spot_img
Wednesday, April 22, 2026
spot_img

ಉಡುಪಿ ಜಿಲ್ಲಾ ರೈತ ಸಂಘದ ವತಿಯಿಂದ ರಾಷ್ಟ್ರೀಯ ರೈತರ ದಿನಾಚರಣೆ: ಸಾಧಕ ಕೃಷಿಕ ಟಿ.ರಮೇಶ ನಾಯಕ್ ಅವರಿಗೆ ಸನ್ಮಾನ


ಕುಂದಾಪುರ, ಡಿ.23: ಭಾರತ ದೇಶದಲ್ಲಿ ಶೇ.70ರಷ್ಟು ಕೃಷಿಕರು ಕೃಷಿಯನ್ನೇ ಅವಲಂಬಿಸಿಕೊಂಡಿದ್ದಾರೆ. ಕೃಷಿ ಪ್ರಧಾನವಾದ ಭಾರತದಲ್ಲಿ ಕೃಷಿಯಲ್ಲಿ ತೊಡಗಿಸಿಕೊಳ್ಳುವುದೆಂದರೆ ರಾಷ್ಟ್ರಗೌರವ ಸಲ್ಲಿಸುವುದೆಂದೇ ಅರ್ಥ. ರೈತರು ಈ ದೇಶದ ಆರ್ಥಿಕತೆಯ ಬೆನ್ನೆಲುಬು. ಕೃಷಿಕರು ಆರ್ಥಿಕವಾಗಿ ಪ್ರಗತಿಯನ್ನು ಸಾಧಿಸಲು ಏಕರೂಪದ ಕೃಷಿ ಪದ್ದತಿಯಿಂದ ಹೊರಬಂದು ಸಮಗ್ರ ಕೃಷಿ ಪದ್ದತಿಯನ್ನು ಅಳವಡಿಸಿಕೊಳ್ಳಬೇಕು. ಮಿಶ್ರ ಬೇಸಾಯ ಪದ್ದತಿಯನ್ನು ವೈಜ್ಞಾನಿಕ ಮಾದರಿಯಲ್ಲಿ ಅನುಷ್ಟಾನಿಸಿದಾಗ ಯಶಸ್ಸು ಸಾಧ್ಯವಾಗುತ್ತದೆ ಪ್ರಗತಿಪರ ಯುವ ಕೃಷಿಕ ರಾಜೇಂದ್ರ ಬೆಚ್ಚಳ್ಳಿ ಹೇಳಿದರು.

