spot_img
Tuesday, April 21, 2026
spot_img

ಶೌಚಾಲಯ ಶುಚಿಗೊಳಿಸಿರುವ ಪ್ರಕರಣ : ಮಧು ಬಂಗಾರಪ್ಪನವರೇ ಇಷ್ಟೆಲ್ಲಾ ಅವಾಂತರಗಳು ನಡೆದರೂ ತಮ್ಮ ಮೌನದ ನಿಗೂಡಾರ್ಥವೇನು ? : ಬಿಜೆಪಿ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಬಡವರ ಮಕ್ಕಳಿಂದ ಶಾಲಾ ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವುದೇ ರಾಜ್ಯದ ರಾಜ್ಯ ಕಾಂಗ್ರೆಸ್ ಸರ್ಕಾರದ ಏಳು ತಿಂಗಳ ಮಹಾನ್ ಸಾಧನೆ ಎಂದು ವಿರೋಧ ಪಕ್ಷ ಬಿಜೆಪಿಯನ್ನು ಆಡಳಿತರೂಢ ಕಾಂಗ್ರೆಸ್ ತಿವಿದಿದೆ.

ಶಾಲಾ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಮೀಸಲಾಗಿರುವ ನಿಧಿಯನ್ನು ತಿಂದು ತೇಗಿರುವ ಕಾಂಗ್ರೆಸ್ ಸರ್ಕಾರ, ಈಗ ಶಾಲೆಗೆ ಬರುವ ಬಡವರ ಮಕ್ಕಳಿಂದ ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಆರೋಪಿಸಿದೆ.

ಮಾತ್ರವಲ್ಲದೇ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಪ್ರಶ್ನಿಸಿದ ಬಿಜೆಪಿ, ಮಧು ಬಂಗಾರಪ್ಪನವರೇ, ಶಾಲಾ ಶೌಚಾಲಯಗಳನ್ನು ಮಕ್ಕಳೇ ಸ್ವಚ್ಛಗೊಳಿಸುತ್ತಿರುವ ಮೂರನೇ ಪ್ರಕರಣ ಬೆಳಕಿಗೆ ಬಂದಿದೆ. ಇಷ್ಟೆಲ್ಲಾ ಅವಾಂತರಗಳು ನಡೆದರೂ ತಮ್ಮ ಮೌನದ ನಿಗೂಡಾರ್ಥವೇನು..? ಎಂದು ಪ್ರಶ್ನೆ ಮಾಡಿದೆ.

ಶಿವಮೊಗ್ಗದಲ್ಲಿ ಶಾಲಾ ಶೌಚಾಲಯ ಶುಚಿಗೊಳಿಸಿರುವ ಪ್ರಕರಣ ಮುನ್ನೆಲೆಗೆ ಬಂದಿದೆ. ಶಿಕ್ಷಣ ಸಚಿವರ ತವರು ಭದ್ರಾವತಿಯ ನೇರಲೆಕೆರೆ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶಾಚಾಲಯ ಶುಚಿಗೊಳಿಸಿರುವ ಪ್ರಕರಣ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಿಕ್ಷಣ ಸಚಿವರನ್ನು ತರಾಟೆಗೆ ತೆಗೆದುಕೊಂಡಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!