spot_img
Wednesday, April 22, 2026
spot_img

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ : ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯ : ಉಲ್ಲಂಘಿಸಿದರೆ ಕ್ರಮ : ರಾಜ್ಯ ಸರ್ಕಾರ

ಜನಪ್ರತಿನಿಧಿ ವಾರ್ತೆ( ಬೆಂಗಳೂರು) : ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು “ಕನ್ನಡಿಗ”ರೇ ಎಂದು ಭಾವಿಸಿದ್ದೇವೆ.  ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯವೂ ಹೌದೆಂದು ರಾಜ್ಯ ಕಾಂಗ್ರೆಸ್‌ ಸರ್ಕಾರ ಹೇಳಿದೆ.

ಕನ್ನಡದ ವಿಚಾರದಲ್ಲಿ ರಾಜ್ಯ ಸರ್ಕಾರ  ವಿಶೇಷ ಕಾಳಜಿ ವಹಿಸಿದ್ದು, ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ “ಹೆಮ್ಮೆಯ ಕನ್ನಡಿಗ”ರಾಗಿ ಎಂದು ಮನವಿ ಮಾಡಿಕೊಂಡಿದೆ.

ಮಾತ್ರವಲ್ಲದೇ, ಫೆಬ್ರವರಿ 28ರೊಳಗೆ ನಿಯಮ ಪಾಲಿಸದಿದ್ದಲ್ಲಿ ಕಟ್ಟು ನಿಟ್ಟಿನ ಕ್ರಮ ನಿಶ್ಚಿತ ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!