Sunday, April 28, 2024

ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ ವಾರ್ತೆ(ಮೈಸೂರು) :  ಇಂದು(ಶನಿವಾರ) ನಡೆದ ವಿವಿಧ ಕಾರ್ಖಾನೆಗಳ ಮುಖ್ಯಸ್ಥರ ಸಭೆಯಲ್ಲಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಪಾಲ್ಗೊಂಡು, ಮಾತನಾಡಿದರು.

ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು. ಕಾರ್ಖಾನೆಗಳಲ್ಲಿ ಉದ್ಯೋಗ ಸ್ಥಳೀಯರಿಗೆ ಸಿಗಬೇಕು, ತಾಂತ್ರಿಕ ನೈಪುಣ್ಯ ಇರುವವರು ಇಲ್ಲಿ ಸಿಗದಿದ್ದಾಗ ಮಾತ್ರ ಹೊರಗಿನವರಿಗೆ ಅವಕಾಶ ಕೊಡಬೇಕು. ಮಾನವ ಸಂಪನ್ಮೂಲ ನಮ್ಮಲ್ಲಿ ಇದೆ. ವೃತ್ತಿ ನೈಪುಣ್ಯ ಇರುವವರೂ ನಮ್ಮಲ್ಲಿ ಇದ್ದಾರೆ. ಸುಳ್ಳು ಕಾರಣ ಕೊಟ್ಟು ಸ್ಥಳೀಯರಿಗೆ ಉದ್ಯೋಗ ಅವಕಾಶ ನಿರಾಕರಿಸಬಾರದು ಎಂದು ಅವರು ಅಭಿಪ್ರಾಯ ಪಟ್ಟರು.

ಕಾರ್ಖಾನೆಗಳು ಶಾಂತಿಯುತವಾಗಿ ನಡೆಯಬೇಕು. ನಮ್ಮ ಸರ್ಕಾರ ನಿರುದ್ಯೋಗಿ ಪದವೀಧರರಿಗಾಗಿ ಯುವ ನಿಧಿ ಯೋಜನೆ ಜಾರಿಗೆ ತರುತ್ತಿದೆ. ಯೋಜನೆ ಜನವರಿ 12ರಂದು ಉದ್ಘಾಟನೆಯಾಗಲಿದೆ. ನಿಮಗೆ ಯಾವ ರೀತಿಯ ವೃತ್ತಿ ನೈಪುಣ್ಯತೆ ಇರುವವರು ಬೇಕು ಎಂಬುದನ್ನು ಮನಗಂಡು ಪದವೀಧರರಿಗೆ ಸರ್ಕಾರದ ವತಿಯಿಂದ  ತರಬೇತಿ ನೀಡಲಾಗುವುದು. ಕಾರ್ಖಾನೆಗಳಿಂದ ರಾಜ್ಯದ ಅಭಿವೃದ್ಧಿ ಆಗುತ್ತದೆ. ಜಿಡಿಪಿ ಬೆಳವಣಿಗೆಗೂ ಇದು ಸಹಕಾರಿ. ಕಾರ್ಖಾನೆಗಳಿಗೆ ಜಮೀನು ನೀಡಿದ ಮಾಲೀಕರ ಕುಟುಂಬದವರಿಗೆ ಪ್ರಮುಖವಾಗಿ ಉದ್ಯೋಗ ನೀಡಬೇಕು. ಸ್ಥಳೀಯರಿಗೆ ಆದ್ಯತೆ ಸಿಗಲೇಬೇಕು. ಒಂದು ವೇಳೆ ವೃತ್ತಿ ನೈಪುಣ್ಯತೆ ಇಲ್ಲದಿದ್ದರೆ ತರಬೇತಿ ನೀಡಿ ನೇಮಕ‌ ಮಾಡಿಕೊಳ್ಳುವುದು ಸೂಕ್ತ ಎಂದರು. 

ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬ ದೃಷ್ಟಿಯಿಂದ ಕಾರ್ಖಾನೆಗಳ ಪ್ರಾರಂಭಕ್ಕೆ ಅನುಮತಿ ನೀಡಲಾಗುತ್ತದೆ. ಉದ್ಯೋಗ ಸಿಗದಿದ್ದರೆ ಸರ್ಕಾರದ ಉದ್ದೇಶ ಈಡೇರುವುದಿಲ್ಲ. ನಮ್ಮ ಸರ್ಕಾರ ಕೈಗಾರಿಗಳಿಗೆ ಸೌಲಭ್ಯ ಒದಗಿಸಲು ಬದ್ಧವಾಗಿದೆ. ಅದೇ ರೀತಿ ಸೂಕ್ತ ರಿಯಾಯಿತಿ ನೀಡಲೂ ಸಿದ್ಧವಿದೆ. ನಮ್ಮ ಸರ್ಕಾರ ಕೈಗಾರಿಕೆಗಳ ವಿರುದ್ಧ ಇಲ್ಲ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಶಯ ಎಂದರು.

Related Articles

Stay Connected

21,961FansLike
3,912FollowersFollow
21,600SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!