spot_img
Wednesday, April 22, 2026
spot_img

 ಮೋದಿ ಏನು ಆರ್ಥಿಕ ತಜ್ಞರಾ ? ಮೋದಿ ಒಬ್ಬ ಸುಳ್ಳುಗಾರ… : ಸಿದ್ದರಾಮಯ್ಯ ಆಕ್ರೋಶ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಪ್ರಧಾನಿ ನರೇಂದ್ರ ಮೋದಿ ನಮ್ಮ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದರೇ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗುತ್ತದೆ ಎಂದು ಅವರು ಯಾವ ಆಧಾರದಲ್ಲಿ ಹೇಳಿದರು. ಮೋದಿಯೇನು ಆರ್ಥಿಕ ತಜ್ಞರಾ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಅವರು ಇಂದು(ಮಂಗಳವಾರ) ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ʼಯುವನಿಧಿʼ ಫಲಾನುಭವಿಗಳ ನೋಂದಣಿಗೆ ಚಾಲನೆ ನೀಡಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನ ಚುನಾವಣಾ ಪ್ರಚೃ ಸಭೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಘೋಷಿಸಿರುವ ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದರೆ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಹೇಳಿದ್ದರು. ಅವರ ಮಾತು ಸುಳ್ಳಾಗಿದೆ ಎಂದು ಹೇಳಿದರು.

ನಮ್ಮ ಪಕ್ಷ ಘೋಷಿಸಿದ ಎಲ್ಲಾ ಗ್ಯಾರಂಟಿಗಳಿಗೂ ಬಜೆಟ್‌ನಲ್ಲಿ ಅನುದಾನ ಒದಗಿಸಿ ಅನುಷ್ಠಾನಕ್ಕೆ ತಂದಿದ್ದೇವೆ. ಹನ್ನೆರಡು ವರ್ಷ ಮುಖ್ಯಮಂತ್ರಿಯಾಗಿ ಹತ್ತು ವರ್ಷ ಪ್ರಧಾನಿಯಾಗಿರುವಂತಹ ಒಬ್ಬ ವ್ಯಕ್ತಿ ಹೀಗೆಲ್ಲಾ ಮಾತಾಡಬಹುದೇ ? ಮೋದಿ ಒಬ್ಬ ಸುಳ್ಳುಗಾರ ಎಂಬುವುದು ಸಾಬೀತಾಗಿದೆ. ಎಂದು ಅವರು ಗುಡುಗಿದ್ದಾರೆ.

ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಣಾಳಿಕೆಯಂತೆ ಐದು ಗ್ಯಾರಂಟಿಗಳನ್ನೂ ಜಾರಿಗೆ ತರುತ್ತಿದ್ದೇವೆ. ಈ ಎಲ್ಲಾ ಯೋಜನೆಗಳಿಂದ ಜನರಿಗೆ ಆರ್ಥಿಕ ಶಕ್ತಿ ತುಂಬಿದೆ. ಯಾವುದೇ ಕಾರಣಕ್ಕೂ ಸರ್ಕಾರ ದಿವಾಳಿಯಾಗಲ್ಲ ಎಂದು ಅವರು ಹೇಳಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!