spot_img
Wednesday, April 22, 2026
spot_img

ಶಾಲೆಯ ಶೌಚಾಲಯಗಳನ್ನು ಶುಚಿಗೊಳಿಸಲು ವಿದ್ಯಾರ್ಥಿಗಳನ್ನು ಬಳಸುವುದು ಅತ್ಯಂತ ಹೀನ ಕೃತ್ಯ : ಸಿದ್ದರಾಮಯ್ಯ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಶಾಲೆಯ ಶೌಚಾಲಯಗಳನ್ನು ಶುಚಿಗೊಳಿಸಲು ವಿದ್ಯಾರ್ಥಿಗಳನ್ನು ಬಳಸುವುದು ಅತ್ಯಂತ ಹೀನ ಕೃತ್ಯ. ಇತ್ತೀಚೆಗೆ ಇಂತಹ ಪ್ರಕರಣಗಳು ವರದಿಯಾಗುತ್ತಿದ್ದು ಇದನ್ನು ಸಹಿಸಲು ಸಾಧ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈಗಾಗಲೇ ವರದಿಯಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಪ್ಪಿತಸ್ಥ ಶಿಕ್ಷಕರ ವಿರುದ್ಧ ಸೂಕ್ತ ಕ್ರಮಕೈಗೊಂಡಿದ್ದಾರೆ. ಇಂತಹ ಕೃತ್ಯಗಳು ಬೇರೆ ಶಾಲೆಗಳಲ್ಲಿ ನಡೆಯುತ್ತಿದ್ದರೆ ಅವುಗಳನ್ನು ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದೇನೆ. ಶಾಲೆ-ಕಾಲೇಜುಗಳ ಹಾಸ್ಟೆಲ್‌ಗಳಲ್ಲಿಯೂ ಈ ಬಗ್ಗೆ ನಿಗಾವಹಿಸುವಂತೆ ಸಮಾಜ ಕಲ್ಯಾಣ ಸಚಿವರಿಗೂ ತಿಳಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಪ್ರತಿಯೊಂದು ಶಾಲೆಯಲ್ಲಿಯೂ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಇರಬೇಕು ಮತ್ತು ಅವುಗಳನ್ನು ಪ್ರತಿದಿನ ಶುಚಿಗೊಳಿಸಲು ಸಿಬ್ಬಂದಿಯನ್ನು ನೇಮಕ ಮಾಡಬೇಕು. ಈ ಬಗ್ಗೆ ಒಂದು ಸಮೀಕ್ಷೆ ನಡೆಸಿ ಜಿಲ್ಲಾ ಶಿಕ್ಷಣಾಧಿಕಾರಿಗಳಿಂದ ವರದಿ ತರಿಸುವಂತೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ಸೂಚಿಸಿರುವುದಾಗಿ ಮಾಹಿತಿ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!