spot_img
Wednesday, January 22, 2025
spot_img

ಹಿಜಾಬ್‌ ವಿವಾದ : ಸುಖಾಸುಮ್ಮನೆ ಗೊಂದಲ ಸೃಷ್ಟಿ ಮಾಡುವ ಅಗತ್ಯವಿಲ್ಲ : ರಾಜ್ಯ ಸರ್ಕಾರ

ಜನಪ್ರತಿನಿಧಿ ವಾರ್ತೆ(ಬೆಂಗಳೂರು) : ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದ್ದು, ಹಿಜಾಬ್ ಮತ್ತೆ ಜಾರಿಗೆ ಬಂದರೆ ಅದಕ್ಕೆ ಪ್ರತಿಯಾಗಿ ಕೇಸರಿ ಶಾಲು ಧರಿಸಿ ಶಾಲೆಗೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಮುಖಂಡರು ಸರ್ಕಾರಕ್ಕೆ ಸವಾಲು ಎಸೆದಿದ್ದಾರೆ.

ತಾಕತ್ತಿದ್ದರೆ ಹಿಜಾಬ್ ವಾಪಸ್ ತನ್ನಿ  ನೋಡೋಣ ಎಂದು ಹಿಂದೂ ಸಂಘಟನೆಯ ಮುಖಂಡ ಕಲ್ಲಡ್ಕ ಪ್ರಭಾಕರ್ ಸವಾಲು ಹಾಕಿದರೆ, ಹಿಜಾಬ್ ಹಿಂದೆ ತಿರುಗುವ ಸಿದ್ಧರಾಮಯ್ಯ ತಾಕತ್ತಿದ್ದರೆ ಭಾರತ ಹಿಂದೂ ರಾಷ್ಟ್ರ ಆಗುವುದನ್ನು, ನಮ್ಮ ಮಕ್ಕಳು ಕೇಸರಿ ಶಾಲು ಹಾಕುವುದನ್ನು ತಡೆಯಲಿ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ.

ಇದೇ ವೇಳೆ ಬಿಜೆಪಿ, ಹಿಂದೂ ಸಂಘಟನೆಗಳ ಮುಖಂಡರ ಹೇಳಿಕೆಗೆ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಮುಖಂಡರು ಪ್ರತಿದಾಳಿ ಮಾಡಿದ್ದಾರೆ.

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆನ್ನು ಕೊಟ್ಟ ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್, ಹಿಜಾಬ್ ವಿಚಾರದಲ್ಲಿ ನಾವು ಆದೇಶವೇ ಮಾಡಿಲ್ಲ. ಒಂದು ವೇಳೆ ಮಾಡಿದ್ದರೂ ಪರಿಶೀಲನೆ ಮಾಡುತ್ತೇವೆ ಎಂಬ ಮಾತನ್ನು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅದರ ಸಾಧಕ-ಬಾಧಕವನ್ನು ನೋಡಿಕೊಂಡು ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ. ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಮುಸ್ಲಿಂ ಸಮುದಾಯದವರು ಹಿಜಾಬ್ ಹಾಕಿಕೊಂಡೇ ಬರುತ್ತಾರೆ. ಬಿಜೆಪಿ ಸರ್ಕಾರ ಬಂದ ಬಳಿಕ ಈ ಗೊಂದಲ ಸೃಷ್ಟಿಯಾಗಿದೆ. ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿದ್ದರೂ ಸಂವಿಧಾನದ ಚೌಕಟ್ಟಿನೊಳಗೇ ತೆಗೆದುಕೊಳ್ಳುತ್ತೇವೆ. ಇದು ಕೆಲವರಿಗೆ ನೋವಾಗಬಹುದು. ಇನ್ನು ಕೆಲವರಿಗೆ ಸಂತೋಷವಾಗಬಹುದು ಎಂದು ಅವರು ತಮ್ಮ ಅಭಿಪ್ರಾಯ ಪಟ್ಟರು.

ನೈತಿಕ ಪೊಲೀಸ್‌ಗಿರಿ ತಡೆಗೆ ಆ್ಯಂಟಿ ಕಮ್ಯುನಲ್ ವಿಂಗ್ ಮಾಡಿದ್ದರೂ ಕಡಿವಾಣ ಬಿದ್ದಂತಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಬಹಳಷ್ಟು ಕಡಿಮೆ ಆಗಿದೆ ಎಂಬುದು ನಮಗೆ ಬಂದ ಮಾಹಿತಿ. ನೈತಿಕ ಪೊಲೀಸ್ ಗಿರಿಗಳ ಸಂಖ್ಯೆ ಕಡಿಮೆಯಾಗಿದ್ದಂತೂ ಸತ್ಯ. ಸಮಾಜದಲ್ಲಿ ಸಾಮರಸ್ಯ ಇರಬೇಕು. ಅಹಿತಕರ ಘಟನೆಗಳಿಗೆ ಅವಕಾಶ ಕೊಡಬೇಡಿ. ಪೊಲೀಸ್ ಕಮಿಷನರ್, ಎಸ್​ಪಿ, ಪೊಲೀಸ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಹಾಗೆಂದು ಎಲ್ಲರ ಮೇಲೂ ಕೇಸ್ ಹಾಕಬೇಕೆಂದಲ್ಲ. ಯಾರು ನೈತಿಕ ಪೊಲೀಸ್ ಗಿರಿ ಮಾಡುತ್ತಾರೋ ಅಂಥವರ ಮೇಲೆ ಕ್ರಮ ಜರುಗಿಸಬೇಕು. ಯಾರು ನೈತಿಕ ಪೊಲೀಸ್ ಗಿರಿ ಮಾಡಿಲ್ಲವೋ ಅವರು ಯಾವುದೇ ಆತಂಕಿತರಾಗುವ ಅಗತ್ಯವಿಲ್ಲ ಎಂದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!