spot_img
Tuesday, April 21, 2026
spot_img

ಡಿ.28ರಂದು ವಂಡ್ಸೆ ಸ.ಮಾ.ಹಿ.ಪ್ರಾ ಶಾಲೆಯ ವಾರ್ಷಿಕೋತ್ಸವ

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಡಿಸೆಂಬರ್ 28 ಗುರುವಾರ ನಡೆಯಲಿದೆ.

ಆ ದಿನ ಬೆಳಿಗ್ಗೆ 9 ಗಂಟೆಗೆ ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಧ್ವಜಾರೋಹಣ ನೆರವೇರಿಸಲಿದ್ದಾರೆ.

ಟೆಲಿಕಾಂ ಇಲಾಖೆಯ ನಿವೃತ್ತ ಅಧಿಕಾರಿ ಗಿಳಿಯಾರು ಶ್ರೀಧರ್ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯರಾದ ಸೀತಾರಾಮ ಶೆಟ್ಟಿ ತೊಂಭತ್ತು, ವಂಡ್ಸೆ ವಾತ್ಸಲ್ಯ ಕಾಂಪ್ಲೆಕ್ಸ್‌ನ ಆನಂದ ಶೆಟ್ಟಿ ಸಬ್ಲಾಡಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ ಕಲ್ಮಡಿ, ಸಿ.ಆರ್.ಪಿ ನಾಗರಾಜ ಶೆಟ್ಟಿ, ಎಂ.ಎಸ್.ಮಂಜ ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷ ನಾಗರಾಜ ಮಂಜರು, ಶ್ರೀ ಚಿಕ್ಕು ಯುವ ಸಂಘಟನೆ ಉಪಾಧ್ಯಕ್ಷ ಬಾಲಕೃಷ್ಣ ನಾಯಕ್, ವಂಡ್ಸೆ ಆರ್.ಕೆ ಗ್ರಾಫಿಕ್ಸ್‌ನ ರಕ್ಷಿತ್ ಕುಮಾರ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಅವಿನಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗೋವರ್ದನ್ ಜೋಗಿ, ಗ್ರಾಮ ಪಂಚಾಯಿತಿ ಸದಸ್ಯರಾದ ಉದಯಕುಮಾರ್ ಶೆಟ್ಟಿ, ಪ್ರಶಾಂತ ಪೂಜಾರಿ, ಶಶಿಕಲಾ ಎಸ್., ಸುಶೀಲ, ಸುಬ್ಬು, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ್, ಕ್ಷೇತ್ರ ಸಮನ್ವಯಾಧಿಕಾರಿ ಮಂಜುನಾಥ ನಾಯ್ಕ, ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಸದಾಶಿವ ಶೆಟ್ಟಿ, ಎಂ.ಸಿ.ಐ ಸಮೂಹ ಸಂಸ್ಥೆ ಮೈಸೂರು ಇದರ ಆಡಳಿತ ನಿರ್ದೇಶಕ ಪ್ರಭಾಕರ ಶೆಟ್ಟಿ ತೊಂಭತ್ತು, ರೋಟರಿ ಜಿಲ್ಲೆ 3182 ಇದರ ಮಾಜಿ ಜಿಲ್ಲಾ ಗವರ್ನರ್ ಅಭಿನಂದನ್ ಶೆಟ್ಟಿ, ಗಿಳಿಯಾರು ಕುಶಲ ಹೆಗ್ಡೆ ಚಾರಿಟೆಬಲ್ ಟ್ರಸ್ಟ್‌ನ ಟ್ರಸ್ಟಿ ಉದಯ ಹೆಗ್ಡೆ, ನ್ಯಾಯವಾದಿ ಪ್ರಸನ್ನ ಕುಮಾರ್ ಶೆಟ್ಟಿ ಕೆರಾಡಿ, ಚಾರ್ಟೆಡ್ ಅಕೌಂಟೆಂಟ್ ಸಿ.ಎ ರಾಜೇಶ್ ಶೆಟ್ಟಿ ನಂದ್ರೋಳಿ ಸೋಡಿಗದ್ದೆ, ದುರ್ಗಾಶ್ರೀ ಎಂಟರ್‌ಪ್ರೈಸಸ್ ವಂಡ್ಸೆ ಇದರ ನಿಶ್ಚಿತ್ ಶೆಟ್ಟಿ ಹೆಗ್ಗುಂಜೆ ಮಂದರ್ತಿ, ರೋಟರಿ ಜಲ್ಲೆ 3190 ಇದರ ಮಾಜಿ ಸಹಾಯಕ ಜಿಲ್ಲಾ ಪಾಲಕರಾದ ರಮೇಶ ದೇವಾಡಿಗ, ಮುಂಬೈ ಉದ್ಯಮಿ ರಾಘವೇಂದ್ರ ಪೂಜಾರಿ ಜೆಡ್ಡು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕಿ ಆಶಾ ಆವರನ್ನು ಸನ್ಮಾನಿಸಲಾಗುವುದು.

ಸಾಂಸ್ಕೃತಿಕ ಕಾರ್ಯಕ್ರಮಗಳು:
ಸಾಂಸ್ಕೃತಿಕ ಕಾರ್ಯಕ್ರಮ ಸಂಜೆ 6 ಗಂಟೆಗೆ ಆರಂಭವಾಗಲಿದ್ದು ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ಸಂಜೆ, ಶಾಲಾ ಪುಟಾಣಿಗಳಿಂದ ನೃತ್ಯ ಸಿಂಚನ, ರಾತ್ರಿ 8.30ರಿಂದ 11-30ರ ತನಕ ವಿದ್ಯಾರ್ಥಿಗಳಿಂದ ವೈವಿದ್ಯಮಯ ನೃತ್ಯ ವೈಭವ, ರಾತ್ರಿ 11.30ರಿಂದ ಶಾಲಾ ವಿದ್ಯಾರ್ಥಿಗಳಿಂದ ನಾಟಕ ಕುಣಿ ಕುಣಿ ನವಿಲೆ ಪ್ರದರ್ಶನಗೊಳ್ಳಲಿದೆ.

ಶಾಲಾ ವಾರ್ಷಿಕೋತ್ಸವ, ವಿದ್ಯಾರ್ಥಿಗಳ ಸಾಂಸ್ಕೃತಿಕ ಹಬ್ಬಕ್ಕೆ ವಿದ್ಯಾಭಿಮಾನಿಗಳು, ಹಳೆ ವಿದ್ಯಾರ್ಥಿಗಳು, ಸಾರ್ವಜನಿಕರು ಆಗಮಿಸುವಂತೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಡಾ.ಪೂರ್ಣಿಮಾ ಟಿ, ವಿದ್ಯಾರ್ಥಿ ನಾಯಕರಾದ ಆದಿತ್ಯ, ಶರಣ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಂದೇಶ್ ಶೆಟ್ಟಿ, ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಸದಾಶಿವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!