spot_img
Wednesday, April 22, 2026
spot_img

ಹಿಜಾಬ್‌ ವಿವಾದ : ಸ್ವಯಂಘೋಷಿತ ಸಂವಿಧಾನ ತಜ್ಞ ಸಿದ್ದರಾಮಯ್ಯ ಸಾಹೇಬರು… : ಕಾಂಗ್ರೆಸ್‌ ಹಾಗೂ ಸಿದ್ದರಾಮಯ್ಯರನ್ನು ತಿವಿದ ಬಿಜೆಪಿ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಹಿಜಾಬ್‌ ನಿಷೇಧವನ್ನು ಹಿಂಪಡೆಯುವುದಾಗಿ ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಕಿಡಿ ಕಾರಿದೆ.

ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಆಡಳಿತರೂಢ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಬಿಜೆಪಿ, ಪಿಎಫ್ಐ ಗೂಂಡಾಗಳು, ಅಲ್ಪಸಂಖ್ಯಾತರ ಓಲೈಕೆಗಾಗಿ ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತೇವೆ ಎನ್ನುವ ಸಂದೇಶವನ್ನು ಶಾಲೆಗಳಲ್ಲಿ ಹಿಜಾಬ್ ಜಾರಿಗೆ ತರುವುದರ ಮೂಲಕ ತುಷ್ಟೀಕರಣ ವಾದಿ ಸಿದ್ದರಾಮಯ್ಯ ಅವರು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದೆ.

ಇನ್ನು, ಸ್ವಯಂಘೋಷಿತ ಸಂವಿಧಾನ ತಜ್ಞ ಸಿದ್ದರಾಮಯ್ಯ ಸಾಹೇಬರು, ಶಾಲಾ‌ ಸಮವಸ್ತ್ರದ ವಿಚಾರದಲ್ಲಿ ಸುಪ್ರೀಂಕೋರ್ಟ್ ಆದೇಶವನ್ನೇ ಉಲ್ಲಂಘಿಸಿ ಹಿಜಾಬ್ ಜಾರಿಗೊಳಿಸುವುದನ್ನು ಯಾವ ಸಂವಿಧಾನದಲ್ಲಿದೆ ಎಂದು ತಿಳಿಸಬೇಕಿದೆ.

ಅಂಬೇಡ್ಕರ್ ಸಂವಿಧಾನ ನಮಗೆ ಅನ್ವಯಿಸುವುದಿಲ್ಲವೆಂದು ಹೇಳುವವರ ಜತೆ ಸೇರಿ ಸಿದ್ದರಾಮಯ್ಯ ಅವರು ಸಂವಿಧಾನವನ್ನು ಲೆಕ್ಕಿಸದೆ ವೋಟ್ ಬ್ಯಾಂಕ್‌ಗಾಗಿ ಒಂದು ಸಮುದಾಯದ ಅಡಿಯಾಳಾಗಿದ್ದಾರೆ ಎಂದು ತಿವಿದಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!