Sunday, September 8, 2024

ಹಿಜಾಬ್‌ ವಿವಾದ : ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿ ಟೀಕೆಗೆ ಮತ್ತೊಂದು ಅಸ್ತ್ರ : ಹೇಳಿಕೆಯನ್ನು ಸಮರ್ಥಿಸಿಕೊಂಡ ಕಾಂಗ್ರೆಸ್‌

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : ರಾಜ್ಯದಲ್ಲಿ ಬಾರಿ ವಿವಾದವನ್ನು ಸೃಷ್ಟಿ ಮಾಡಿದ್ದ ʼಹಿಜಾಬ್‌ʼ ವಿಚಾರ ಈಗ ಮತ್ತೆ ರಷ್ಟ್ರ ಮಟ್ಟದ ಸುದ್ದಿಯಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ (ತಲೆ ಸ್ಕಾರ್ಫ್) ಮೇಲಿನ ನಿರ್ಬಂಧಗಳನ್ನು ತೆಗೆದುಹಾಕುವುದಾಗಿ ಘೋಷಿಸಿದ ನಂತರ ಕರ್ನಾಟಕದಲ್ಲಿ ವಿವಾದ ಮತ್ತೆ ಭುಗಿಲೆದ್ದಿದೆ. ಪ್ರತಿಪಕ್ಷ ಬಿಜೆಪಿಗೆ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಒಂದು ದೊಡ್ಡ ವಿಚರಾವೇ ಗ್ರಾಸವಾಗಿ ಸಿಕ್ಕಂತಾಗಿದೆ. ರಾಜ್ಯದಲ್ಲಿ ಹಿಂದೆ ಇದ್ದ ಬಿಜೆಪಿ ಸರ್ಕಾರವು 2022 ರಲ್ಲಿ ರಾಜ್ಯದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ʼಹಿಜಾಬ್‌ ಧರಿಸುವಂತಿಲ್ಲʼ ಎಂದು ಆದೇಶ ತಂದಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಕರ್ನಾಟಕದಲ್ಲಿ ಹಿಜಾಬ್ ನಿಷೇಧವನ್ನು ತೆಗೆದುಹಾಕುವುದರಿಂದ ರಾಜ್ಯದಲ್ಲಿ ʼಷರಿಯಾ ಕಾನೂನುʼ ಸ್ಥಾಪನೆಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಕೇಂದ್ರದಲ್ಲಿ ಪ್ರತಿಪಕ್ಷಗಳು ಅಧಿಕಾರಕ್ಕೆ ಬಂದರೆ ದೇಶಾದ್ಯಂತ “ಇಸ್ಲಾಮಿಕ್ ಕಾನೂನನ್ನು ಜಾರಿಗೊಳಿಸುವುದು ಖಚಿತ” ಎಂದು ಅವರು ಆರೋಪಿಸಿದ್ದಾರೆ.

“ಇದು ಕೇವಲ ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕುವುದು ಮಾತ್ರವಲ್ಲ, ರಾಜ್ಯದಲ್ಲಿ ಷರಿಯಾ ಕಾನೂನನ್ನು ಸ್ಥಾಪಿಸುವುದಾಗಿದೆ. ರಾಹುಲ್ ಗಾಂಧಿ, ಕಾಂಗ್ರೆಸ್ ಮತ್ತು ʼಇಂಡಿಯಾʼ ಮೈತ್ರಿಕೂಟ ದೇಶದಲ್ಲಿ ಸರ್ಕಾರ ರಚಿಸಿದರೆ, ಇಸ್ಲಾಮಿಕ್ ಕಾನೂನನ್ನು ಜಾರಿಗೆ ತರುತ್ತದೆ. ಇದರಲ್ಲಿ ಅನುಮಾನವೇ ಇಲ್ಲ. ಇದೊಂದು ಯೋಜಿತ ಸಿದ್ಧಾಂತವಾಗಿದೆ. ಸನಾತನ ಧರ್ಮವನ್ನು ನಾಶ ಮಾಡುವ ಸಂಚು ಎಂದು ಸಿಂಗ್ ಕಿಡಿ ಕಾರಿದ್ದಾರೆ.

ಇನ್ನು, ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ‘ಮುಸ್ಲಿಮರನ್ನು ಓಲೈಸುವ ಉದ್ದೇಶದಿಂದ ಸಿದ್ದರಾಮಯ್ಯ ಹಿಜಾಬ್ ಧರಿಸುವ ನಿಷೇಧವನ್ನು ಹಿಂಪಡೆಯುವ ಈ ಹೇಳಿಕೆ ನೀಡಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.

