spot_img
Tuesday, April 21, 2026
spot_img

ನರೇಂದ್ರ ಮೋದಿಯವರನ್ನು ʼಹಿಂದೂ ಹೃದಯ ಸಾಮ್ರಾಟ್ʼ ಎಂದು ಅಧಿಕೃತವಾಗಿ ರಾಷ್ಟ್ರಕ್ಕೆ ಒಪ್ಪಿಸುವ ಪ್ರಯತ್ನದಲ್ಲಿದೆ : ಶಶಿ ತರೂರ್‌

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : ಮುಂದಿನ ವರ್ಷ ಫೆಬ್ರವರಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್‌ನ ರಾಜಧಾನಿ ಅಬುಧಾಬಿಯಲ್ಲಿ ಹಿಂದೂ ದೇವಾಲಯವೊಂದನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನ  ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರವನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಫೆಬ್ರವರಿಯಲ್ಲಿ ಅಬುಧಾಬಿಯಲ್ಲಿ ಹಿಂದೂ ದೇವಸ್ಥಾನವೊಂದನ್ನು ಉದ್ಘಾಟಿಸಲಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇವೆಲ್ಲವನ್ನು ವ್ಯವಸ್ಥಿತವಾಗಿ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಮೈಕ್ರೋ ಬ್ಲಾಹಿಂಗ್‌ ʼಎಕ್ಸ್‌ʼ ನಲ್ಲಿ ತರೂರ್ ಇಂಡಿಯಾ ಟುಡೇ ವರದಿಯನ್ನು ಉಲ್ಲೇಖಿಸಿ, ಅಬುಧಾಬಿಯಲ್ಲಿ ದೇವಾಲಯವನ್ನು ಉದ್ಘಾಟಿಸುವ ಆಹ್ವಾನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ವೀಕರಿಸಿದ್ದಾರೆ ಎಂದು ದೃಢಪಡಿಸಿದರು ಮತ್ತು 2024 ರ ಲೋಕಸಭೆ ಚುನಾವಣೆಯನ್ನು “ಹಿಂದುತ್ವ ವರ್ಸಸ್ ಜನಪ್ರಿಯ ಕಲ್ಯಾಣವಾಗಿ ರೂಪುಗೊಳಿಸಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

“ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಮತ್ತು ಫೆಬ್ರವರಿ 14 ರಂದು ಅಬುಧಾಬಿಯಲ್ಲಿ BAPS ಹಿಂದೂ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. ಅದರ ನಂತರ ಶೀಘ್ರದಲ್ಲೇ ಚುನಾವಣೆಗಳನ್ನು ಘೋಷಿಸಬಹುದು ಎಂದು ನಾನು ನಿರೀಕ್ಷಿಸುತ್ತೇನೆ” ಎಂದು ತರೂರ್ ಹೇಳಿದ್ದಾರೆ.

“ಇದರ ಹಿಂದೆ ಸಂದೇಶ ಸ್ಪಷ್ಟವಾಗಿದೆ. 2009 ರಲ್ಲಿ, ಎಲ್ಲಾ ಭಾರತೀಯರಿಗೆ ಗುಜರಾತ್‌ ಮಾದರಿ ದೇಶದವನ್ನು ಸೆಳೆಯಿತು, ಆರ್ಥಿಕ ಅಭಿವೃದ್ಧಿಯ ಅವತಾರವಾಗಿ ಭಾರತೀಯ ಮತದಾರರಿಗೆ ಮೋದಿಯನ್ನು ಮುಂದಿಡಲಾಯಿತು. 2019 ರಲ್ಲಿ, ಆ ನಿರೂಪಣೆಯ ಹಿನ್ನೆಲೆಯಲ್ಲಿ ಕುಸಿಯಿತು.  ನೋಟು ಅಮಾನ್ಯೀಕರಣ, ಪುಲ್ವಾಮಾ ಭಯೋತ್ಪಾದಕ ದಾಳಿಯು ಮೋದಿಯವರಿಗೆ ಸಾರ್ವತ್ರಿಕ ಚುನಾವಣೆಯನ್ನು ರಾಷ್ಟ್ರೀಯ ಭದ್ರತಾ ಚುನಾವಣೆಯನ್ನಾಗಿ ಪರಿವರ್ತಿಸುವ ಅವಕಾಶವನ್ನು ನೀಡಿತು” ಎಂದು ಅವರು ಹೇಳಿದ್ದಾರೆ.

