spot_img
Wednesday, April 22, 2026
spot_img

ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 2 ರಿಂದ 3 ದಿನಗಳ ಕಾಲ ನಡೆಸಲು ತೀರ್ಮಾನ : ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 2 ರಿಂದ 3 ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಇಂದು(ಮಂಗಳವಾರ) ತಿಳಿದ್ದಾರೆ.

ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಫೆಬ್ರವರಿ 2ರಿಂದ 3 ದಿನಗಳ ಕಾಲ ಹಂಪಿ ಉತ್ಸವ ನಡೆಸಲು ಒಪ್ಪಿಗೆ ನೀಡಿದ್ದು, ಮೊದಲ ದಿನ ಹಂಪಿ ಉತ್ಸವ ಉದ್ಘಾಟನೆ ನೆರವೇರಿಸಲಿದ್ದಾರೆ. ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಈ ಬಾರಿಯ ಹಂಪಿ ಉತ್ಸವ ವಿಜೃಂಭಣೆಯಿಂದ ಮಾಡುವಂತೆ ಹಾಗೂ ಸ್ಥಳೀಯ ಕಲಾವಿದರು ಹಾಗೂ ಸಾಂಸ್ಕೃತಿಕ ಕಲೆಗಳಿಗೆ ಒತ್ತು ನೀಡಲು ಉಸ್ತುವಾರಿ ಸಚಿವರು ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಸಂಘಟನೆಗಳು ಹಾಗೂ ಸಾಂಸ್ಕೃತಿಕ ವಲಯದವರನ್ನು ಜತೆಗೂಡಿಸಿಕೊಂಡು ಉತ್ಸವ ಯಶಸ್ವಿಗೊಳಿಸುವಂತೆ ಅವರು ಕೇಳಿಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!