spot_img
Wednesday, April 22, 2026
spot_img

ವಂಡ್ಸೆ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಕ್ರೀಡೋತ್ಸವ

ಕುಂದಾಪುರ: ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಕ್ರೀಡಾಕೂಟಗಳಲ್ಲಿ ಸಿಗುವ ಅವಕಾಶಗಳನ್ನು ತಮ್ಮಲ್ಲಿ ಅಡಗಿರುವ ಕ್ರೀಡಾಪ್ರತಿಭೆ ಹೊರಹೊಮ್ಮಲು ಸಾಧ್ಯವಿದೆ. ಪ್ರತಿಭೆಗಳಿಗೆ ಪ್ರೋತ್ಸಾಹದಾಯಕ ವಾತಾವರಣ ಈ ಶಾಲೆಯಲ್ಲಿದೆ ಎಂದು ರಾಷ್ಟ್ರೀಯ ವಾಲಿಬಾಲ್ ಆಟಗಾರ ನವೀನ್ ಕಾಂಚನ್ ಹೇಳಿದರು.

ಅವರು ಇತ್ತೀಚೆಗೆ ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಕ್ರೀಡೋತ್ಸವವನ್ನು ಕ್ರೀಡಾಜ್ಯೋತಿಯನ್ನು ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಮೂಕಾಂಬಿಕ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿ ಸೀತರಾಮ ಶೆಟ್ಟಿ ತೊಂಭತ್ತು ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಸಿ.ಆರ್.ಪಿ ನಾಗರಾಜ ಶೆಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷೆ ಡಾ.ಪೂರ್ಣಿಮಾ ಶೆಟ್ಟಿ, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ, ಗ್ರಾಮ ಪಂಚಾಯತಿ ಉಪಾಧ್ಯಕ್ಷ ಗೋವರ್ದನ್ ಜೋಗಿ, ಗ್ರಾಮ ಪಂಚಾಯಿತಿ ಸದಸ್ಯ ಪ್ರಶಾಂತ ಪೂಜಾರಿ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ರಾಜು, ನಿವೃತ್ತ ಮುಖ್ಯೋಪಾಧ್ಯಾಯಿನಿ ಆಶಾ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ದಿವಾಕರ ಸುಜಿ, ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಚಂದ್ರ ರಾಯಪ್ಪನಡಿ, ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕವೃಂದದವರು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರು ಉಪಸ್ಥಿತರಿದ್ದರು.

ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಸದಾಶಿವ ಸ್ವಾಗತಿಸಿದರು. ಪುಟಾಣಿ ಪ್ರದ್ವಿತಾ ಅತಿಥಿಗಳನ್ನು ಗೌರವಿಸಿದಳು, ವಿದ್ಯಾರ್ಥಿನಿ ಶ್ರದ್ದಾ ಕ್ರೀಡಾ ಪ್ರತಿಜ್ಞೆ ಬೋಧಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್ ಕಾರ್ಯಕ್ರಮ ನಿರ್ವಹಿಸಿದರು.

