Sunday, September 8, 2024

ನಡೂರು ಪಟೇಲ್ ಶ್ರೀ ಅಂತಯ್ಯ ಶೆಟ್ಟಿ ಸ್ಮಾರಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡೂರು ಶಾಲಾ ವಾರ್ಷಿಕೋತ್ಸವ

ಬ್ರಹ್ಮಾವರ :ಗ್ರಾಮೀಣ ಭಾಗದ ಶಾಲೆಗಳಿಗೆ ಸರಿಯಾದ ಮೂಲಭೂತ ಸೌಕರ್ಯಗಳು ಲಭ್ಯವಾದಾಗ ಮಾದರಿ ಶಾಲೆಯಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ. ಶಾಲಾ ವಾರ್ಷಿಕೋತ್ಸವಗಳಲ್ಲಿ ಭಾಷಣಗಳನ್ನು ಸೀಮಿತವಾಗಿಟ್ಟು ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಹೆಚ್ಚು ಅವಕಾಶ ದೊರಕಿಸಿಕೊಡಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆ ಅಭಿಪ್ರಾಯಿಸಿದರು 

ಅವರು ನಡೂರು ಪಟೇಲ್ ಶ್ರೀ ಅಂತಯ್ಯ ಶೆಟ್ಟಿ ಸ್ಮಾರಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡೂರು ಇಲ್ಲಿನ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಶಾಲಾ ವಿವೇಕ ಕೊಠಡಿಗಳನ್ನು ಉದ್ಘಾಟಿಸಿದ ಕುಂದಾಪುರ ವಿಧಾನ ಸಭಾ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ ಮುಂದಿನ ದಿನಗಳಲ್ಲಿ ಶಾಲೆಗೆ ಬೇಕಾಗುವ ಸೌಕರ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಲoಧರ್ ಶೆಟ್ಟಿ ವಹಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉದ್ಯಮಿ ಗಣೇಶ್ ಪ್ರಸಾದ್ ಕಾಂಚನ್,ಕಾಡೂರು ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಮಹೇಶ್ ಕೆ,ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಸಾಧು ಸೇರಿಗಾರ್ , ಸಿ . ಆರ್. ಪಿ. ಚಂದ್ರಶೇಖರ್ ಮೊಗೇರ, ಬಿ . ಆರ್. ಪಿ ಉದಯ ಕೋಟ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಫದ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ ಹಾವಂಜೆ, ಗ್ರಾಮ ಪಂಚಾಯತ್ ಸದಸ್ಯರಾದ ಪಾಂಡುರಂಗ ಶೆಟ್ಟಿ,ಶೈಕ್ಷಣಿಕ ಚಿಂತಕರಾದ ಸಖರಾಮ್ ಸೋಮಯಾಜಿ,ಎಸ್. ಡಿ. ಎಂ. ಸಿ ಅಧ್ಯಕ್ಷರಾದ ನಾರಾಯಣ ಆಚಾರಿ,ಶಾಲಾ ಶೈಕ್ಷಣಿಕ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ರಾದ ರಾಜರಾಮ್ ಶೆಟ್ಟಿ, , ಶಾಲಾ ನಾಯಕಿ ಸಾಕ್ಷಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವರ್ಗಾವಣೆಗೊಂಡ ಶಿಕ್ಷಕಿಯರಾದ ಗ್ರೇಸಿ ರೆಬೆಲ್ಲೋ ಹಾಗೂ ಆಶಾ ಬಿ, ಇವರನ್ನು ಸನ್ಮಾನಿಸಲಾಯಿತು, ಸ್ಪರ್ಧೆಗಳಲ್ಲಿ ವಿಜೇತರಾದ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಹಳೇ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.

ಶಾಲಾ ಮುಖ್ಯ ಶಿಕ್ಷಕರಾದ ವಿಷ್ಣು ಮೊಗೇರ ವರದಿ ವಾಚಿಸಿ,ದೈಹಿಕ ಶಿಕ್ಷಣ ಶಿಕ್ಷಕರಾದ ಸುಭಾಸ್ ಕೆ ಶೆಟ್ಟಿ ಸ್ವಾಗತಿಸಿ, ಉಪನ್ಯಾಸಕ ನಾಗರಾಜ್ ವಂದಿಸಿದರು. ಶಿಕ್ಷಕ ಶಶಿಧರ್ ಶೆಟ್ಟಿ ನಿರೂಪಿಸಿದರು. ನಂತರ ಶಾಲಾ ಮಕ್ಕಳಿಂದ ಅಂಗನವಾಡಿ ಪುಟಾಣಿಗಳಿಂದ  ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!