ಉಡುಪಿ ಜಿಲ್ಲಾ ರೈತ ಸಂಘದ ವತಿಯಿಂದ ಡಿ.23ರಂದು ಕುಂದಾಪುರದ ಆರ್.ಎನ್.ಶೆಟ್ಟಿ ಮಿನಿ ಸಭಾ ಭವನದಲ್ಲಿ ನಡೆದ ರಾಷ್ಟ್ರೀಯ ರೈತರ ದಿನಾಚರಣೆ ಕಾರ್ಯಕ್ರಮ, ಸಾಧಕ ರೈತರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಡಿಕೆ ಕೃಷಿಯೊಂದನ್ನೇ ನೆಚ್ಚಿಕೊಂಡರೆ ಅಡಿಕೆಗೆ ಧಾರಣೆ ಕುಸಿದಾಗ ಕೃಷಿಕರ ಜೀವನ ಶೋಚನೀಯವಾಗುತ್ತದೆ. ಹಾಗಾಗಿ ಭವಿಷ್ಯದ ದೃಷ್ಟಿಯಿಂದ ಮಿಶ್ರ ಕೃಷಿ ಪದ್ದತಿಯನ್ನು ಅಳವಡಿಸಿಕೊಂಡಾಗ ಆರ್ಥಿಕ ಸಮಾತೋಲನ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ. ಮುಖ್ಯವಾಗಿ ತರಕಾರಿ ಬೆಳೆಯುವ ರೈತರು ಯಾವ ಋತುವಿನಲ್ಲಿ ಯಾವ ಬೆಳೆಗೆ ಹೆಚ್ಚು ಬೇಡಿಕೆ ಇರುತ್ತದೆ ಎನ್ನುವುದನ್ನು ಗಮನಿಸಿ ಕೃಷಿ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲಿಯನೇರ್ ರೈತ ಪ್ರಶಸ್ತಿ ಪುರಸ್ಕೃತರಾದ ಕೆದೂರು ಕಾಮಾಕ್ಷಿ ಫಾರಂನ ಟಿ.ರಮೇಶ ನಾಯಕ್ ಅವರನ್ನು ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಟಿ.ರಮೇಶ ನಾಯಕ್ ಅವರು, ಕೃಷಿಯಲ್ಲಿ ಕೃಷಿಕರು ಹೊಸತನ, ಪ್ರಯೋಗಶೀಲತೆಗೆ ಹೊಂದಿಕೊಳ್ಳುತ್ತಾ ಇರಬೇಕಾಗುತ್ತದೆ. ಹೊಸದಾಗಿ ಕೃಷಿ ಮಾಡುವ ಮೊದಲು ಯಶಸ್ವಿ ತೋಟಗಳಿಗೆ ಭೇಟಿ ನೀಡಿ ಅಧ್ಯಯನ ಮಾಡಬೇಕು. ಅನುಭವಿ ಕೃಷಿಕರು, ಕೃಷಿ ತಜ್ಞರ ಮಾರ್ಗದರ್ಶನ ಪಡೆದುಕೊಳ್ಳಬೇಕು. ವೈಜ್ಞಾನಿಕ ಮನೋಭಾವವನ್ನು ಮೈಗೂಡಿಸಿಕೊಳ್ಳಬೇಕು. ಸಮಗ್ರ ನೀರು ನಿರ್ವಹಣೆ, ಸಸ್ಯ ಸಂರಕ್ಷಣೆ, ಸಸ್ಯಗಳ ಬೆಳವಣಿಗೆಯ ಬಗ್ಗೆ ಸತತ ಆಸಕ್ತಿಯನ್ನು ಮೈಗೂಡಿಸಿಕೊಳ್ಳಬೇಕು. ಬೆಳೆದ ಬೆಳೆಯನ್ನು ಮೌಲ್ಯ ವರ್ಧನೆ ಮಾಡುವುದು, ಗ್ರಾಹಕರಿಗೆ ತಲುಪಿಸುವ ಬಗ್ಗೆಯೂ ರೈತರು ಯೋಚನೆ ಮಾಡಬೇಕು, ಅಧ್ಯಯನಶೀಲತೆ, ಪ್ರಯೋಗಶೀಲತೆ, ಸುಧಾರಿತ ಕೃಷಿ ಪದ್ದತಿಗಳ ಅಳವಡಿಕೆಯ ಬಗ್ಗೆ ಸದಾ ಕೃಷಿಕರು ಆಸಕ್ತರಾಗಿದ್ದಲ್ಲಿ ಕೃಷಿಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿದೆ ಎಂದರು.
ರೈತ ಮುಖಂಡರಾದ ಸಂಪಿಗೇಡಿ ಸಂಜೀವ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತೋಟಗಾರಿಕಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಮಧುಕರ ಅವರು ಫ್ರುಟ್ ತಂತ್ರಾಂಶ ಹಾಗೂ ಹವಮಾನ ಆಧರಿತ ಬೆಳೆಯ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ರೈತ ಸಂಘದ 2024ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು. ಉಡುಪಿ ಜಿಲ್ಲಾ ರೈತ ಸಂಘದ ಹಂಗಾಮಿ ಅಧ್ಯಕ್ಷ ಕೆದೂರು ಸದಾನಂದ ಶೆಟ್ಟಿ, ಉಡುಪಿ ಜಿಲ್ಲಾ ರೈತ ಸಂಘದ ವಕ್ತಾರ ವಿಕಾಸ್ ಹೆಗ್ಡೆ, ಹಾಪ್ ಕಾಮ್ಸ್ ಅಧ್ಯಕ್ಷ ಸೀತರಾಮ ಗಾಣಿಗ ಹಾಲಾಡಿ, ಉಡುಪಿ ಜಿಲ್ಲಾ ರೈತ ಸಂಘದ ಖಜಾಂಚಿ ಭೋಜ ಕುಲಾಲ ಹಾಗೂ ವಲಯಾಧ್ಯಕ್ಷರು ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಸತೀಶ ಕಿಣಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರೈತ ಸಂಘದ ಕಾವ್ರಾಡಿ ವಲಯಾಧ್ಯಕ್ಷ ಶರತ್ಚಂದ್ರ ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು. ವಂಡ್ಸೆ ವಲಯಾಧ್ಯಕ್ಷ ಉದಯ ಕುಮಾರ್ ಶೆಟ್ಟಿ ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!