ಶಾಲೆಯ ಶಿಕ್ಷಕರಾದ ನಾಗವೇಣಿ, ಪ್ರತಾಪ ಕುಮಾರ್ ಶೆಟ್ಟಿ, ಸುಧಾಕರ ಮರಕಾಲ, ಇಂದಿರಾ, ರವಿಚಂದ್ರ, ಶಾಂತಲಾ ನಾಯ್ಕ್, ವಾಣಿಶ್ರೀ, ಪ್ರೇಮ ಶೆಟ್ಟಿ, ಭಾರತಿ, ಶೈಲಾಶ್ರೀ, ವಿದ್ಯಾರಾಣಿ, ಪಲ್ಲವಿ, ರೇವತಿ, ಅಂಬಿಕಾ, ಆಶಾ, ಅಂಗನವಾಡಿ ಕಾರ್ಯಕರ್ತೆ ಮೂಕಾಂಬು ಹಾಗೂ ಶಾಲೆಯ ಬೋದಕೇತರ ಸಿಬ್ಬಂದಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಪ್ರಾರಂಭದಲ್ಲಿ ಆಕರ್ಷಕ ಪಥಸಂಚಲನ ನಡೆಯಿತು. ವಿಭಾಗ ಮಟ್ಟವನ್ನು ಪ್ರತಿನಿಧಿಸಿದ ವಿದ್ಯಾರ್ಥಿಗಳು ಕ್ರೀಡಾಜ್ಯೋತಿಯನ್ನು ಹೊತ್ತು ತಂದರು. ಕ್ರೀಡೋತ್ಸವದಲ್ಲಿ ಮಕ್ಕಳನ್ನು ಕದಂಬ, ರಾಷ್ಟ್ರಕೂಟ, ಚಾಲುಕ್ಯ ಮತ್ತು ಹೊಯ್ಸಳ ಎಂಬ ನಾಲ್ಕು ತಂಡಗಳನ್ನಾಗಿ ವಿಭಾಗಿಸಿದ್ದು ವಿಶೇಷವಾಗಿತ್ತು. ವಿಜಯವೇದಿಕೆಯಲ್ಲಿ ವಿಜೇತರಿಗೆ ಚಿನ್ನ, ಬೆಳ್ಳಿ, ಕಂಚಿನ ಬಣ್ಣದ ಕಿರೀಟಗಳನ್ನು ತೊಡಿಸಿ, ಪ್ರಶಸ್ತಿ ಪತ್ರದೊಂದಿಗೆ ಬಹುಮಾನ ವಿತರಿಸಲಾಯಿತು. ಸಮಗ್ರ ಬಹುಮಾನ, ವೈಯಕ್ತಿಕ ಪ್ರಶಸ್ತಿ, ತಂಡ ಪ್ರಶಸ್ತಿಯ ಮೂಲಕ ಮಕ್ಕಳಲ್ಲಿ ಸ್ಪರ್ಧಾಸ್ಪೂರ್ತಿ ಮತ್ತು ಪಾಳ್ಗೊಳ್ಳುವಿಕೆಯನ್ನು ಉತ್ತೇಜಿಸಲಾಯಿತು. ವಿದ್ಯಾರ್ಥಿಗಳಿಗೆ ಕ್ರೀಡಾಕೂಟದ ಮಹತ್ವ, ಕ್ರಮಬದ್ಧವಾಗಿ ಕ್ರೀಡಾಕೂಟ ಹೇಗೆ ನಡೆಯುತ್ತದೆ ಎನ್ನುವುದನ್ನು ಪ್ರಾಯೋಗಿಕವಾಗಿ ವಿದ್ಯಾರ್ಥಿಗಳು ನೋಡಲು ಸಹಕಾರಿಯಾಯಿತು.

ಶಾಲಾ ವಾರ್ಷಿಕೋತ್ಸವಕ್ಕೆ ಪೂರ್ವಭಾವಿಯಾಗಿ ವಿವಿಧ ಸ್ಪರ್ಧೆಗಳನ್ನು ನಡೆಸುವುದು, ಆ ಸ್ಪರ್ಧೆಗಳ ಬಹುಮಾನ ವಿತರಣೆಗಾಗಿ ಸಭಾ ಕಾರ್ಯಕ್ರಮ ತೀರಾ ದೀರ್ಘವಾಗಿ ಮಕ್ಕಳ ಸಹನೆ ಕೆಡುವುದೂ, ಬಹುಮಾನ ವಿತರಣೆಯನ್ನು ಬೇಗ ಮುಗಿಸಲು ಮಕ್ಕಳನ್ನು ಅವಸರದಲ್ಲಿ ಕಳಿಸಬೇಕಾಗುವುದೂ, ಕೆಲವೊಮ್ಮೆ ದೀರ್ಘವಾದೀತು ಎಂಬ ಕಾರಣಕ್ಕೆ ಸ್ಪರ್ಧೆಗಳ ಸಂಖ್ಯೆಯನ್ನೇ ಕಡಿತಗೊಳಿಸುವುದೂ ತೀರಾ ಸಾಮಾನ್ಯ ಎನಿಸಿಬಿಟ್ಟಿದೆ. ಇದಕ್ಕೆ ಪರ್ಯಾಯವಾಗಿ ಸ್ಪರ್ಧೆಯ ದಿನದಂದೇ ಬಹುಮಾನವನ್ನು ವಿತರಿಸುವ ಪರಿಪಾಠವನ್ನು ವಂಡ್ಸೆ ಶಾಲೆ ಈ ವರ್ಷದಿಂದ ಆರಂಭಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!