spot_img
Tuesday, April 21, 2026
spot_img

ತಾತ್ಕಾಲಿಕ ನೇಮಕಾತಿ : ಅಗ್ನಿವೀರ್ ಯೋಜನೆ ಜಾರಿಗೆ ತರುವ ಮೂಲಕ ಅಸಂಖ್ಯಾತ ಯುವಕರ ಕನಸುಗಳನ್ನು ನಾಶಮಾಡಿದೆ… : ರಾಹುಲ್‌ ಆಕ್ರೋಶ

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : ನಿರುದ್ಯೋಗ ಪ್ರಮಾಣ ಏರಿಕೆಯಾಗುತ್ತಿರುವುದರ ವಿರುದ್ಧ ʼಬೀದಿಯಿಂದ ಸಂಸತ್ತಿಗೆʼ ಎಂಬ ಶೀರ್ಷಿಕೆಯಡಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿರುವ ಯುವಕರಿಗೆ ಕಾಂಗ್ರೆಸ್‌ ನಾಯಕ ಬೆಂಬಲ ಸೂಚಿಸಿದ್ದಾರೆ.

ನಿರುದ್ಯೋಗ ಸಮಸ್ಯೆ ಹೆಚ್ಚಳಕ್ಕೆ ಕಾರಣವಾದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾದ ಯುವಕರೊಂದಿಗೆ ರಾಹುಲ್‌ ಗಾಂಧಿ ಚರ್ಚಿಸಿದಾರೆ. ಈ ಬಗ್ಗೆ ತಮ್ಮ ಅಧಿಕೃತ ಇನ್ಸ್ಟಾಗ್ರಾಂ ಪೇಜ್‌ ನಲ್ಲಿ ಹಂಚಿಕೊಂಡಿರುವ ರಾಹುಲ್‌, ಸೇನೆ ಹಾಗೂ ವಾಯುಪಡೆಗೆ ಖಾಯಂ ನೇಮಕಾತಿ ಪ್ರಕ್ರಿಯೆಯನ್ನು ತೆಗೆದು ಹಾಕಿರುವ ಕೇಂದ್ರ ಸರ್ಕಾರ, ತಾತ್ಕಾಲಿಕ ನೇಮಕಾತಿʼ ಕಲ್ಪಸಿರುವ ಅಗ್ನೀವೀರ್‌ ಯೋಜನೆ ಜಾರಿಗೆ ತರುವ ಮೂಲಕ ಅಸಂಖ್ಯಾತ ಯುವಕರ ಕನಸುಗಳನ್ನು ನಾಶಮಾಡಿದೆ ಎಂದು ಅವರು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

ಅಗ್ನಿಪಥ ನೇಮಕಾತಿ ಯೋಜನೆಯನ್ನು ಜಾರಿಗೊಳುಸುವ ಮೂಲಕ ಕೇಂದ್ರ ಸರ್ಕಾರವು ಸಾಕಷ್ಟು ಯುವಕರ ಕನಸುಗಳನ್ನು ಕೊಂದಿದೆ ಎಂದು ವಯನಾಡಿನ ಸಂಸದ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು, ʼಯುವಕರ ʼಸತ್ಯಾಗ್ರಹದ ನಾಡುʼ ಬಿಹಾರದ ಸಂಪಾರಣ್ಯದಿಂದ ರಾಷ್ಟ್ರ ರಾಜಧಾನಿ ದೆಹಲಿಯವರೆಗೆ ೧,೧೦೦ ಕಿ. ಮೀ ವರೆಗೆ ಪಾದಯಾತ್ರೆ ಮಾಡುತ್ತಾ, ಹೋರಾಟ ಮಾಡುತ್ತಿರುವುದನ್ನು ಸುದ್ದಿ ಮಾಧ್ಯಮಗಳು ಪ್ರಸಾರ ಮಾಡದಿರುವುದು ದುಃಖದ ಸಂಗತಿ  ಎಂದೂ ಕೂಡ ಅವರು ದುಃಖ ವ್ಯಕ್ತ ಪಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!