spot_img
Wednesday, April 22, 2026
spot_img

ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಗೆ ಮೊದಲ ಹಿಂದೂ ಮಹಿಳೆ ನಾಮಪತ್ರ ಸಲ್ಲಿಕೆ !

ಜನಪ್ರತಿನಿಧಿ ವಾರ್ತೆ ( ನವ ದೆಹಲಿ) :  ಮೊದಲ ಬಾರಿಗೆ, ಪಾಕಿಸ್ತಾನದ ಖೈಬರ್ ಪಖ್ತುಂಕ್ವಾದ ಬುನರ್ ಜಿಲ್ಲೆಯ ಹಿಂದೂ ಸಮುದಾಯದ ಸದಸ್ಯೆ ಡಾ. ಸವೀರಾ ಪ್ರಕಾಶ್ ಅವರು ಮುಂಬರುವ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಜನರಲ್‌ ಸೀಟ್‌ಗೆ  ನಾಮಪತ್ರ ಸಲ್ಲಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಡಾನ್ ವರದಿ ಮಾಡಿದೆ.

ಸವಿರಾ ಪ್ರಕಾಶ್ ಅವರು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಟಿಕೆಟ್‌ನಲ್ಲಿ ಚುನಾವಣೆಗೆ ಸ್ಪರ್ಧಿಸುವ ಭರವಸೆಯಲ್ಲಿದ್ದಾರೆ. ಆಕೆಯ ತಂದೆ, ಓಮ್ ಪ್ರಕಾಶ್, ನಿವೃತ್ತ ವೈದ್ಯರಾಗಿದ್ದು, ಕಳೆದ 35 ವರ್ಷಗಳಿಂದ ಪಕ್ಷದ ಸಕ್ರಿಯ ಸದಸ್ಯರಾಗಿದ್ದಾರೆ.

ಕ್ವಾಮಿ ವತನ್ ಪಾರ್ಟಿಯೊಂದಿಗೆ ಸಂಬಂಧ ಹೊಂದಿರುವ ಸ್ಥಳೀಯ ರಾಜಕಾರಣಿ ಸಲೀಂ ಖಾನ್, ಮುಂಬರುವ ಸಾರ್ವತ್ರಿಕ ಚುನಾವಣೆಗೆ ಸವಿರಾ ಪ್ರಕಾಶ್ ಅವರು ಬುನರ್‌ನಿಂದ ನಾಮಪತ್ರ ಸಲ್ಲಿಸಿದ ಮೊದಲ ಮಹಿಳೆಯಾಗಿದ್ದಾರೆ ಎಂದು ಹೇಳಿದ್ದಾರೆ. 2022 ರಲ್ಲಿ ಅಬೋಟಾಬಾದ್ ಇಂಟರ್ನ್ಯಾಷನಲ್ ಮೆಡಿಕಲ್ ಕಾಲೇಜಿನ ಪದವೀಧರರಾದ ಸವಿರಾ ಪ್ರಕಾಶ್, ಬುನರ್‌ನಲ್ಲಿರುವ ಪಿಪಿಪಿ ಮಹಿಳಾ ವಿಭಾಗದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಡಾನ್‌ ಸುದ್ದಿ ಸಂಸ್ಥೆಯೊಂದಿಗೆ ತಮ್ಮ ಚುನಾವಣಾ ತಯಾರಿಯ ಬಗ್ಗೆ ಮಾತನಾಡಿದ ಸವಿರಾ, ಆ ಪ್ರದೇಶದ ಬಡವರಿಗಾಗಿ ಕೆಲಸ ಮಾಡುವಲ್ಲಿ ತನ್ನ ತಂದೆ ನಡೆದ ದಾರಿಯನ್ನೇ ಸ್ಪೂರ್ತಿಯಾಗಿಟ್ಟುಕೊಂಡು ಮುನ್ನಡೆಯುತ್ತೇನೆ ಎಂದು ತಿಳಿಸಿದ್ದಾರೆ. ಇನ್ನು, ಡಿಸೆಂಬರ್ 23 ರಂದು (ಶುಕ್ರವಾರ) ನಾಮಪತ್ರ ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಮಹಿಳೆಯರ ಕಲ್ಯಾಣಾಭಿವೃದ್ಧಿಗಾಗಿ ಕೆಲಸ ಮಾಡಲು, ಸುರಕ್ಷಿತ ಕಾನೂನು, ಸುವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಪ್ರಾಮಾಣಿಕ ಕೆಲಸ ಮಾಡಲಾಗುವುದು ಎಂದು ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ವಿಶೇಷವಾಗಿ ಅಭಿವೃದ್ಧಿಯ ಕ್ಷೇತ್ರದಲ್ಲಿ ಮಹಿಳೆಯರನ್ನು ನಿರಂತರವಾಗಿ ಕಡೆಗಣಿಸಲಾಗುತ್ತಿದೆ. ಸಾಮಾಜಿಕವಾಗಿ ಮಹಿಳೆಯ ಪಾತ್ರ ಮಹತ್ವವಾದದ್ದು, ಮಹಿಳೆಯರ ಧ್ವನಿಯಾಗಿ ಹೋರಾಟಕ್ಕೆ ಇಳಿಯಲು ಸಿದ್ಧನಿದ್ದೇನೆ.  ಸಮಾಜ ಪುರುಷ ಪ್ರಧಾನವಲ್ಲ. ಅಲ್ಲಿ ಮಹಿಳೆಯೂ ಹಕ್ಕುದಾರಳು ಎಂದು ಅವರು ಹೇಳಿದ್ದಾರೆ.

ಉಮೇದುವಾರಿಕೆಗೆ ತನ್ನ ಪಕ್ಷದ ಅನುಮೋದನೆಗೆ ಸಂಬಂಧಿಸಿದಂತೆ, ʼಪಕ್ಷದ ಹೈಕಮಾಂಡ್” ಸಾಮಾನ್ಯ ಸ್ಥಾನಕ್ಕೆ ಸ್ಪರ್ಧಿಸಲು ತನ್ನ ತಂದೆಯನ್ನು ಸಂಪರ್ಕಿಸಿದ್ದರು. “ಮಾನವೀಯತೆಗೆ ಸೇವೆ ಸಲ್ಲಿಸುವ” ತನ್ನ ಒಲವು ಅಂತರ್ಗತವಾಗಿದೆ ಎಂದು ಅವರು ಪ್ರತಿಪಾದಿಸಿದರು.

ಇನ್ನು, ಪಾಕಿಸ್ತಾನದ ಚುನಾವಣಾ ಆಯೋಗದ (ECP) ಇತ್ತೀಚಿನ ತಿದ್ದುಪಡಿಗಳ ಅಡಿಯಲ್ಲಿ, ಸಾಮಾನ್ಯ ಸ್ಥಾನಗಳಲ್ಲಿ ಐದು ಪ್ರತಿಶತ ಮಹಿಳಾ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಅವಕಾಶ ನೀಡಬೇಕು ಎಂದು ಹೇಳಿತ್ತು ಎನ್ನುವುದು ಇಲ್ಲಿ ಉಲ್ಲೇಖಾರ್ಹ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!