Sunday, September 8, 2024

ಸಮುದ್ರದ ಮಧ್ಯೆ ಮೀನುಗಾರಿಕಾ ಬೋಟ್‌ ಮುಳುಗಡೆ : ಎಂಟು ಮಂದಿ ಮೀನುಗಾರರ ರಕ್ಷಣೆ

ಜನಪ್ರತಿನಿಧಿ ವಾರ್ತೆ (ಉಡುಪಿ) : ಜಿಲ್ಲೆಯ ಮಲ್ಪೆಯಲ್ಲಿ ಸಮುದ್ರದ ಮಧ್ಯದಲ್ಲಿ ಮೀನುಗಾರಿಕಾ ಬೋಟ್ ವೊಂದು ಮುಳುಗಡೆಯಾಗಿದ್ದು, ಬೋಟ್‌ ನಲ್ಲಿದ್ದ ಎಂಟು ಮಂದಿ ಮೀನುಗಾರರನ್ನು ಮತ್ತೊಂದು ಬೋಟ್‌ನಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 12 ರಂದು ರಾತ್ರಿ ಮಲ್ಪೆ ಬಂದರಿನಿಂದ ಸಮುದ್ರಕ್ಕೆ ಇಳಿದಿದ್ದ ಬೋಟ್, ಡಿಸೆಂಬರ್ 19 ರ ನಸುಕಿನ ಜಾವ ಬೋಟ್‌ನೊಳಗೆ ನೀರು ನುಗ್ಗಲು ಆರಂಭಿಸಿದ್ದು, ಹಂತಹಂತವಾಗಿ ಮುಳುಗಡೆಯಾಗಲು ಆರಂಭಿಸಿದೆ. ಇದನ್ನು ಗಮನಿಸಿದ ಸಮೀಪದಲ್ಲೇ ಇದ್ದ ಮೂಕಾಂಬಿಕಾ ಅನುಗ್ರಹ ಹೆಸರಿನ ಮೀನುಗಾರಿಕಾ ಬೋಟ್ ನಲ್ಲಿದ್ದವರು, ಮುಳುಗುತ್ತಿದ್ದ ಬೋಟ್ ನಲ್ಲಿದ್ದವರ ರಕ್ಷಣೆ ಧಾವಿಸಿ ಕಾಪಾಡಿದ್ದಾರೆ. 

ನಂತರ ರಕ್ಷಿಸಲಾದ ಮೀನುಗಾರರನ್ನು ಸುರಕ್ಷಿತವಾಗಿ ದಡಕ್ಕೆ ಕರೆತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!