spot_img
Wednesday, April 22, 2026
spot_img

ಬಿಜೆಪಿ ವಿಧಾನ ಪರಿಷತ್‌ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ನೇಮಕ | ಅರವಿಂದ ಬೆಲ್ಲದ ವಿಧಾನಸಭೆಯ ಉಪ ನಾಯಕ !

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಆರು ತಿಂಗಳ ನಂತರ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಲಿಂಗಾಯತ ನಾಯಕ ಬಿ ವೈ ವಿಜಯೇಂದ್ರ ಅವರನ್ನ ಬಿಜೆಪಿ ಆಯ್ಕೆ ಮಾಡಿತ್ತು. ಬಳಿಕ ವಿಧಾನ ಸಭೆಗೆ ವಿರೋಧ ಪಕ್ಷದ ನಾಯಕನನ್ನಾಗಿ ಆರ್‌ ಅಶೋಕ್‌ ಅವನ್ನು ಆಯ್ಕೆ ಮಾಡಿತ್ತು.

ಈಗ ವಿಧಾನ ಪರಿಷತ್ ಗೆ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು ಆಯ್ಕೆ ಮಾಡಿ ನೇಮಿಸಲಾಗಿದೆ.  

ಬಿಜೆಪಿಯ ಹಿರಿಯ ನಾಯಕರಾಗಿದ್ದು, ಸರಕಾರದ ವಿವಿಧ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗಿದೆ. 2009 ರಲ್ಲಿ, ಅವರು ಮೊದಲ ಬಾರಿಗೆ ಕರ್ನಾಟಕ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದರು.

ಇನ್ನು, ವಿಧಾನ ಪರಿಷತ್‌ ನ ಉಪ ನಾಯಕನಾಗಿ ಸುನೀಲ್‌ ವಲ್ಯಾಪುರೆ  ಹಾಗೂ ಎನ್.‌ ರವಿಕುಮಾರ್‌ ಅವರನ್ನು ಮುಖ್ಯ ಸಚೇತಕರಾಗಿ ನೇಮಿಸಲಾಗಿದೆ.

ಕರ್ನಾಟಕ ವಿಧಾನಸಭಾ ವಿರೋಧ ಪಕ್ಷದ ಉಪ ನಾಯಕನಾಗಿ ಶಾಸಕ ಅರವಿಂದ ಬೆಲ್ಲದ ಹಾಗೂ ಮುಖ್ಯ ಸಚೇತಕರಾಗಿ ದೊಡ್ಡನಗೌಡ ಜಿ. ಪಾಟೀಲ್‌ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಸೂಚನೆಯ ಮೇರೆಗೆ ನಿಯುಕ್ತಿ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ. ವೈ ವಿಜಯೇಂದ್ರ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!