spot_img
Tuesday, April 21, 2026
spot_img

ರಾಜ್ಯ ದಕ್ಷಿಣ ಭಾರತದ ಬಿಜೆಪಿಯ ಸುಭದ್ರ ಕೋಟೆ ಎಂಬ ಸಂದೇಶ ನೀಡಬೇಕಿದೆ : ಬಿ. ವೈ ವಿಜಯೇಂದ್ರ

ಜನಪ್ರತಿನಿಧಿ ವಾರ್ತೆ( ಬೆಂಗಳೂರು) : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಗೆದ್ದು ಅಧಿಕಾರದ ಅಮಲಿನಲ್ಲಿರುವ ಕಾಂಗ್ರೆಸ್‌ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಎಲ್ಲಾ ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಬಲ ತುಂಬುವ ಕೆಲಸ ನಾವು ಮಾಡಬೇಕಿದೆ. ರಾಜ್ಯವನ್ನು ದಕ್ಷೀಣ ಭಾರತದಲ್ಲಿ ಬಿಜೆಪಿಯ ಕೇವಲ ಭದ್ರ ಕೋಟೆ ಅಲ್ಲ, ಸುಭದ್ರ ಕೋಟೆಯಾಗಿ ಪರಿವರ್ತನೆಯಾಗಿದೆ ಎಂಬ ಸಂದೇಶವನ್ನು ನೀಡಬೇಕಾಗಿದೆ ಎಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!