Thursday, November 21, 2024

ಕೋವಿಡ್ JN.1 ರೂಪಾಂತರಿ ಸೋಂಕು : ಒಂದು ದಿನದಲ್ಲಿ ದೇಶದಲ್ಲಿ ಸೋಂಕಿನಿಂದ 4 ಮಂದಿ ಸಾವು : ಆರೋಗ್ಯ ಇಲಾಖೆ

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : ದೇಶದಲ್ಲಿ ದಿನವೊಂದರಲ್ಲಿ 752 ಕೋವಿಡ್ -19 ಸೋಂಕುಗಳ ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕಳೆದ 24 ಗಂಟೆಗಳಲ್ಲಿ ಕೇರಳದಿಂದ ಎರಡು ಮತ್ತು ರಾಜಸ್ಥಾನ ಮತ್ತು ಕರ್ನಾಟಕದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದು, ದೇಶದಲ್ಲಿ ಈವರೆಗೆ ಕೋವಿಡ್‌ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 5,33,332 ಕ್ಕೆ ತಲುಪಿದೆ ಎಂದು ಬೆಳಿಗ್ಗೆ 8 ಗಂಟೆಗೆ ಆರೋಗ್ಯ ಇಲಾಖೆ ಬಿಡುಗಡೆಗೊಳಿಸಿದ ಡೇಟಾ ತಿಳಿಸಿದೆ.

ದೇಶದಲ್ಲಿ ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.18 ರಷ್ಟಿದೆ. ದೇಶದ ಕೋವಿಡ್ ಪ್ರಕರಣಗಳ ಸಂಖ್ಯೆ 4.50 ಕೋಟಿ (4,50,07,964)ಗೆ ಏರಿಕೆಯಾಗಿದೆ.

ಇಂದು ಬೆಳಿಗ್ಗೆ 8 ಗಂಟೆಗೆ ನವೀಕರಿಸಿದ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 17 ರಾಜ್ಯಗಳು ಕೋವಿಡ್ -19 ರ ಸಕ್ರಿಯ ಪ್ರಕರಣಗಳಲ್ಲಿ ಏರಿಕೆ ಕಂಡಿವೆ. ಅವುಗಳಲ್ಲಿ ಕೇರಳ (266), ಕರ್ನಾಟಕ (70), ಮಹಾರಾಷ್ಟ್ರ (15), ತಮಿಳುನಾಡು (13) ಮತ್ತು ಗುಜರಾತ್ (12) ರಾಜ್ಯಗಳಲ್ಲಿ ಹೊಸ ರೂಪಾಂತರಿ JN.1 ಪ್ರಕರಣಗಳ ಸೋಂಕಿನ ಪ್ರಮಾಣದಲ್ಲಿ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 325 ಜನರು ಕೋವಿಡ್ -19 ನಿಂದ ಚೇತರಿಸಿಕೊಂಡಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆಯನ್ನು 4,44,71,212 ಆಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಪ್ರಸ್ತುತ ಕೋವಿಡ್ -19 ಪ್ರಕರಣಗಳ ಹೆಚ್ಚಳವು ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದಾಗ್ಯೂ, ಜನರು ಮುಂಜಾಗ್ರತಾ ಕ್ರಮವಾಗಿ ಫೇಸ್ ಮಾಸ್ಕ್ ಧರಿಸಲು ಕೇಂದ್ರ ಸಲಹೆ ನೀಡಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!