spot_img
Wednesday, April 22, 2026
spot_img

ಶ್ರೀರಾಮ ಮಂದಿರ ಉದ್ಘಾಟನೆಗೆ ಕುಮಾರಸ್ವಾಮಿಗೆ ಆಹ್ವಾನ | ಸಂತೋಷದಿಂದ ಶ್ರೀರಾಮನ ಸೇವಾ ಕೈಂಕರ್ಯದಲ್ಲಿ ಭಾಗಿಯಾಗುತ್ತೇನೆ : ಎಚ್‌ಡಿಕೆ

ಜನಪ್ರತಿನಿಧಿ ವಾರ್ತೆ ( ಬೆಂಗಳೂರು) : ಅಯೋಧ್ಯ ಶ್ರೀರಾಮ ಮಂದಿರದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ.  ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿದೆ. ಇನ್ನೊಂದೆಡೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಗಣ್ಯರಿಗೆ ಆಹ್ವಾನಿಸುತ್ತಿದೆ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಗಳಿಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಿದೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಎಚ್‌. ಡಿ ಕುಮಾರಸ್ವಾಮಿ ಅವರಿಗೆ ಶ್ರೀರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಟ್ರಸ್ಟ್‌ ಆಹ್ವಾನ ನೀಡಿದೆ.

ರಾಮಮಂದಿರದಲ್ಲಿ ಜ.22 ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಬರಬೇಕು ಎಂದು ಮಾಜಿ ಸಿಎಂ ಹೆಚ್‌ಡಿಕೆಗೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಆಹ್ವಾನ ನೀಡಿದೆ.

ಬೆಂಗಳೂರಿನಲ್ಲಿರುವ ಜೆ.ಪಿ. ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ಆಗಿರುವ ರಾಮ ಲಾಲ್ ಮತ್ತಿತರರು ಆಹ್ವಾನ ಪತ್ರಿಕೆ ನೀಡಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬದವರನ್ನು ಆಹ್ವಾನಿಸಿದ್ದಾರೆ.

ಆಹ್ವಾನ ಸ್ವೀಕರಿಸಿದ ಮಾಜಿ ಮುಖ್ಯಮಂತ್ರಿಗಳು, ಕುಟುಂಬ ಸಮೇತ ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ರಾಮ್ ಲಾಲ್ ಅವರಿಗೆ ತಿಳಿಸಿದರು. ಅಲ್ಲದೆ, ರಾಮಜನ್ಮಭೂಮಿಯಲ್ಲಿ ಭವ್ಯ ಮಂದಿರ ನಿರ್ಮಾಣ ಆಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಈಗಾಗಲೇ ಟ್ರಸ್ಟ್ ನ ಪ್ರಮುಖರು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರಿಗೆ ಆಹ್ವಾನ ನೀಡಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ʼಎಕ್ಸ್‌ʼ ನ ಅಧಿಕೃತ ಖಾತೆಯ ಮೂಲಕ ತಮ್ಮ ಸಂತಸ ಹಂಚಿಕೊಂಡ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಹಾಗೂ ಶ್ರೀರಾಮನ ಸೇವಾ ಕೈಂಕರ್ಯದಲ್ಲಿ ಕುಟುಂಬ ಸಮೇತವಾಗಿ ಸಂತೋಷದಿಂದ ಭಾಗಿಯಾಗುತ್ತೇನೆ ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!