“2024 ರಲ್ಲಿ, ಬಿಜೆಪಿ ಈಗ ತನ್ನ ಪ್ರಮುಖ ಸಂದೇಶ ನೀಡುವುದಕ್ಕೆ ಪ್ರಯತ್ನಿಸುತ್ತಿದೆ ಮತ್ತು ನರೇಂದ್ರ ಮೋದಿಯವರನ್ನು ಹಿಂದೂ ಹೃದಯ ಸಾಮ್ರಾಟ್ ಎಂದು ಅಧಿಕೃತವಾಗಿ ರಾಷ್ಟ್ರಕ್ಕೆ ಒಪ್ಪಿಸುವ ಪ್ರಯತ್ನದಲ್ಲಿದೆ ಎಂಬುದು ಸ್ಪಷ್ಟವಾಗಿದೆ” ಎಂದು ತರೂರ್ ಹೇಳಿದ್ದಾರೆ.

“ಇದೆಲ್ಲವೂ ಅನೇಕ ಪ್ರಶ್ನೆಗಳನ್ನು ಕೇಳುತ್ತವೆ: ಅಚ್ಚೇ ದಿನ್ ಏನಾಯಿತು? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಭರವಸೆ ಏನಾಯಿತು? ಆರ್ಥಿಕ ಬೆಳವಣಿಗೆಗೆ ಏನಾಯಿತು? ಪ್ರತಿಯೊಬ್ಬ ಭಾರತೀಯನ ಬ್ಯಾಂಕ್ ಖಾತೆಗಳು? ಈ ಪ್ರಶ್ನೆಗಳು ಹಿಂದುತ್ವ ಮತ್ತು ಜನಕಲ್ಯಾಣವಾಗಿ ರೂಪುಗೊಳ್ಳುವ ಚುನಾವಣೆಯಲ್ಲಿ ಚರ್ಚೆಯಾಗಬೇಕು” ಎಂದು ಅವರು ಹೇಳಿದರು.

ಸ್ವಾಮಿ ಈಶ್ವರಚರಣದಾಸ್ ಮತ್ತು ಸ್ವಾಮಿ ಬ್ರಹ್ಮವಿಹಾರಿದಾಸ್ ನೇತೃತ್ವದ BAPS ಸಂಘಟನೆಯ ಪ್ರತಿನಿಧಿಗಳು ನವದೆಹಲಿಯ  ಪ್ರಧಾನಿ ಅವರ ನಿವಾಸದಲ್ಲಿ ಪ್ರಧಾನ ಮಂತ್ರಿಯನ್ನು ಭೇಟಿಯಾಗಿ ಫೆಬ್ರವರಿ 14 ರಂದು ಉದ್ಘಾಟನೆಗೆ ಆಹ್ವಾನವನ್ನು ನೀಡಿದರು ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಈ ವರದಿಯನ್ನು ಉಲ್ಲೇಖಿಸಿ ತರೂರ್‌ ಪ್ರಧಾನಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಯೋಧ್ಯೆಯ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭದ ಮೊದಲು, ಪ್ರಧಾನಿ ಮೋದಿ ಅವರು ಡಿಸೆಂಬರ್ 30 ರಂದು ನಗರದಲ್ಲಿ ವಿಮಾನ ನಿಲ್ದಾಣ ಮತ್ತು ಪುನರಾಭಿವೃದ್ಧಿಗೊಳಿಸಿದ ರೈಲ್ವೆ ನಿಲ್ದಾಣ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಎರಡು ಹೊಸ ಅಮೃತ್ ಭಾರತ್ ಮತ್ತು ಆರು ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ.

“ರಾಮಾಯಣ” ಮಹಾಕಾವ್ಯವನ್ನು ಕವಿ ವಿಮಾನ ನಿಲ್ದಾಣಕ್ಕೆ “ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣʼ ಎಂದು ನವೀಕರಣಗೊಳಿಸಿದ  ರೈಲು ನಿಲ್ದಾಣಕ್ಕೆ ʼಅಯೋಧ್ಯಾ ಧಾಮ” ಎಂದು ಮರುನಾಮಕರಣ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!