Sunday, September 8, 2024

ಕಾಂಗ್ರೆಸ್‌ ಸಂಸ್ಥಾಪನಾ ದಿನಾಚರಣೆ : ಕಾಂಗ್ರೆಸ್‌ ಎಂದಿಗೂ ತನ್ನ ಸಿದ್ಧಾಂತಗಳಿಂದ ದೂರ ಸರಿಯುವುದಿಲ್ಲ : ಮಲ್ಲಿಕಾರ್ಜುನ್‌ ಖರ್ಗೆ

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : ಕಾಂಗ್ರೆಸ್ ಪಕ್ಷದ 139 ನೇ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು (ಗುರುವಾರ) ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಪ್ರಧಾನ ಕಚೇರಿಯಲ್ಲಿ ಪಕ್ಷದ ಧ್ವಜಾರೋಹಣ ಮಾಡಿದ್ದಾರೆ.

ಕಾಂಗ್ರೆಸ್‌ ಸಂಸ್ಥಾಪನ ದಿನದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, ಕಾಂಗ್ರೆಸ್ ಪಕ್ಷವು ಎಂದಿಗೂ ತನ್ನ ಸಿದ್ಧಾಂತಗಳಿಂದ ದೂರ ಸರಿಯುವುದಿಲ್ಲ. ಅದರ ಸಿದ್ಧಾಂತಗಳೊಂದಿಗೆ ಪ್ರಗತಿ ಸಾಧಿಸುತ್ತದೆ ಎಂದು ಹೇಳಿದರು.

ಸಂಸ್ಥಾಪನಾ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ನಾವು ಒಟ್ಟು ಸೇರುವುದು ಕರ್ತವ್ಯ. ಈ ಮೂಲಕ ನಾವು, ಪಕ್ಷವು ಎಂದಿಗೂ ತನ್ನ ಸಿದ್ಧಾಂತಗಳಿಂದ ದೂರ ಸರಿಯುವುದಿಲ್ಲ ಮತ್ತು ಅದರ ಸಿದ್ಧಾಂತಗಳೊಂದಿಗೆ ಪ್ರಗತಿ ಹೊಂದುತ್ತದೆ ಎಂದು ದೇಶಕ್ಕೆ ಸಂದೇಶವನ್ನು ಕಳುಹಿಸಬೇಕು. ನಾವು 2024ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತೇವೆ ಎಂಬ ಸಂದೇಶವನ್ನು ನಾವು ನಾಗ್ಪುರದಿಂದ ಕಳುಹಿಸಲು ಬಯಸುತ್ತೇವೆ ಎಂದು ಖರ್ಗೆ ಹೇಳಿದ್ದಾರೆ.

ಖರ್ಗೆ ಅವರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಸಂಸದ ರಾಜೀವ್ ಶುಕ್ಲಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಪಕ್ಷದ ಪ್ರಮುಖ ಸದಸ್ಯರೊಂದಿಗೆ ಚರ್ಚೆ ನಡೆಸಿದ್ದಾರೆ.

ಇನ್ನು, ಸಂಸ್ಥಾಪನಾ ದಿನದಂದು ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್‌ ಎಕ್ಸ್ ಖಾತೆಯ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡ ಖರ್ಗೆ,“ಕಾಂಗ್ರೆಸ್ ಪಕ್ಷವು ಜನರ ಇಚ್ಛೆಯನ್ನು ಪ್ರತಿನಿಧಿಸುತ್ತದೆ. ಇದು ಹೋರಾಟ, ಸಹಾನುಭೂತಿ, ಸ್ವಾತಂತ್ರ್ಯ, ನ್ಯಾಯ ಮತ್ತು ಸಮಾನತೆಗೆ ಸಮಾನಾರ್ಥಕವಾಗಿದೆ. ಕಾಂಗ್ರೆಸ್ ಸಂಸ್ಥಾಪನಾ ದಿನದ ಸಂದರ್ಭದಲ್ಲಿ, ಭಾರತದ ಸಂವಿಧಾನವನ್ನು ರಕ್ಷಿಸುವ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ನಮ್ಮ ಅಚಲ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ ಎಂದಿದ್ದಾರೆ.

ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ, ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಗುರುವಾರ ‘ಹೇ ತಯ್ಯಾರ್ ಹಮ್’ ರ‍್ಯಾಲಿಯಲ್ಲಿ ಮಾತನಾಡಲಿದ್ದಾರೆ.

ಈ ಬಗ್ಗೆ ತಮ್ಮ ಮೈಕ್ರೋ ಬ್ಲಾಗಿಂಗ್‌ ʼಎಕ್ಸ್‌ʼ ಖಾತೆಯ ಮೂಲಕ ಹಂಚಿಕೊಂಡ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ,“ಸತ್ಯ ಮತ್ತು ಅಹಿಂಸೆಯ ಅಡಿಪಾಯ, ಪ್ರೀತಿ, ಸಹೋದರತ್ವ, ಗೌರವ ಮತ್ತು ಸಮಾನತೆಯ ಸ್ತಂಭಗಳ ಮೇಲೆ, ದೇಶಭಕ್ತಿಯ ಛಾವಣಿಯೊಂದಿಗೆ ನಿರ್ಮಿಸಲಾಗಿದೆ, ಅಂತಹ ಸಂಘಟನೆಯ ಭಾಗವಾಗಿರುವುದಕ್ಕೆ ನನಗೆ ಹೆಮ್ಮೆ ಇದೆ. ನಾನು ಕಾಂಗ್ರೆಸ್ ಸದಸ್ಯನಾಗಿರುವುದಕ್ಕೆ ಹೆಮ್ಮೆ ಪಡುತ್ತೇನೆ. ಕಾಂಗ್ರೆಸ್ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಎಲ್ಲಾ ನಾಯಕರು, ಅಧಿಕಾರಿಗಳು, ಬೆಂಬಲಿಗರು ಮತ್ತು ನನ್ನ ಪ್ರೀತಿಯ ಸಹ ಕಾಂಗ್ರೆಸ್ ಕಾರ್ಯಕರ್ತರಿಗೆ ಹೃತ್ಪೂರ್ವಕ ಶುಭಾಶಯಗಳು ಎಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!