Sunday, September 8, 2024

ಲೋಕಸಭಾ ಚುನಾವಣೆ : ಮಹಾರಾಷ್ಟ್ರದ  23 ಕ್ಷೇತ್ರಗಳನ್ನು ಬಿಟ್ಟುಕೊಡಿ ಎಂಬ ಉದ್ಧವ್‌ ಬಣದ ಬೇಡಿಕೆಯನ್ನು ತಿರಸ್ಕರಿಸಿದ ಕಾಂಗ್ರೆಸ್‌ !

ಜನಪ್ರತಿನಿಧಿ ವಾರ್ತೆ(ಮಹಾರಾಷ್ಟ್ರ) : ಬರುವ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದಲ್ಲಿ 23 ಕ್ಷೇತ್ರಗಳನ್ನು ತನಗೆ ನೀಡಬೇಕು ಎಂಬ ಮಿತ್ರಪಕ್ಷ ಶಿವಸೇನೆಯ (ಯುಬಿಟಿ) ಬೇಡಿಕೆಯನ್ನು ಕಾಂಗ್ರೆಸ್ ತಿರಸ್ಕರಿಸಿದೆ. ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರ ವಿಕಾಸ್ ಅಘಾಡಿ ಪಾಲುದಾರರಾದ ಶಿವಸೇನೆ (ಯುಬಿಟಿ), ಕಾಂಗ್ರೆಸ್ ಮತ್ತು ಎನ್‌ಸಿಪಿ ನಡುವೆ ಸೀಟು ಹಂಚಿಕೆ ಕುರಿತು ನಡೆದ ಸಭೆಯ ನಂತರ ಈ ಬೆಳವಣಿಗೆ ನಡೆದಿದೆ.

ಶಿವಸೇನೆಯು ಎರಡು ಬಣಗಳಾಗಿ ಒಡೆದು, ಬಹುಪಾಲು ಸದಸ್ಯರು ಏಕನಾಥ್ ಶಿಂಧೆಯವರ ಪರ ನಿಂತರೂ, ಮಹಾರಾಷ್ಟ್ರದ 48 ಲೋಕಸಭಾ ಕ್ಷೇತ್ರಗಳ ಪೈಕಿ 23 ಕ್ಷೇತ್ರಗಳಿಗೆ ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನಾ ಬಣ  ಬೇಡಿಕೆ ಇಟ್ಟಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ  ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್,  ಶಿವಸೇನೆ ಇಬ್ಭಾಗವಾದ ಮೇಲೆ ಸಾಕಷ್ಟು ಅಭ್ಯರ್ಥಿಗಳ ಕೊರತೆಯನ್ನು ಶಿವಸೇನೆಯ ಉದ್ಧವ್ ಠಾಕ್ರೆ ಬಣವು ದೊಡ್ಡ ಸವಾಲನ್ನು ಎದುರಿಸುತ್ತಿದೆ, ಇಂತಹ ಸಂದರ್ಭದಲ್ಲಿ ದೊಡ್ಡ ಸಂಖ್ಯೆಯ ಸೀಟು ಹಂಚಿಕೆಗೆ ಬೇಡಿಕೆ ಇಡುತ್ತಿರುವುದು ಸರಿ ಕಾಣಿಸುತ್ತಿಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. 

ಇನ್ನು, ಮಾಜಿ ಮುಖ್ಯಮಂತ್ರಿ ಮತ್ತು ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಚವ್ಹಾಣ್‌ ಪ್ರತಿಕ್ರಿಯಿಸಿ, ಪಕ್ಷಗಳ ನಡುವೆ ಹೊಂದಾಣಿಕೆಯ ಅಗತ್ಯವಿದೆ. “ಪ್ರತಿ ಪಕ್ಷಗಳು ಹೆಚ್ಚಿನ ಕ್ಷೇತ್ರಗಳನ್ನು ಬಯಸುತ್ತಿರುವಾಗ, ಶಿವಸೇನೆಯ 23 ಕ್ಷೇತ್ರಗಳ ಬೇಡಿಕೆ ನೀಡುತ್ತಿರುವುದು ಪ್ರಸ್ತುತ ಪರಿಸ್ಥಿತಿಗಳನ್ನು ಗಮನಿಸಿದರೆ ಕಷ್ಟವಿದೆ” ಎಂದು ಅವರು ಹೇಳಿದ್ಧಾರೆ.

ಇತ್ತೀಚೆಗೆ ನಡೆದ ʼಇಂಡಿಯಾʼ ಮೈತ್ರಿಕೂಟದ ಸಭೆಗೂ ಮುಂಚಿತವಾಗಿ ಕಳೆದ ವಾರ, ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವುತ್ ಅವರು ಪಕ್ಷದ ನಾಯಕರಾದ ಉದ್ಧವ್ ಠಾಕ್ರೆ ಮತ್ತು ಆದಿತ್ಯ ಠಾಕ್ರೆ ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರೊಂದಿಗೆ ಸೀಟು ಹಂಚಿಕೆಯ ಬಗ್ಗೆ ಚರ್ಚೆ ನಡೆಸಿದ್ದರು.

2019ರಲ್ಲಿ ಅವಿಭಜಿತ ಶಿವಸೇನೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಭಾಗವಾಗಿತ್ತು. ಉದ್ಧವ್ ಠಾಕ್ರೆ ನೇತೃತ್ವದ ಪಕ್ಷವು ಈಗ ಕಾಂಗ್ರೆಸ್ ಮತ್ತು ಎನ್‌ಸಿಪಿಯನ್ನು ಒಳಗೊಂಡಿರುವ ಎಂವಿಎಯ ಭಾಗವಾಗಿದೆ.

ಜೂನ್ 2022 ರಲ್ಲಿ, ಏಕನಾಥ್ ಶಿಂಧೆ ಮತ್ತು ಇತರ 40 ಶಾಸಕರು ಉದ್ಧವ್‌ ಠಾಕ್ರೆ ನಾಯಕತ್ವದ ವಿರುದ್ಧ ಬಂಡಾಯವೆದ್ದಿದ್ದರು. ಇದು ಶಿವಸೇನೆ ಇಬ್ಭಾಗವಾಗುವುದಕ್ಕೆ ಮೂಲ ಕಾರಣವಾಗಿತ್ತು. ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (MVA) ಸರ್ಕಾರದ ಪತನಕ್ಕೆ ಕಾರಣವಾಗಿತ್ತು. ತದನಂತರ ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ  ಏಕನಾಥ್‌ ಶಿಂಧೆ ನೇತೃತ್ವದ ಶಿವಸೇನಾ ಬಣ ಮೈತ್ರಿಯಾಗಿ ಸರ್ಕಾರ ರಚಿಸಿತ್ತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!