spot_img
Tuesday, April 21, 2026
spot_img

ವಂಡ್ಸೆ ಶಾಲೆಯ ಮಕ್ಕಳೊಂದಿಗೆ ಶಾಸಕ ಗುರುರಾಜ್ ಗಂಟಿಹೊಳೆ ಸಂವಾದ

ವಂಡ್ಸೆ, ಡಿ.28: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸುವ ಮೂಲಕ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾದ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಸಾಕ್ಷಿಯಾದರು.

ಶಾಲೆಯ ಎಲ್ಲಾ ವಿದ್ಯಾರ್ಥಿಗಳೊಂದಿಗೆ ಮಕ್ಕಳ ಸಂಭ್ರಮದಲ್ಲಿ ತಾವು ಪಾಲ್ಗೊಂಡರು. ಸುಮಾರು 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದು ಎಲ್ಲಾ ಮಕ್ಕಳು ಖುಷಿಯಿಂದ ಶಾಸಕರ ಜೊತೆ ಸಂವಾದದಲ್ಲಿ ಭಾಗವಹಿಸಿ, ಮುಗ್ದ ಮಾತುಗಳ ಮೂಲಕ ಶಾಸಕರ ಗಮನ ಸಳೆದರು. ‘ನಮ್ಮ ಶಿಕ್ಷಕರು, ನನಗೆ ಅಚ್ಚುಮೆಚ್ಚು’ ವಿಷಯದ ಕುರಿತು ಮಕ್ಕಳೊಂದಿಗೆ ಮಾತನಾಡಿದರು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಮಕ್ಕಳು ತಾಯಿಯನ್ನು ಹೆಚ್ಚು ಇಷ್ಟ ಪಡುತ್ತಾರೆ. ತಾಯಿಯ ಬಳಿಕದ ಸ್ಥಾನ ಶಿಕ್ಷಕರಿಗೆ ಸಲ್ಲುತ್ತದೆ. ಮನೆಯಲ್ಲಿ ತಾಯಿ ಮಕ್ಕಳ ಲಾಲನೆ ಪಾಲನೆ ಮಾಡಿದರೆ, ಶಾಲೆಯಲ್ಲಿ ಶಿಕ್ಷಕರು ಕಣ್ಣರೆಪ್ಪೆಯಂತೆ ವಿದ್ಯಾರ್ಥಿಗಳನ್ನು ನೋಡಿಕೊಳ್ಳುತ್ತಾರೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಬಾಂಧವ್ಯ ಶ್ರೇಷ್ಠವಾದುದು ಎಂದು ಅಭಿಪ್ರಾಯ ಪಟ್ಟರು.

ಈ ಸಂದರ್ಭದಲ್ಲಿ ಶಾಸಕರಿಗೆ ಶಾಲಾ ಎಸ್,ಡಿ.ಎಂ.ಸಿ ಅಧ್ಯಕ್ಷೆ ಡಾ|ಪೂರ್ಣಿಮಾ ಟಿ ಮನವಿ ಸಲ್ಲಿಸಿದರು. ಶಾಲೆಯ ವತಿಯಿಂದ ಶಾಸಕರನ್ನು ಗೌರವಿಸಲಾಯಿತು.

ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ, ಖಜಾಂಚಿ ಜಿ.ಶ್ರೀಧರ ಶೆಟ್ಟಿ, ಟ್ರಸ್ಟಿ ಸೀತಾರಾಮ ಶೆಟ್ಟಿ ತೊಂಭತ್ತು, ಗ್ರಾಮ ಪಂಚಾಯತ್ ಸದಸ್ಯ ಪ್ರಶಾಂತ್ ಪೂಜಾರಿ ವಂಡ್ಸೆ, ಸಿ.ಆರ್.ಪಿ ನಾಗರಾಜ ಶೆಟ್ಟಿ, ಶಿಕ್ಷಣ ಸಂಯೋಜಕ ಸತ್ಯನಾ ಕೊಡೇರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂದೇಶ ಶೆಟ್ಟಿ, ಎಸ್,ಡಿ.ಎಂ.ಸಿ ಉಪಾಧ್ಯಕ್ಷರು, ಸದಸ್ಯರು, ಶಿಕ್ಷಕವೃಂದದವರು ಉಪಸ್ಥಿತರಿದ್ದರು.

ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯರಾದ ಸದಾಶಿವ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!