spot_img
Sunday, April 19, 2026
spot_img

ತಮ್ಮದು ಸೋಗಲಾಡಿತನದ ದಲಿತಪ್ರೇಮ ಎಂಬುದನ್ನು ಸಿದ್ದರಾಮಯ್ಯ ಸಾಬೀತು ಮಾಡಿದ್ದಾರೆ : ಬಿಜೆಪಿ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಜಾತ್ಯಾತೀತ ಎಂದರೆ ಆಡಳಿತದಲ್ಲಿ ಧರ್ಮ ನಿರಪೇಕ್ಷತೆ. ಆದರೆ ಸಿದ್ದರಾಮಯ್ಯ ಅವರು ಹಿಂದುತ್ವದ ಅವಹೇಳನ ಮತ್ತು ಅಲ್ಪಸಂಖ್ಯಾತರ ಓಲೈಕೆಯನ್ನೇ ಜಾತ್ಯಾತೀತ ಎಂದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರ ವಿರುದ್ಧ ವಿರೋಧ ಪಕ್ಷ ಬಿಜೆಪಿ ಹರಿಹಾಯ್ದಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಅಲ್ಪ ಸಂಖ್ಯಾತರ ಕಲ್ಯಾಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿರುವುದನ್ನು ಉಲ್ಲೇಖಿಸಿದ ಬಿಜೆಪಿ, ದಲಿತರ ಶ್ರೇಯೋಭಿವೃದ್ಧಿಗೆ ಮೀಸಲಿದ್ದ ಹಣವನ್ನೂ ಒಂದು ಸಮುದಾಯದ ತುಷ್ಟೀಕರಣಕ್ಕೆ ಬಳಸಿಕೊಳ್ಳುತ್ತಿರುವುದು ದಲಿತ ವರ್ಗಕ್ಕೆ ಸಿದ್ದರಾಮಯ್ಯರವರು ಮಾಡುತ್ತಿರುವ ಘನಘೋರ ಅನ್ಯಾಯ ಎಂದು ಟೀಕಿಸಿದೆ.

ಇನ್ನು, ಬರದಿಂದ ತತ್ತರಿಸಿ, ಅಭಿವೃದ್ಧಿ ಸಂಪೂರ್ಣ ಕುಂಠಿತವಾಗಿರುವ ಈ ಸಂದರ್ಭದಲ್ಲೂ ಸಾವಿರ ಕೋಟಿ ಬಿಡುಗಡೆ ಮಾಡಿರುವುದಲ್ಲದೇ, ಒಟ್ಟು ₹10,000 ಕೋಟಿ ದಲಿತರ ಹಣವನ್ನು ಇದಕ್ಕಾಗಿ ಮೀಸಲಿಟ್ಟು ತಮ್ಮದು ಸೋಗಲಾಡಿತನದ ದಲಿತಪ್ರೇಮ ಎಂಬುದನ್ನು ಸಾಬೀತು ಮಾಡಿದ್ದಾರೆ ಎಂದಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!