spot_img
Tuesday, August 11, 2026
spot_img

WFI ಅಧ್ಯಕ್ಷರಾಗಿ ಬ್ರಿಜ್ ಭೂಷಣ್ ಆಪ್ತನ ಆಯ್ಕೆ ವಿರೋಧಿಸಿ ಪದ್ಮಶ್ರೀ ಹಿಂದಿರುಗಿಸಿದ ವೀರೇಂದ್ರ ಸಿಂಗ್ ಯಾದವ್ 

ಜನಪ್ರತಿನಿಧಿ ವಾರ್ತೆ(ನವ ದೆಹಲಿ) : ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ(ಡಬ್ಲ್ಯುಎಫ್‌ಐ)ದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವುದನ್ನು ವಿರುದ್ಧ ರಿಯೊ ಒಲಿಂಪಿಕ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರು ಕುಸ್ತಿಗೆ ವಿದಾಯ ಹೇಳಿದ್ದು, ಅವರನ್ನು ಬೆಂಬಲಿಸಿ ಹಲವು ಕುಸ್ತಿ ಪಟುಗಳು ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದಾರೆ.

ನಿನ್ನೆಯಷ್ಟೇ ಕುಸ್ತಿ ಪಟು ಬಜರಂಗ್ ಪೂನಿಯಾ ಅವರು ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ. ಈ ಬೆನ್ನಲ್ಲೇ ಇಂದು(ಶನಿವಾರ) ಮತ್ತೊಬ್ಬ ಕುಸ್ತಿಪಟು, ಡೆಫ್ಲಿಂಪಿಕ್ಸ್ ಚಿನ್ನದ ಪದಕ ವಿಜೇತ ವೀರೇಂದ್ರ ಸಿಂಗ್ ಯಾದವ್ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಸರ್ಕಾರಕ್ಕೆ ಹಿಂದಿರುಗಿಸುವುದಾಗಿ ಹೇಳಿದ್ದಾರೆ.

“ನನ್ನ ಸಹೋದರಿ ಹಾಗೂ ದೇಶದ ಮಗಳಿಗಾಗಿ ನಾನು ಪದ್ಮಶ್ರೀಯನ್ನು ಹಿಂದಿರುಗಿಸುತ್ತೇನೆ. ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಜೀ, ನಿಮ್ಮ ಮಗಳು ಹಾಗೂ ನನ್ನ ಸಹೋದರಿ ಸಾಕ್ಷಿ ಮಲಿಕ್ ಅವರ ಬಗ್ಗೆ ನನಗೆ ಹೆಮ್ಮೆ ಇದೆ” ಎಂದು ವೀರೇಂದ್ರ ಸಿಂಗ್ ಯಾದವ್ ಅವರು ತಮ್ಮ ಅಧಿಕೃತ ʼಎಕ್ಸ್ʼ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಅಲ್ಲದೆ ದೇಶದ ಅಪ್ರತಿಮ ಕ್ರೀಡಾಪಟುಗಳಾದ ಸಚಿನ್ ತೆಂಡೂಲ್ಕರ್ ಮತ್ತು ನೀರಜ್ ಚೋಪ್ರಾ ಅವರು ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕು ಎಂದು ವೀರೇಂದ್ರ ಸಿಂಗ್ ಯಾದವ್ ಅವರು ಒತ್ತಾಯಿಸಿದ್ದಾರೆ.

“ದೇಶದ ಅಗ್ರ ಆಟಗಾರರು ತಮ್ಮ ನಿರ್ಧಾರವನ್ನು ಪ್ರಕಟಿಸುವಂತೆ ನಾನು ವಿನಂತಿಸುತ್ತೇನೆ” ಎಂದು ವೀರೇಂದ್ರ ಅವರು ತಮ್ಮ ಪೋಸ್ಟ್‌ನಲ್ಲಿ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಮತ್ತು ಒಲಿಂಪಿಕ್ ಚಾಂಪಿಯನ್ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ ಅವರನ್ನು ಟ್ಯಾಗ್ ಮಾಡಿದ್ದಾರೆ.

ವೀರೇಂದ್ರ ಅವರು 2021ರಲ್ಲಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀಯನ್ನು ಸ್ವೀಕರಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!