Thursday, November 21, 2024

ಲೋಕಸಭಾ ಚುನಾವಣಾ ಘೋಷಣೆ ಮುನ್ನವೇ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಮುಂದಾಗಿದೆಯೇ ಬಿಜೆಪಿ ?

ಜನಪ್ರತಿನಿಧಿ ವಾರ್ತೆ( ನವ ದೆಹಲಿ) : ಇತ್ತೀಚೆಗಷ್ಟೆ ನಡೆದ ಪಂಚರಾಜ್ಯ ವಿಧಾನಸಭಾ ಚುನಾವಣೆಗಳ ಪೈಕಿ ಮೂರು ರಾಜ್ಯಗಳಲ್ಲಿ ಅಧಿಕಾರ ಹಿಡಿದ ಚಾರ್ಮಿನಲ್ಲಿರುವ ಇರುವ ಬಿಜೆಪಿ, ಲೋಕಸಭಾ ಚುನಾವಣೆಗೆ ಭರದ ಸಿದ್ಧತೆಯಲ್ಲಿದ್ದು. ಶೀಘ್ರವೇ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿ, ಚುನಾವಣಾ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನಿರ್ಧರಿಸಿದೆ ಎನ್ನಲಾಗಿದೆ.

ಬಹಳ ಪ್ರಮುಖವೆಂದರೇ, ಈ ಬಾರಿ ಲೋಕಸಭಾ ಚುನಾವಣಾ ಅಖಾಡಕ್ಕೆ ಹಲವು ರಾಜ್ಯಸಭಾ ಸದಸ್ಯರೂ ಕೂಡ ಧುಮುಕಿಸುವ ಸಾಧ್ಯತೆಗಳಿವೆ ಎಂದು ಬಿಜೆಪಿ ಹೈಕಮಾಂಡ್‌ ಆಪ್ತ ಬಳಗ ಮಾಹಿತಿ ನೀಡಿವೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಇತ್ತೀಚೆಗಷ್ಟೇ ನಡೆದ ಪಂಚರಾಜ್ಯ(ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಹಾಗೂ ಮೀಜೋರಾಂ) ವಿಧಾನಸಭಾ ಚುನಾವಣೆಗಳಲ್ಲಿ ಹಲವು ಲೋಕಸಭಾ ಸದಸ್ಯರು ವಿಧಾನಸಭಾ ಚುನಾವಣೆಗಳಲ್ಲಿ ಕಣಕ್ಕಿಳಿದು ಗೆಲುವು ಸಾಧಿಸಿದ್ದರು.

ಪಂಚರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ಬೇರೆಲ್ಲೂ ಮಾಡಿರದ ಹಲವು ಹೊಸ ಪ್ರಯೋಗಗಳನ್ನು ಮಾಡಿದ್ದ ಬಿಜೆಪಿ, ಸಾಕಷ್ಟು ಯಶಸ್ಸು ಕಂಡಿದೆ. ಅದರಲ್ಲೂ ಪ್ರತಿಪಕ್ಷಗಳಿಗಿಂತ ಮುಂಚಿತವಾಗಿಯೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಬಿಜೆಪಿಗೆ ಪ್ರಯೋಜನವಾಗಿತ್ತು.

ದೇಶದಾದ್ಯಂತ ಬಿಜೆಪಿಗೆ ಪರಿಸ್ಥಿತಿ ಆಶಾದಾಯಕವಾಗಿದೆ. ಇದೇ ಗೆಲುವನ್ನು ಪುನರಾವರ್ತಿಸುವ ಆಶಯದಲ್ಲಿದ್ದಾರೆ. ಜೊತೆಗೆ ರಾಜ್ಯಸಭೆಯ ಹಲವು ಸದಸ್ಯರೂ ಲೋಕಸಭೆಗೆ ಸ್ಪರ್ಧಿಸಿದರೆ, ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಹೊಸಬರಿಗೆ ಅವಕಾಶ ನೀಡಬಹುದು ಎನ್ನುವ ಲೆಕ್ಕಾಚಾರವೂ ಬಿಜೆಪಿಗಿದೆ ಎನ್ನಲಾಗಿದೆ.

ಚುನಾವಣಾ ಆಯೋಗವು ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟ ಮಾಡುವ ಮುನ್ನವೇ ಅಭ್ಯರ್ಥಿಗಳ ಹೆಸರನ್ನು ಘೋಷಿಸಲು ಬಿಜೆಪಿ ತೀರ್ಮಾನಿಸಿದೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ ಎಂದು ಸುದ್ಧಿ ಸಂಸ್ಥೆಗಳು ಮಾಹಿತಿ ನೀಡಿವೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!