spot_img
Wednesday, April 22, 2026
spot_img

ಯತ್ನಾಳ ಮೂರನೇ ಟಿಪ್ಪು ಸುಲ್ತಾನ್ : ಸಚಿವ ಎಂ. ಬಿ. ಪಾಟೀಲ ಹೇಳಿದ್ದೇನು ?

ಜನಪ್ರತಿನಿಧಿ ವಾರ್ತೆ(ಬೆಂಗಳೂರು) : ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಿಂದೊಮ್ಮೆ ಟಿಪ್ಪು ಸುಲ್ತಾನ್‌ ಜಯಂತಿಯಲ್ಲಿ ಪಾಲ್ಗೊಂಡಿದ್ದರು. ಹಾಗಾಗಿ ಯತ್ನಾಳ ಮೂರನೇ ಟಿಪ್ಪು ಸುಲ್ತಾನ್ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ದಿ ಸಚಿವ ಎಂ. ಬಿ. ಪಾಟೀಲ ತಿರುಗೇಟು ನೀಡಿದ್ದಾರೆ.

ಯತ್ನಾಳ ಅವರು ಸಿಎಂ ಸಿದ್ಧರಾಮಯ್ಯ ಅವರನ್ನು ಎರಡನೇ ಟಿಪ್ಪು ಸುಲ್ತಾನ್ ಎಂದು ಹೇಳಿದ್ದಾರೆಂದು ಇಂದು(ಸೋಮವಾರ) ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಯತ್ನಾಳ ಕೂಡ ಟಿಪ್ಪು ಸುಲ್ತಾನ ಜಯಂತಿಯಲ್ಲಿ ಪಾಲ್ಗೊಂಡಿರುವ ಫೋಟೋಗಳು ಇವೆ. ಹಾಗಾದರೆ ಅವರನ್ನು ಮೂರನೇ ಟಿಪ್ಪು ಸುಲ್ತಾನ ಎನ್ನಬಹುದು ಎಂದು ವ್ಯಂಗ್ಯವಾಡಿದ್ದಾರೆ.

ಟಿಪ್ಪು ಸುಲ್ತಾನ್ ಬ್ರಿಟಿಷರೊಂದಿಗೆ ಹೋರಾಡಿದ್ದಾರೆ. ಇದು ಸತ್ಯ. ಈ ಇತಿಹಾಸವನ್ನು ಯಾರೂ ಬದಲಿಸಲು ಸಾಧ್ಯವಿಲ್ಲ. ಬಿಜೆಪಿಯ ಕುರಿತು ಕಾಂಗ್ರೆಸ್ ನಾಯಕ ಬಿ ಕೆ ಹರಿಪ್ರಸಾದ್ ಮಾಡಿರುವ ಟೀಕೆಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಹರಿಪ್ರಸಾದ್ ಅವರು ಏನು ಮಾತನಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದರು.

ಸ್ವಾತಂತ್ರ್ಯ ಹೋರಾಟಕ್ಕೆ ಬಿಜೆಪಿ ಹಾಗೂ ಆರ್ ಎಸ್ ಎಸ್ ನವರ ಕೊಡುಗೆ ಏನೇನೂ ಇಲ್ಲ. ಆದರೆ, ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ಸಿಗರು, ಈ ದೇಶದ ಜನತೆ, ಎಲ್ಲ‌ ಜಾತಿ ವರ್ಗದ ಜನ, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಝಾನ್ಸಿ ರಾಣಿ ಲಕ್ಷ್ಮಿಬಾಯಿ ಸೇರಿದಂತೆ ಅನೇಕ ಮಂದಿ ಹೋರಾಟಗಾರರು ಪಾಲ್ಗೊಂಡಿದ್ದಾರೆ. ಈ ಹೋರಾಟದಲ್ಲಿ ಹುತಾತ್ಮರಾದವರಲ್ಲಿ ಹಿಂದುಗಳು, ಮುಸ್ಲಿಮರು, ಸಿಖ್ಖರು ಸೇರಿದಂತೆ ಎಲ್ಲ ಧರ್ಮದವರು ಸೇರಿದ್ದಾರೆ. ಆ ಹೆಸರುಗಳ ಪಟ್ಟಿಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯವರು ಯಾರೊಬ್ಬರೂ ಇಲ್ಲ. ಇವರು ಈಗ ಬಂದು ರಾಷ್ಟ್ರೀಯತೆ ಬಗ್ಗೆ, ದೇಶದ ಬಗ್ಗೆ ಮಾತನಾಡುತ್ತಿರುವುದು ಎಲ್ಲರಿಗೂ ಗೊತ್ತಿದೆ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!