spot_img
Wednesday, April 22, 2026
spot_img

ಡಾ.ಯತೀಂದ್ರ ಅವರ ಕೋರಿಕೆಯಂತೆ ಮೈಸೂರಿನಲ್ಲಿ ಬೋನ್ ಮ್ಯಾರೋ ಚಿಕಿತ್ಸಾ ಸೌಲಭ್ಯ ಒದಗಿಸುತ್ತೇವೆ : ಸಿದ್ದರಾಮಯ್ಯ

ಜನಪ್ರತಿನಿಧಿ ವಾರ್ತೆ (ಮೈಸೂರು) : ಮುಖ್ಯಮಂತ್ರಿ ಸಿದ್ದರಾಮಯ್ಯ  ಇಂದು(ಶುಕ್ರವಾರ) ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಫೆರಿಫೆರಲ್ ಕ್ಯಾನ್ಸರ್ ಕೇಂದ್ರ ಕಟ್ಟಡದ ಶಂಕುಸ್ಥಾಪನೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಯ ಬಾಲಕಿಯರ ವಿದ್ಯಾರ್ಥಿ ನಿಲಯದ ಉದ್ಘಾಟನೆಯನ್ನು ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಮೈಸೂರಿಗೆ ಜಿಲ್ಲಾ ಆಸ್ಪತ್ರೆ, ಟ್ರಾಮಾ ಸೆಂಟರ್, ಕಿದ್ವಾಯಿ ಆಸ್ಪತ್ರೆ ಕೊಟ್ಟಿದ್ದು ನಾನೇ. ಈಗಾಗಲೇ ರೂ. 40 ಕೋಟಿ ಕೂಡ ಕೊಟ್ಟಿದ್ದೇವೆ. ಇನ್ನೂ ರೂ.50 ಕೋಟಿ ಕೊಡುತ್ತೇವೆ. ನೆಫ್ರೋಲಜಿ ಕೇಂದ್ರ ಬೇಕು ಎನ್ನುವ ಬೇಡಿಕೆಯೂ ಇದೆ. ಅದನ್ನೂ ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮಕೈಗೊಳ್ಳುತ್ತೇವೆ.  ಡಾ.ಯತೀಂದ್ರ ಅವರ ಕೋರಿಕೆಯಂತೆ ಮೈಸೂರಿನಲ್ಲಿ ಬೋನ್ ಮ್ಯಾರೋ ಚಿಕಿತ್ಸಾ ಸೌಲಭ್ಯ ಒದಗಿಸುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ.

ಬೆಂಗಳೂರಿನ ನಂತರ ವೇಗವಾಗಿ ಬೆಳೆಯುತ್ತಿರುವ ನಗರ ಮೈಸೂರು. ಹೀಗಾಗಿ ಅಗತ್ಯ ಎಲ್ಲಾ ರೀತಿಯ ವೈದ್ಯಕೀಯ ಸವಲತ್ತುಗಳನ್ನೂ ಮೈಸೂರಿಗೆ ಒದಗಿಸಬೇಕಾಗಿದ್ದು ಇದಕ್ಕೆ ನಾನು ಬದ್ಧವಾಗಿದ್ದೇನೆ.

ಬಡವರಿಗೆ, ದುಡಿಯುವ ವರ್ಗಗಳಿಗೆ ಚಿಕಿತ್ಸೆ ಭಾರ ಆಗಬಾರದು. ಉಚಿತ ಅಥವಾ ಕಡಿಮೆ ಖರ್ಚಿನಲ್ಲಿ ಇವರಿಗೆ ಆರೋಗ್ಯ, ಚಿಕಿತ್ಸೆ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಕಾಳಜಿ. ನಮ್ಮ ಸರ್ಕಾರ ಇರುವಾಗ ಮೈಸೂರು ನಗರಕ್ಕೆ ಅಗತ್ಯ ಇರುವ ಎಲ್ಲಾ ನೆರವನ್ನೂ ಒದಗಿಸುತ್ತೇವೆ. ಪಾರಂಪರಿಕ ನಗರದ ಹೆಮ್ಮೆಯನ್ನು ನಾವು ಉಳಿಸುತ್ತೇವೆ. ಮೈಸೂರು ಜಿಲ್ಲೆಯ ಜನರ ಋಣ ತೀರಿಸಲು ನಾವು ಬದ್ಧರಾಗಿದ್ದೇವೆ ಎಂದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!