠ ಸುದ್ದಿ, ಸತ್ಯದ ವರದಿ ಮಾತ್ರ ಸಮಾಜಮುಖಿಯಾಗಿರುತ್ತದೆ ಎಂದು ಅವರು ಅಭಿಪ್ರಾಯ ಪಟ್ಟರು. 

ಸಂವಿಧಾನದ ವಿರುದ್ಧ ಮಾತಾಡುವವರೂ ಇದ್ದಾರೆ. ಅಸಮಾನತೆ ಯಾಕಿನ್ನೂ ಸಮಾಜದಲ್ಲಿದೆ. ಸಂವಿಧಾನದ ಮೇಲೆ ಗೌರವಿಲ್ಲದವಿರಂದ ಸಮಾಜಕ್ಕೆ ಆಗುವ ಹಾನಿಯನ್ನು ಪತ್ರಕರ್ತರು ವಿಶ್ಲೇಷಿಸಿ ಬರೆಯಬೇಕು. ಪತ್ರಿಕೋದ್ಯಮದಲ್ಲಿ ವೃತ್ತಿಪರತೆ ಇಲ್ಲದಾಗಿದೆ. ಪತ್ರಿಕೋದ್ಯಮದಲ್ಲಿ ವ್ಯಾಪಾರ ಹೆಚ್ಚಾಗಿರುವುದು  ಅನಾರೋಗ್ಯಕಾರಿ ಬೆಳವಣಿಗೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಓದುಗರು ಮಾಧ್ಯಮಗಳ ಬಗ್ಗೆ ಕುತೂಹಲ, ಆಸಕ್ತಿ ಕಳೆದುಕೊಂಡರೆ ಅದಕ್ಕೆ ವೃತ್ತಿಪರತೆ ಇಲ್ಲವಾಗಿದೆ ಎಂದು ಅರ್ಥ. ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದನ್ನೂ ಸುದ್ದಿ ಮಾಡ್ತೀರಿ, ಚರ್ಚೆ ಮಾಡ್ತೀರಿ. ಕಾಗೆ ಕುಳಿತರೆ ನಿಮಗೇನು ನಷ್ಟ? ಸಮಾಜಕ್ಕೇನು ನಷ್ಟ ಎಂದು ಪ್ರಶ್ನಿಸಿದರು.

ಇನ್ನು, ಗಂಡ ಹೆಂಡತಿಯರ ಜಗಳದ ಸುದ್ದಿ ಮಾಡುತ್ತೀರಲ್ಲಾ ಅದರಿಂದ ಸಮಾಜಕ್ಕೆ ಏನು ಪ್ರಯೋಜನವಿದೆ? ಜನರಲ್ಲಿ ಮಾಧ್ಯಮಗಳ ಮೇಲೆ ವಿಶ್ವಾಸ ಇಲ್ಲದಂತಾಗಿದೆ. ಸತ್ಯವನ್ನು ಹೇಳುವುದೇ ಮಾಧ್ಯಮಗಳ ಕೆಲಸವಾಗಬೇಕು ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!