spot_img
Tuesday, April 21, 2026
spot_img

ಪತ್ನಿಯನ್ನು ತೊರೆದ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ಉದ್ಘಾಟನಾ ಪೂಜೆ ಹೇಗೆ ಮಾಡುತ್ತಾರೆ ? : ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ

ಜನಪ್ರತಿನಿಧಿ ವಾರ್ತೆ (ನವ ದೆಹಲಿ ) : ರಾಮನ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣವಾಗುತ್ತಿದೆ. ಸೀತೆಯನ್ನು ರಕ್ಷಿಸಲು ರಾಮ ಯುದ್ಧ ಮಾಡಿ, ಕಷ್ಟಗಳನ್ನು ಎದುರಿಸಿದ್ದಾನೆ. ಆದರೇ, ಪತ್ನಿಯನ್ನೇ ತೊರೆದ ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ಉದ್ಘಾಟನಾ ಪೂಜೆ ಹೇಗೆ ಮಾಡುತ್ತಾರೆ ? ಎಂದು ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಪ್ರಶ್ನಿಸಿದ್ದಾರೆ.

ತಮ್ಮ ಮೈಕ್ರೋಬ್ಲಾಗಿಂಗ್ ʼಎಕ್ಸ್‌ʼ ಖಾತೆಯ ಮೂಲಕ ಅಯೋಧ್ಯೆಯಲ್ಲಿ ಜ.೨೨ರಂದು ನೆರವೇರಲಿರುವ ರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಗೆ ಸಂಬಂಧಿಸಿದ ವಿಷಯದಲ್ಲಿ ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ಸ್ವಾಮಿ ಹಂಚಿಕೊಂಡಿದ್ದಾರೆ.

ರಾಮ ಸುಮಾರು ಒಂದೂವರೆ ದಶಕದಷ್ಟು ಕಾಲ ವನವಾಸವನ್ನು ಅನುಭವಿಸಿದ್ದಾನೆ. ಅಪಹರಣಗೊಂಡ ಸೀತೆಯನ್ನು ರಕ್ಷಿಸುವುದಕ್ಕಾಗಿ ಯುದ್ಧ ಮಾಡಿದ್ದಾನೆ. ಆದರೇ ಮೋದಿ ಅವರು ತಮ್ಮ ಪತ್ನಿಯನ್ನು ತ್ಯಜಿಸಿದವರು ಎಂಬುವುದು ಎಲ್ಲರಿಗೂ ತಿಳಿದಿರುವ ವಿಷಯ. ಹಾಗಿದ್ದಾಗ ಅವರು ರಾಮ ಮಂದಿರದ ಉದ್ಘಾಟನಾ ಪೂಜೆಯನ್ನು ಹೇಗೆ ನೆರವೇರಿಸುತ್ತಾರೆ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಇನ್ನು, ಶ್ರೀರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲು ಶ್ರೀರಾಮನ ಭಕ್ತರು ಹೇಗೆ ಅವಕಾಶ ಮಾಡಿಕೊಡುತ್ತಾರೆʼಎಂದೂ ಕೂಡ ಅವರು ಕೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!