spot_img
Wednesday, April 22, 2026
spot_img

ಲೋಕಸಭಾ ಚುನಾವಣೆಗೆ ‘ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ’ ರಚನೆ | ಸಮಿತಿಯಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಅಗ್ರಸ್ಥಾನ

ಜನಪ್ರತಿನಿಧಿ ವಾರ್ತೆ (ನವ ದೆಹಲಿ)  : ಮುಂಬರುವ ಲೋಕಸಭಾ ಚುನಾವಣೆಯ ‘ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ’ಯನ್ನು ಕಾಂಗ್ರೆಸ್‌ ಹೈಕಮಾಂಡ್‌ ರಚನೆ ಮಾಡಿದ್ದು, ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಕಾಂಗ್ರೆಸ್‌ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹದಿನಾರು ಮಂದಿರ ಇರುವ ಸಮಿತಿಗೆ ಸೇರಿಸಿಕೊಂಡಿದೆ.

ಕಾಂಗ್ರೆಸ್‌ ನ ಹಿರಿಯ ನಾಯಕ ಪಿ. ಚಿದಂಬರಂ  ‘ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ’ಯ ಚೇರ್‌ಮನ್‌ ಆಗಿರಲಿದ್ದು, ಸಮನ್ವಯಕಾರರಾಗಿ ಟಿ.ಎಸ್‌ ಸಿಂಗ್‌ ಇರಲಿದ್ದಾರೆ. ಉಳಿದಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಿಯಾಂಕ ಗಾಂಧಿ ವಾದ್ರಾ, ಆನಂದ್‌ ಶರ್ಮಾ, ಜೈರಾಮ್‌ ರಮೇಶ್‌, ಶಶಿ ತರೂರ್‌, ಗೈಖಂಗಮ್‌ ಗಾಂಗ್ಮಿ, ಗೌರವ್‌ ಗೊಗೊಯ್‌, ಪ್ರವೀಣ್‌ ಚಕ್ರವರ್ತಿ, ಇಮ್ರಾನ್‌ ಪ್ರತಾಪ್ಗರ್ಹಿ, ಕೆ. ರಾಜು, ಓಂಕಾರ್‌  ಸಿಂಗ್‌, ರಣಜಿತ್‌ ರಂಜನ್‌, ಜಿಗ್ನೇಶ್‌ ಮೇವಾನಿ ಹಾಗೂ ಗುರುದೀಪ್‌ ಸಪ್ಪಲ್‌ ಅವರನ್ನೊಳಗೊಂಡ ಸಮಿತಿಯನ್ನು ಹೈಕಮಾಂಡ್‌ ರಚಿಸಿದೆ.

ಲೋಕಸಭಾ ಚುನಾವಣೆಯ ಬಿರುಸು ಈಗಾಗಲೇ ಆರಂಭವಾಗಿದ್ದು, ಎಲ್ಲಾ ಪಕ್ಷಗಳು ಚುನಾವಣಾ ತಯಾರಿಯಲ್ಲಿದೆ. ಕಾಂಗ್ರೆಸ್‌ ತನ್ನ ಚುನಾವಣಾ ತಂತ್ರ ಹೆಣೆಯುತ್ತಿದ್ದರೇ, ಇತ್ತ ಕಾಂಗ್ರೆಸ್‌ ನೇತೃತ್ವದ ʼಇಂಡಿಯಾʼ ಮೈತ್ರಿಕೂಟವೂ ಕೂಡ ಲೋಕಸಭಾ ಚುನಾವಣೆಗಾಗಿ ರಣತಂತ್ರ ಹೂಡುತ್ತಿದೆ. ಇನ್ನೊಂದೆಡೆ ಆಡಳಿತರೂಢ ಬಿಜೆಪಿ ಕೂಡ ಈಗಾಗಲೇ ಚುನಾವಣೆ ತಂತ್ರಗಾರಿಕೆ ಆರಂಭಿಸಿದೆ.