ಈ ಹಿಜಾಬ್ ನಿರ್ಧಾರ ಹಿಂಪಡೆಯುವಂತೆ ಯಾರೂ ಒತ್ತಾಯಿಸಿಲ್ಲ. ಮುಸ್ಲಿಮರನ್ನು ಓಲೈಸಲು ಸಿದ್ದರಾಮಯ್ಯ ಈ ರೀತಿ ಹೇಳಿಕೆ ನೀಡಿದ್ದಾರೆ. ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ನಿರ್ಧಾರವು “ನಮ್ಮ ಶೈಕ್ಷಣಿಕ ಸ್ಥಳಗಳ ಜಾತ್ಯತೀತ ಸ್ವರೂಪದ ಬಗ್ಗೆ ಕಳವಳ ಮೂಡಿಸಿದೆ” ಎಂದು ಹೇಳಿದ್ದಾರೆ

ʼಹಿಜಾಬ್‌ʼ ಹೇಳಿಕೆಯನ್ನು ಸಮರ್ಥಿಸಿಕೊಂಡ ಕಾಂಗ್ರೆಸ್‌ :

ಇದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್, ಈ ಕ್ರಮವನ್ನು ಕಾನೂನಿನ ಅಡಿಯಲ್ಲಿ ಮಾಡಲಾಗುತ್ತಿದೆ ಎಂದು ಪ್ರತಿಪಾದಿಸಿದ್ದು, ಈ ವಿಷಯವನ್ನು ರಾಜಕೀಯಗೊಳಿಸಬಾರದು ಎಂದು ಹೇಳಿದೆ.

ಇನ್ನು, ಈ ಬಗ್ಗೆ ಸಮರ್ಥಿಸಿಕೊಂಡ  ಸಚಿವ ಪ್ರಿಯಾಂಕ್‌ ಖರ್ಗೆ, “ಬಿಜೆಪಿಗೆ ಸಂವಿಧಾನದ ಬಗ್ಗೆ ಅರಿವಿಲ್ಲ ಎಂದು ನಾನು ಭಾವಿಸುತ್ತೇನೆ. ಅವರು ಸಂವಿಧಾನವನ್ನು ಓದಬೇಕು. ಬಿಜೆಪಿ ಕರ್ನಾಟಕದ ಪ್ರಗತಿಗೆ ಒಳ್ಳೆಯದಲ್ಲದ. ಯಾವುದೇ ಕಾನೂನು ಅಥವಾ ನೀತಿಯನ್ನು ಕಡೆಗಣಿಸಲಾಗುವುದಿಲ್ಲ. ಅಗತ್ಯವಿದ್ದರೆ, ನಾವು ಆ ಕಾನೂನು ಅಥವಾ ನಿಯಮವನ್ನು ತೆಗೆದುಹಾಕುತ್ತೇವೆ” ಎಂದು ಹೇಳಿದ್ದಾರೆ.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ಈ ಕುರಿತು ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸುತ್ತೇನೆ,  ಯಾವುದೇ ರೀತಿಯ ರಾಜಕೀಯಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ, ರಾಜ್ಯದ ಶಿಕ್ಷಣ ನೀತಿಯು ಸಂಸ್ಕೃತಿ, ಅಧ್ಯಯನ ಮತ್ತು ಇತರ ವಿಷಯಗಳನ್ನು ಒಳಗೊಂಡಿದೆ. ಬಿಜೆಪಿಯವರು ತಾವು ಮಾಡಿರುವ ಪ್ರಗತಿಯ ಬಗ್ಗೆ ಮಾತನಾಡುವುದಿಲ್ಲ, ನಮ್ಮ ಮುಖ್ಯಮಂತ್ರಿಗಳು ಖಂಡಿತವಾಗಿಯೂ ಪರಿಶೀಲಿಸಿ ಕಾನೂನು ಪರಿಶೋಧನೆ ಮಾಡುತ್ತಾರೆ. ಅವರ ಹೇಳಿಕೆಯನ್ನು ಬಿಜೆಪಿಯವರು ತಿರುಚಿ ಈ ವಿಷಯಕ್ಕೆ ರಾಜಕೀಯ ಬಣ್ಣ ಬಳಿಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇನ್ನು, ಸಚಿವ ಎಚ್‌ಕೆ ಪಾಟೀಲ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ‘ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ. ಅವರಿಗೆ ಕಾನೂನು ಗೊತ್ತಿದೆ. ನಮ್ಮ ಹಿಂದಿನ ನಿಲುವು ಅವರಿಗೂ ಗೊತ್ತಿದೆ. ಮುಖ್ಯಮಂತ್ರಿಗಳ ನಮ್ಮ ಆಲೋಚನಾ ಕ್ರಮವೇ ಕಾಂಗ್ರೆಸ್ ಪಕ್ಷದ ಆಲೋಚನಾ ಕ್ರಮವಾಗಿದೆ. ಬಿಜೆಪಿಗೆ ಏನೂ ಗೊತ್ತಿಲ್ಲ,’ ಎಂದು ಅವರು ಟೀಕೆ ಮಾಡಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!