spot_img
Tuesday, April 21, 2026
spot_img

ಮೊಟ್ಟೆಗೆ ಶಿಕ್ಷಕರ ಜೇಬಿನಿಂದ ಹಣ ತೆಗೆದುಕೊಡುವಂತಹ ಪರಿಸ್ಥಿತಿ ಸಿದ್ದರಾಮಯ್ಯ ಅವರ ಸರ್ಕಾರ ತಂದೊಡ್ಡಿದೆ : ಬಿಜೆಪಿ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಮೊಟ್ಟೆ ಧಾರಣೆ ನಿರಂತರಾಗಿ ಏರಿಕೆಯಾಗುತ್ತಿದ್ದು ಮೊಟ್ಟೆ ಖರೀದಿಸಲು ಶಾಲಾ ಶಿಕ್ಷಣ ಇಲಾಖೆ ನೀಡುವ ಮೊತ್ತಕ್ಕೂ, ಮಾರುಕಟ್ಟೆ ದರಕ್ಕೂ ಬಹಳ ವ್ಯತ್ಯಾಸವಾಗುತ್ತಿರುವುದು ಶಿಕ್ಷಕರಿಗೆ ಹೊರೆಯಾಗಿ ಪರಿಣಮಿಸಿದೆ ಎಂಬ ಪತ್ರಿಕಾ ಮಾಧ್ಯಮದ ವರದಿಯನ್ನು ಉಲ್ಲೇಖಿಸಿ ರಾಜ್ಯ ಶಿಕ್ಷಣ ಇಲಾಖೆ ಹಾಗೂ ಆಡಳಿತ ಸರ್ಕಾರ ಕಾಂಗ್ರೆಸ್‌ ವಿರುದ್ಧ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಅಪೌಷ್ಟಿಕತೆಯನ್ನು ನಿವಾರಣೆ ಮಾಡಲು ಶಿಕ್ಷಣ ಇಲಾಖೆ ವಾರದಲ್ಲಿ ಎರಡು ದಿನ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡುವುದನ್ನು ಕಡ್ಡಾಯಗೊಳಿಸಿದೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಶಾಲೆಗಳಿಗೆ ಮೊಟ್ಟೆ ಖರೀದಿ ಮಾಡಲು ಹಿಂದಿನ ಬೆಲೆಯನ್ನೇ ನೀಡುತ್ತಿದೆ. ಇದು ಅಕ್ಷರಶಃ ಶಿಕ್ಷಕರ ಜೇಬಿಗೆ ಕತ್ತರಿ ಬೀಳುತ್ತಿದೆ ಎಂದು ಬಿಜೆಪಿ ಟೀಕಿಸಿದೆ.

ಮಕ್ಕಳಿಗೆ ಪಾಠ ಮಾಡುವುದರ ಜೊತೆಗೆ ಮೊಟ್ಟೆ ಖರೀದಿಗೆ ಶಿಕ್ಷಕರು ತಮ್ಮ ಜೇಬಿನಿಂದ ಹಣ ತೆಗೆದುಕೊಡುವಂತಹ ಪರಿಸ್ಥಿತಿಯನ್ನು ಸಿದ್ದರಾಮಯ್ಯ ಅವರ ಸರ್ಕಾರ ತಂದೊಡ್ಡಿದೆ ಎಂದು ಬಿಜೆಪಿ ವಿಷಾದ ವ್ಯಕ್ತಪಡಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!