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ‘ ಸದಸ್ಯತ್ವಕ್ಕೆ ಸಿದ್ದರಾಮಯ್ಯ ಧನ್ಯವಾದ :

ಈ ಬಗ್ಗೆ ತಮ್ಮ ಅಧಿಕೃತ ʼಎಕ್ಸ್‌ʼ ಖಾತೆಯ ಮೂಲಕ ಕಾಂಗ್ರೆಸ್‌ ಹೈಕಮಾಂಡ್‌ ಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ಸಮರ್ಪಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯ ‘ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ’ಯಲ್ಲಿ ನನ್ನನ್ನು ಸದಸ್ಯರನ್ನಾಗಿ ನೇಮಕ ಮಾಡಿರುವುದಕ್ಕಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್‌ ಖರ್ಗೆ ಅವರಿಗೆ ಧನ್ಯವಾದಗಳು.

ನಮ್ಮ ಸರ್ಕಾರದ  ‘ಕರ್ನಾಟಕ ಮಾದರಿ’ ಆಡಳಿತ ಇಂದು ಪಕ್ಷಾತೀತವಾಗಿ ದೇಶದ ಜನ ಗುರುತಿಸುತ್ತಿದ್ದಾರೆ. ಪ್ರಣಾಳಿಕೆ ರಚನೆಯಲ್ಲಿ ನನಗೆ ಅವಕಾಶ ನೀಡಿರುವುದು ಈ ‘ಕರ್ನಾಟಕ ಮಾದರಿ ಆಡಳಿತ’ಕ್ಕೆ ಎಐಸಿಸಿ ನೀಡಿರುವ ಗೌರವ ಎಂದು ನಾನು ತಿಳಿದುಕೊಂಡಿದ್ದೇನೆ.

ಪಕ್ಷದ ಪ್ರಣಾಳಿಕೆ ಎನ್ನುವುದು ಕೇವಲ ಮತದಾರರಿಗೆ ನೀಡುವ ಭರವಸೆಗಳ ಪಟ್ಟಿ ಅಲ್ಲ, ಜನತೆಗೆ ನಾವು ನೀಡುವ ವಚನವಾಗಿದ್ದು ಅದನ್ನು ಅನುಷ್ಠಾನಕ್ಕೆ ತರುವುದು ನಿಜವಾದ ರಾಜಧರ್ಮ ಎಂದು ನಾನು ತಿಳಿದುಕೊಂಡವನು.

ಹಿಂದಿನ ನಮ್ಮ ಸರ್ಕಾರ ‘ಸರ್ವರಿಗೂ ಸಮಪಾಲು – ಸಮಬಾಳು’ ನೀಡುವ ಪ್ರಣಾಳಿಕೆಯಲ್ಲಿನ ಎಲ್ಲ ಭರವಸೆಗಳನ್ನು ಅನುಷ್ಠಾನಗೊಳಿಸಿ ಮಾದರಿ ಆಡಳಿತವನ್ನು ನೀಡಿ ಜನತೆಯ ವಿಶ್ವಾಸಾರ್ಹತೆಯನ್ನು ಗಳಿಸಿದ್ದೆವು. ಅದೇ ಹಾದಿಯಲ್ಲಿ ಈಗಿನ ಸರ್ಕಾರ ಕೂಡಾ ಮುನ್ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ದೇಶದ ಜನತೆ ಕೂಡಾ ಕರ್ನಾಟಕ ಮಾದರಿ ಆಡಳಿತದ ಅನುಕೂಲಗಳನ್ನು ಪಡೆಯುವಂತಾಗಲಿ ಎಂದು ಹಾರೈಸುತ್ತೇನೆ.

ನನ್ನ ಎಲ್ಲ ಯೋಚನೆ-ಯೋಜನೆಗಳಿಗೆ ಪ್ರೋತ್ಸಾಹ ನೀಡಿ ಹುರಿದುಂಬಿಸುತ್ತಿರುವ ಪಕ್ಷದ ಹಿರಿಯರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅವರಿಗೆ ನಾನು ಆಭಾರಿಯಾಗಿದ್ದೇನೆ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!