Thursday, November 21, 2024

ಯತ್ನಾಳ್‌ ಕೊರೊನಾ ಹಗರಣದ ಬಗ್ಗೆ ತಮ್ಮ ಬಳಿಯಿರುವ ಎಲ್ಲಾ ದಾಖಲಾತಿಗಳನ್ನು ವಿಚಾರಣಾ ಆಯೋಗದ ಮುಂದಿರಿಸಲಿ : ಸಿದ್ದರಾಮಯ್ಯ

ಜನಪ್ರತಿನಿಧಿ ವಾರ್ತೆ( ಬೆಂಗಳೂರು) : ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬ ಉದ್ದೇಶವಿದ್ದರೆ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಕೊರೊನಾ ಹಗರಣದ ಬಗ್ಗೆ ತಮ್ಮ ಬಳಿಯಿರುವ ಎಲ್ಲಾ ದಾಖಲಾತಿಗಳನ್ನು ವಿಚಾರಣಾ ಆಯೋಗದ ಮುಂದಿರಿಸಲಿ. ಆಗ ತಪ್ಪಿತಸ್ಥರು ಕಾನೂನು ರೀತ್ಯ ಕ್ರಮ ಎದುರಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ಪಕ್ಷ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ.

ಇನ್ನು, ಬೆಂಗಳೂರಿನ ವಾಣಿಜ್ಯ ಮಳಿಗೆಗಳು ಕನ್ನಡ ನಾಮಫಲಕ ಹಾಕಬೇಕೆನ್ನುವ ಕನ್ನಡಪರ ಸಂಘಟನೆಗಳ ಬೇಡಿಕೆ ಸರಿಯಿದೆ. ನ್ಯಾಯದ ಪರ ಧ್ವನಿ ಎತ್ತುವ ಯಾವುದೇ ಹೋರಾಟಗಳಿಗೆ ನಮ್ಮ ಸರ್ಕಾರದ ವಿರೋಧವಿಲ್ಲ. ಸಂಘಟನೆಗಳು ಶಾಂತಿಯುತ ಪ್ರತಿಭಟನೆಗಳನ್ನು ಮಾಡಬೇಕು. ಆದರೆ ಕಾನೂನನ್ನು ಉಲ್ಲಂಘಿಸುವ ಕೆಲಸ ನಡೆದರೆ, ಅಂತಹವರ ವಿರುದ್ಧ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಬೇರೆ ಭಾಷೆಯ ಬಗ್ಗೆ ನನಗಾಗಲೀ, ನಮ್ಮ ಸರ್ಕಾರಕ್ಕಾಗಲೀ ವಿರೋಧವಿಲ್ಲ, ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು. ಇದು ನಮ್ಮ ನೆಲದ ನಿಯಮ. ಎಲ್ಲರೂ ಇದನ್ನು ಪಾಲಿಸಬೇಕು ಎಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!