spot_img
Sunday, June 14, 2026
spot_img

ಜನವರಿ ಕೊನೆಯ ವಾರದಲ್ಲಿ ಬೃಹತ್ ಉದ್ಯೋಗ ಮೇಳ, ಯಶಸ್ವಿ ಆಯೋಜನೆಗೆ ಸಚಿವರ ತಂಡ ರಚನೆಗೆ ನಿರ್ಧಾರ : ಸಿಎಂ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) :  ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಿದ್ದು, ಯಶಸ್ವಿ ಆಯೋಜನೆಗೆ ಸಚಿವರ ತಂಡವನ್ನು ರಚಿಸಲು ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಚಿವರಾದ ಎಂ.ಬಿ.ಪಾಟೀಲ, ಪ್ರಿಯಾಂಕ್‌ ಖರ್ಗೆ, ಡಾ. ಶರಣಪ್ರಕಾಶ ಪಾಟೀಲ, ಡಾ. ಎಂ.ಸಿ. ಸುಧಾಕರ್‌, ಬಿ. ನಾಗೇಂದ್ರ, ಸಂತೋಷ್‌ ಲಾಡ್‌ ಹಾಗೂ ದಿನೇಶ್‌ ಗುಂಡೂರಾವ್‌ ಅವರನ್ನೊಳಗೊಂಡ ಸಚಿವರ ತಂಡ ರಚಿಸಲು ಸೂಚಿಸಲಾಗಿದ್ದು, ಉದ್ಯೋಗ ಮೇಳವನ್ನು ವ್ಯವಸ್ಥಿತವಾಗಿ ಆಯೋಜಿಸುವುದು ಸಮಿತಿಯ ಪ್ರಮುಖ ಕಾರ್ಯವಾಗಿರಲಿದೆ ಎಂದು ಅವರು ಹೇಳಿದ್ದಾರೆ.

ಸಚಿವರ ತಂಡವು ಉದ್ಯೋಗದಾತ ಕಂಪನಿಯವರೊಂದಿಗೆ ಸಭೆ ನಡೆಸಿ ಚರ್ಚಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮವಹಿಸಲಿದೆ. ಜೊತೆಗೆ ಕೈಗಾರಿಕೆಗಳೊಂದಿಗೆ ಚರ್ಚಿಸಿ, ಉದ್ಯೋಗಾಕಾಂಕ್ಷಿಗಳ ಕೌಶಲ್ಯ ಹಾಗೂ ಕೈಗಾರಿಕೆಗಳ ಅಗತ್ಯತೆಯ ನಡುವಿನ ಅಂತರ ಸರಿಪಡಿಸುವ ಬಗ್ಗೆ ದೂರಗಾಮಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆ ಶಿಫಾರಸ್ಸು ಮಾಡುವಂತೆ ಮತ್ತು ವಿದೇಶದಲ್ಲಿರುವ ಉದ್ಯೋಗಾವಕಾಶಗಳ ಕುರಿತು ಪರಿಶೀಲನೆ ನಡೆಸಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!