spot_img
Wednesday, April 22, 2026
spot_img

ಸಿದ್ದರಾಮಯ್ಯ ಒಡೆದು ಆಳುವ ನೀತಿಗೆ ಕೈ ಹಾಕಿದ್ದಾರೆ : ರವಿ ಕುಮಾರ್‌

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ವಿಷಬೀಜ ಬಿತ್ತುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್.‌ ರವಿ ಕುಮಾರ್‌ ವಾಗ್ದಾಳಿ ಮಾಡಿದ್ದಾರೆ.

ಹಿಜಾಬ್‌ ನಿಷೇಧ ವಾಪಾಸ್‌ ಪಡೆಯುತ್ತೇವೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ವಿದ್ಯಾರ್ಥಿಗಳಲ್ಲಿ ಯಾವುದೇ ತಾರತಮ್ಯ ಬರಬಾರದು ಎಂಬ ದೃಷ್ಟಿಯಲ್ಲಿ  ಸಮವಸ್ತ್ರ ನೀತಿಯನ್ನು ಜಾರಿಗೊಳಿಸಿದ್ದರು ಎಂದಿದ್ದಾರೆ.

ಇನ್ನು, ನಮ್ಮ ಸರ್ಕಾರದ ಅವಧಿಯಲೂ ಕೂಡ ಸಮವಸ್ತ್ರವನ್ನೇ ಕಡ್ಡಾಯಗೊಳಿಸಿದ್ದೆವು. ಹೈಕೋರ್ಟ್ ಕೂಡ ನಮ್ಮ ಆದೇಶವನ್ನು ಮಾನ್ಯ ಮಾಡಿತ್ತು. ಆದರೆ ಸಿದ್ದರಾಮಯ್ಯರವರು ಮತ್ತೆ ಹಿಜಾಬಿಗೆ ಅವಕಾಶ ನೀಡುವ ಮೂಲಕ ಒಡೆದು ಆಳುವ ನೀತಿಗೆ ಕೈ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!