Sunday, September 8, 2024

ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ !

ಜನಪ್ರತಿನಿಧಿ ವಾರ್ತೆ (ಅಯೋಧ್ಯೆ) :  ಪುನರ್‌ ನವೀಕರಣಗೊಂಡ ಅಯೋಧ್ಯೆ ರೈಲು ನಿಲ್ದಾಣವನ್ನು ಉದ್ಘಾಟಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದಾರೆ.

ಕೇಂದ್ರ ಸಚಿವರಾದ ವಿಕೆ ಸಿಂಗ್, ಜ್ಯೋತಿರಾದಿತ್ಯ ಸಿಂಧಿಯಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಉದ್ಘಾಟನೆಗೂ ಮುನ್ನಾ, ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಅಧ್ಯಕ್ಷ ಸಂಜೀವ್ ಕುಮಾರ್  20 ತಿಂಗಳ ಅವಧಿಯಲ್ಲಿ ಈ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣದ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ನಡುವೆ ಮಾಧ್ಯಮಗಳಿಗೆ ಸ್ಪಂದಿಸಿದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಅಯೋಧ್ಯೆ ಭಾರತದ ಭೂಪಟದಲ್ಲಿ ಮಾತ್ರವಲ್ಲದೆ ವಿಶ್ವದ ಭೂಪಟಕ್ಕೆ ವಿಸ್ತರಿಸಿದೆ. ನೂತನ ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣ ಉದ್ಘಾಟನೆಗೊಂಡ ಇಂದಿನ ದಿನ ಐತಿಹಾಸಿಕವಾಗಿದೆ ಎಂದಿದ್ದಾರೆ.

ಭಾರತ ಆರ್ಥಿಕ ಮಹಾಶಕ್ತಿಯಾಗಿ ಮತ್ತು ಆಧ್ಯಾತ್ಮಿಕ ಕೇಂದ್ರವಾಗಿ ಹೊರಹೊಮ್ಮುತ್ತಿದೆ ಎಂದು ಅವರು ಹೇಳಿದ್ದಾರೆ.

ಇನ್ನು, ಉತ್ತರ ಪ್ರದೇಶಕ್ಕೆ 15,700 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸುತ್ತಿದ್ದು, ಇವುಗಳಲ್ಲಿ ಅಯೋಧ್ಯೆ ಹಾಗೂ ಅಲ್ಲಿನ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ಸುಮಾರು 11,100 ಕೋಟಿ ರೂಪಾಯಿಗಳ ಯೋಜನೆಗಳು ಹಾಗೂ ಉತ್ತರ ಪ್ರದೇಶದಾದ್ಯಂತ ಇತರ ಕಾಮಗಾರಿಗಳಿಗೆ ಸಂಬಂಧಿಸಿದ ಸುಮಾರು 4,600 ಕೋಟಿ ರೂಪಾಯಿಗಳ ಯೋಜನೆಗಳನ್ನೊಳಗೊಂಡಿವೆ.

ಅಯೋದ್ಯೆಯಲ್ಲಿ ಶ್ರೀರಾಮ ಮಂದಿರವು ನಿರ್ಮಾಣ ಹಂತದಲ್ಲಿದ್ದು, ಜನವರಿ 22 ರಂದು ಮಹಾಮಸ್ತಕಾಭಿಷೇಕ ಸಮಾರಂಭ ನಡೆಯಲಿದ್ದು, ಪ್ರಧಾನ ಮಂತ್ರಿಗಳು ಭಾಗವಹಿಸಲಿದ್ದಾರೆ.

ಕೆಲವು ದಿನಗಳ ಹಿಂದೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ನ ಸದಸ್ಯ ಚಂಪತ್‌ ರಾಯ್‌, ಶ್ರೀರಾಮನ ಮಂದಿರ ನಿರ್ಮಾಣ ಹಂತದಲ್ಲಿದ್ದು, ಮಂದಿರ ಪೂರ್ಣಗೊಳ್ಳುವುದಕ್ಕೆ ಇನ್ನೂ ಎರಡು ಮೂರು ವರ್ಷಗಳ ಕಾಲ ಬೇಕಾಗಬಹುದು ಎಂದು ಅವರು ಹೇಳಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!