spot_img
Wednesday, April 22, 2026
spot_img

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತವರು ಜಿಲ್ಲೆಯಲ್ಲೇ ಕೋಟಿ ಕೋಟಿ ಅಕ್ರಮ ಬಿಲ್‌ ಸಲ್ಲಿಸಿ ಕಲೆಕ್ಷನ್‌ ದಂಧೆ ನಡೆಸಲಾಗುತ್ತಿದೆ : ಬಿಜೆಪಿ ಆರೋಪ

ಜನಪ್ರತಿನಿಧಿ ವಾರ್ತೆ (ಬೆಳಗಾವಿ) : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತರುವ ಜಿಲ್ಲೆ ಬೆಳಗಾವಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಚೇರಿಯಲ್ಲಿಯೇ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂಬ ಖಾಸಗಿ ಸುದ್ದಿ ವಾಹಿನಿಯ ವರದಿಯೊಂದನ್ನು ಉಲ್ಲೇಖಿಸಿ ರಾಜ್ಯ ಬಿಜೆಪಿ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದೆ.

ಈ ಬಗ್ಗೆ ತನ್ನ ಅಧಿಕೃತ ʼಎಕ್ಸ್‌ʼ ಖಾತೆಯ ಮೂಲಕ ಕಾಂಗ್ರೆಸ್‌ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ, ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತವರು ಜಿಲ್ಲೆಯಲ್ಲೇ ಕೋಟಿ ಕೋಟಿ ಅಕ್ರಮ ಬಿಲ್‌ ಸಲ್ಲಿಸಿ ಕಲೆಕ್ಷನ್‌ ದಂಧೆ ನಡೆಸಲಾಗುತ್ತಿದೆ ಎಂದು ಆರೋಪಿಸಿದೆ.

ರೂ. 2 ಕೋಟಿ ನಕಲಿ ಬಿಲ್‌ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಚೇರಿಯಿಂದ ಮೇಲುಸಹಿ ಬೇರೆ ಪಡೆಯಲಾಗಿದೆ ಎಂದರೆ ಅಧಿಕಾರಿಗಳು ಮತ್ತು ಸಚಿವಾಲಯ ಭ್ರಷ್ಟಾಚಾರದಲ್ಲಿ ಹಾಸು ಹೊಕ್ಕಾಗಿದ್ದಾರೆ. ಬಾಣಂತಿಯರಿಗೆ ಮತ್ತು ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರವನ್ನು ನೀವು ಈ ರೀತಿ ತಿಂದರೆ ಜನ ಕ್ಷಮಿಸುತ್ತಾರೆ ಎಂದು ಅಂದುಕೊಂಡಿದ್ದೀರಾ ಲಕ್ಷ್ಮೀ ಹೆಬ್ಬಾಳ್ಕರ್‌ ಅವರೇ ? ಎಂದು ಹೆಬ್ಬಾಳ್ಕರ್‌ ಅವರನ್ನು ಪ್ರಶ್ನಿಸಿದೆ.

ಅಮಾನತುಗೊಂಡ ಉಪ ನಿರ್ದೇಶಕರಿಂದ ಭ್ರಷ್ಟಾಚಾರ ಬಯಲಾಗಿದೆ ಎಂಬ ವರಿಯನ್ನು ಉಲ್ಲೇಖಿಸಿ ಬಿಜೆಪಿ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಕಾಂಗ್ರೆಸ್‌ ವಿರುದ್ಧ ಟೀಕಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!